ಸುದ್ದಿ

ಕಾರ್ಖಾನೆಯ ಕ್ಯಾಂಟೀನ್ ಊಟ ತಿಂದು 100ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥ..!

52

ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ.

ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು.

ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ. ತಕ್ಷಣ ಅವತನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಯಿತು. ನಂತರ ಇನ್ನುಳಿದ ಮಹಿಳೆಯರೂ ಕೂಡ ತೀವ್ರ ಅಸ್ವಸ್ಥಗೊಂಡಾಗ ಕೆಲವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಯಿತು.

ವೈದ್ಯರಾದಡ ಆ.ನವೀನ್, ಡಾ.ಗಣೇಶ್ ಬಾಬು ಪ್ರಥಮ ಚಿಕಿತ್ಸೆ ನೀಡಿ ಅಪಾಯದಿಂದ ಪಾರು ಮಾಡಿದರು. ನಂತರ ತಾಲ್ಲೂಕು ವೈದ್ಯಾಧಿಕಾರಿ ಕಾರ್ಖಾನೆಯ ಕ್ಯಾಂಟೀನ್ ಪರಿಶೀಲಿಸಿದಾಗ ಆಹಾರ ತಯಾರಿಕೆಗೆ ಕಲುಷಿತ ನೀರು ಬಳಸಿರುವುದೇ ಪ್ರಮುಖ ಕಾರಣವಾಗಿದ್ದು, ಕ್ಯಾಂಟೀನ್ ಸ್ವಚ್ಛತೆ ಹಾಗೂ ಸುರಕ್ಷತೆ ಇಲ್ಲದಿರುವುದು ಕಂಡುಬಂದಿತು.

ಈ ಸಂಬಂಧ ಕಾರ್ಖಾನೆ ಹಾಗೂ ಕ್ಯಾಂಟೀನ್ ಮಾಲೀಕರ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ವೈದ್ಯಾಧಿಕಾರಿಗಳ ಮಂದಿ ಬಂದ ನಂತರ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ರೋಗಗಳಿಗೆ ಎಳನೀರು ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ!

    ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ.  ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…

  • Health

    ಕಿತ್ತಳೆ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್‌ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…

  • ಹಣ ಕಾಸು

    1595ನೇ ಇಸವಿಯಲ್ಲಿ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ

    ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.

  • ಉಪಯುಕ್ತ ಮಾಹಿತಿ

    ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

    ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಸುದ್ದಿ

    ಬೆಂಗಳೂರಿನಲ್ಲಿ ದುಬಾರಿ ಬಡ್ಡಿಯನ್ನು ಪಡೆಯುತ್ತಿದ್ದ ಫೈನಾನ್ಸ್ ಗಳ ಮೇಲೆ ದಾಳಿ, 6 ಜನರ ಬಂಧನ

    ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…

  • ಕ್ರೀಡೆ

    ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

    ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.