ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು. ಅದೇ ರೀತಿ ಪಾದವನ್ನು ನೋಡಿ ವ್ಯಕ್ತಿತ್ವವನ್ನು ತಿಳಿಯುವ ಪದ್ಧತಿ ಭಾರತ ಮತ್ತು ಚೀನಾದಲ್ಲಿ ಬಹಳ ವರ್ಷಗಳಿಂದ ಇದೆ. ನಮ್ಮ ಪಾದಗಳು ನಮ್ಮ ದೇಹ ಮತ್ತು ವ್ಯಕ್ತಿತ್ವಕ್ಕೆ ಕನ್ನಡಿ ಇದ್ದ ಹಾಗೆ ಎಂದು ನಂಬಲಾಗಿದೆ. ಕಾಲಿಗೆ ಏನೇ ತೊಂದರೆ ಆದರೂ ಅದು ದೇಹದಲ್ಲಿ ಏನೋ ಆಗಿದೆ ಎಂಬುದಕ್ಕೆ ಸೂಚನೆ. ಪಾದದಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದರೆ ನೀವು ಖಂಡಿತ ಬೆನ್ನುನೋವಿನಿಂದ ನರಳುತ್ತಿದ್ದೀರಿ ಎಂದರ್ಥ. ಇದೇ ರೀತಿ ನಮ್ಮ ಮನಸ್ಸಿನ ಸ್ಥಿತಿಯನ್ನೂ , ವ್ಯಕ್ತಿತ್ವವನ್ನೂ ಪಾದ ನೋಡಿ ತಿಳಿದುಕೊಳ್ಳಬಹುದು
ಹೆಬ್ಬೆರಳು:-

ಉಳಿದ ಬೆರಳುಗಳಿಗಿಂತ ಹೆಬ್ಬರಳು ಉದ್ದವಾಗಿದ್ದರೆ ಇವರು ತುಂಬಾ ಸ್ಮಾರ್ಟ್, ಬುದ್ಧಿವಂತರು ಹಾಗೂ ಸೃಜನಶೀಲ ವ್ಯಕ್ತಿತ್ವ ವುಳ್ಳವರಾಗಿರುತ್ತಾರೆ. ಯಾವುದೇ ಸಮಸ್ಯೆ ಬರಲಿ ಹಾಗೆಯೇ ಪರಿಹರಿಸಿಕೊಳ್ಳುತ್ತಾರೆ. ಒಂದು ವೇಳೆ ಇದು ಉಳಿದ ಬೆರಳುಗಳಿಗಿಂತ ಚಿಕ್ಕದಾಗಿದ್ದರೆ ಇವರು ಮಲ್ಟಿಟಾಸ್ಕಿಂಗ್ ವ್ಯಕ್ತಿತ್ವವುಳ್ಳವರು. ಬೇರೆಯವರನ್ನು ಪ್ರಭಾವಿಸುವ ಗುಣವುಳ್ಳವರು.
ಎರಡನೇ ಬೆರಳು:-

ಎರಡನೇ ಬೆರಳು ಉದ್ದವಾಗಿದ್ದರೆ ಇವರಲ್ಲಿ ನಾಯಕತ್ವ ಗುಣಗಳಿರುತ್ತವೆ. ಇವರಲ್ಲಿ ಬಾಸಿಸಂ ಜಾಸ್ತಿ. ಒಂದು ವೇಳೆ ಉದ್ದವಾಗಿ ಇಲ್ಲದಿದ್ದರೆ ಸಾಮರಸ್ಯದ ಜೀವನ ನಡೆಸುತ್ತಾರೆ. ಹೊಂದಿಕೊಂಡು ಹೋಗುತ್ತಾರೆ.
ಮೂರನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರು ಕೆಲಸದಲ್ಲಿ ನಾವೀನ್ಯತೆ, ಸಂಪನ್ಮೂಲ ವ್ಯಕ್ತಿಯಾಗಿರುತ್ತಾರೆ. ತಮ್ಮ ಸಾಮರ್ಥ್ಯ ಮತ್ತು ದೃಢಸಂಕಲ್ಪದಿಂದ ಗುರಿ ತಲುಪುತ್ತಾರೆ.

ಆದರೆ ಇವರು ಕುಟುಂಬ ಮತ್ತು ಮನರಂಜನೆಗೆ ಅಷ್ಟಾಗಿ ಪ್ರಾಮುಖ್ಯತೆ ನೀಡಲ್ಲ. ಒಂದು ವೇಳೆ ಇದು ಕಿರಿದಾಗಿದ್ದರೆ ಜೀವನವನ್ನು ಎಂಜಾಯ್ ಮಾಡುತ್ತಾರೆ, ಕುಟುಂಬದ ಕಡೆಗೂ ಗಮನಹರಿಸುವವರಾಗಿತ್ತಾರೆ.
ನಾಲ್ಕನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರ ಮೊದಲ ಆದ್ಯತೆ ಕುಟುಂಬ. ಈ ಬೆರಳು ತುಂಬಾ ಬಗ್ಗಿದ್ದರೆ ನಿಮ್ಮ ಪ್ರೀತಿಪಾತ್ರರೊಂದಿಗೆ ಸುಖವಾಗಿ ಇರಲ್ಲ.

ಆದರೆ ಇವರು ಏನನ್ನೇ ಆಗಲಿ ಗಮನವಿಟ್ಟು ಕೇಳುತ್ತಾರೆ. ಒಂದು ವೇಳೆ ಈ ಬೆರಳು ಕಿರಿದಾಗಿದ್ದರೆ ಇವರು ಜೀವನದಲ್ಲಿ ಕುಟುಂಬ ಹೊರತಾಗಿ ಬೇರೆ ಏನೋ ಒತ್ತಡವನ್ನು ಎದುರಿಸುತ್ತಿರುತ್ತಾರೆ.
ಕಿರುಬೆರಳು:-
ಈ ಬೆರಳು ಚಿಕ್ಕದಾಗಿದ್ದರೆ ಇವರದು ಹುಡುಗಾಟಿಕೆ ವ್ಯಕ್ತಿತ್ವ. ಜವಾಬ್ದಾರಿಗಳಿಂದ ತುಂಬಾ ದೂರ ಇರುತ್ತಾರೆ. ಎಲ್ಲವನ್ನೂ ಹಗುರವಾಗಿ ತೆಗೆದುಕೊಳ್ಳುವವರು. ಈ ಕಿರುಬೆರಳನ್ನು ನಾಲ್ಕನೆ ಬೆರಳಿನಿಂದ ಅಂತರ ಕಾಪಾಡಿದರೆ ಸಾಕಷ್ಟು ಲಾಭಗಳಿವೆ. ಇದರಿಂದ ಹುಡುಗಾಟಿಕೆ ಎಲ್ಲವೂ ಹೋಗುತ್ತವೆ ಎನ್ನುತ್ತಾರೆ ರಿಫ್ಲೆಕ್ಸಾಲಜಿಸ್ಟ್‌ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್‍ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…