ಸುದ್ದಿ

ಕಿಚ್ಚನ ನಳಪಾಕ ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಸುದೀಪ್…!

27

‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ.

ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶೂಟಿಂಗ್ ಸೆಟ್ಟಿನಲ್ಲಿ ತಾವೇ ಕೈಯಾರೇ ತಮ್ಮ ಸಹ ಕಲಾವಿದರಿಗೆ ಹಾಗೂ ಚಿತ್ರ ತಂಡದ ಸದಸ್ಯರಿಗೆ ಮೊಟ್ಟೆ ದೋಸೆ ಮಾಡಿ ಕೊಡುತ್ತಿರುವ ವಿಡಿಯೋವನ್ನು ಅಪ್ಲೋಡ್ ಮಾಡಿ ಖುಷಿ ಪಟ್ಟಿದ್ದಾರೆ.

ಇನ್‍ಸ್ಟಾ ಪೋಸ್ಟ್‍ನಲ್ಲಿ, ಎಸ್‍ಎನ್‍ಆರ್(ಸೈರಾ ನರಸಿಂಹ ರೆಡ್ಡಿ) ಸಿನಿಮಾ ಶೂಟಿಂಗ್ ಸೆಟ್ಟಿನಲ್ಲಿ ಕಳೆದ ಮೋಜಿನ ಸಮಯ, ಸ್ಪೇಷಲ್ ಆಮ್ಲೆಟ್ ದೋಸೆ ಎಂದು ಬರೆದು ಎಸ್‍ಎನ್‍ಆರ್ ಎಂದು ಹ್ಯಾಷ್‍ಟ್ಯಾಗ್ ಹಾಕಿ, ದೋಸೆ ಮಾಡುತ್ತಿರುವ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ವಿಡಿಯೋದಲ್ಲಿ ಸುದೀಪ್ ದೋಸೆ ಮಾಡಿ ಕೊಡುತ್ತಿದ್ದರೆ, ಸಾಲಾಗಿ ಸಿನಿಮಾ ತಂಡದ ಸದಸ್ಯರು, ಕಲಾವಿದರು ಪ್ಲೇಟ್‍ನಲ್ಲಿ ದೋಸೆ ಹಾಕಿಸಿಕೊಂಡು ಸವಿಯುತ್ತಿರುವ ದೃಶ್ಯ ಸೆರೆಯಾಗಿದೆ.

ಈ ವಿಶೇಷ ಪೋಸ್ಟ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದು, ಶೂಟಿಂಗ್ ಸೆಟ್ಟಿನಲ್ಲಿ ಸೌಟು ಹಿಡಿದ ಕಿಚ್ಚನ ಸರಳತನಕ್ಕೆ ಮನಸೋತಿದ್ದಾರೆ. ಈವರೆಗೂ ಈ ವಿಡಿಯೋ ಸುಮಾರು 1 ಲಕ್ಷಕ್ಕೂ ಅಧಿಕ ಬಾರಿ ವಿಕ್ಷಣೆಯಾಗಿದ್ದು, ಸಾಕಷ್ಟು ಮಂದಿ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರಿ ಯೋಜನೆಗಳು

    ನಿಮ್ಮ ಮನೆಗೆ ಬರ್ತಾ ಇದೆ ಉಚಿತ ಅನಿಲ ಭಾಗ್ಯ..!ನಿಮ್ಗೆ ಉಚಿತ ಸಿಲಿಂಡರ್,ಸ್ಟವ್ ಬೇಕಂದ್ರೆ ಮುಂದೆ ಓದಿ…

    ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್‌ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.

  • KOLAR NEWS PAPER

    ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-2023

    ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…

  • ಆರೋಗ್ಯ

    ಕಪ್ಪು ಉಪ್ಪಿನ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮ್ಗೆಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.

  • ಸಿನಿಮಾ

    ತೆಲುಗಿನ ಅಕ್ಕಿನೇನಿಗೆ ಜೋಡಿಯಾಗಿ ಕಿರಿಕ್ ಬೆಡಗಿ..!ತಿಳಿಯಲು ಈ ಲೇಖನ ಓದಿ..

    ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್‍ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.

  • ಸಿನಿಮಾ, ಸುದ್ದಿ

    ಕಿಚ್ಚ ಸುದೀಪ್ ಗೆ ಪತ್ನಿಯಿಂದಲೇ ಧಮ್ಕಿ, ಪತ್ನಿಗೆ ಹೆದರಿ ಹನ್ನೊಂದು ಬಾರಿ ಒಂದೇ ಸಿನಿಮಾ ನೋಡಿದ ಕಿಚ್ಚ.!

    ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ‌ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…