ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ, ನಟಿ ಸಂಯುಕ್ತ ಹೆಗಡೆ ಮನೆಗೆ ಬಂದು ಇನ್ನೂ 15 ದಿನಗಳೂ ಕಳೆದಿಲ್ಲ ಆಗಲೇ ಸಹಸ್ಪರ್ಧಿ ಮೇಲೆ ಹಲ್ಲೆ ಮಾಡಿ ಶೋನಿಂದ ಕಿಕ್ ಔಟ್ ಆಗಿದ್ದಾರೆ. ಪ್ರತಿ ದಿನದ ಟಾಸ್ಕ್ ನಂತೆ ಬುಧವಾರ ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಲಾಗಿತ್ತು.
ಅದರಂತೆ ಮಹಿಳಾ ತಂಡ ಹಾಗೂ ಪುರುಷ ತಂಡದ ಸ್ಪರ್ಧಿಗಳಿಗೆ ದಾರ ಕಟ್ಟಿದ ಗೋಪುರವನ್ನು ನೀಡಲಾಗಿತ್ತು. ಪುರುಷ ಸ್ಪರ್ಧಿಗಳು ಮಹಿಳಾ ಸ್ಪರ್ಧಿಗಳ ಬಳಿ ಇರುವ ಗೋಪುರದ ದಾರವನ್ನು ಕತ್ತರಿಯಿಂದ ಕತ್ತರಿಸಬೇಕಿತ್ತು. ಈ ವೇಳೆ ತನ್ನನ್ನು ಸಮೀರ್ ಆಚಾರ್ಯ ಮುಟ್ಟಿದ್ರು ಅಂತ ಸಂಯುಕ್ತ ಅವರ ಮೇಲೆ ಕೈ ಮಾಡಿದ್ದಾರೆ. ಅಲ್ಲದೆ ಎರಡುಬಾರಿ ಅವರಿಗೆ ಹೊಡೆದಿದ್ದಾರೆ. ಈ ಕಾರಣದಿಂದ ಟಾಸ್ಕ್ ಅರ್ಧಕ್ಕೆ ನಿಂತಿತು.
ಈ ವೇಳೆ ಇಬ್ಬರನ್ನು ಕನ್ಫೆಶನ್ ರೂಮ್ ಗೆ ಕರೆದ ಬಿಗ್‍ಬಾಸ್ ಸಮೀರ್ ಮತ್ತು ಸಂಯುಕ್ತಾ ಹೇಳಿಕೆಯನ್ನು ಪಡೆದರು. ಕಡೆಗೆ ಸಂಯುಕ್ತಾ ಭಾವಾವೇಷದಿಂದ ಸಮೀರ್ ಮೇಲೆ ಕೈ ಮಾಡಿದ್ದಾರೆಂದು ಹೊರ ಹೋಗುವಂತೆ ಆದೇಶಿದರು.
ಮನೆಯಿಂದ ಹೊರ ಹೋಗುವ ಮುನ್ನ ಸಂಯುಕ್ತಾ ಸಮೀರ್ ಬಳಿ ಕ್ಷಮೆ ಕೇಳಿದರು. ಸಮೀರ್ ಕೂಡಾ ಸಂಯುಕ್ತಾರನ್ನು ಉದ್ದೇಶಿಸಿ ಇನ್ನೊಮ್ಮೆ ಯಾರ ಬಳಿಯೂ ಹೀಗೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿ ಸಂಯುಕ್ತಾರನ್ನು ಮನೆಯಿಂದ ಬೀಳ್ಕೊಟ್ಟರು.
ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ಪ್ರತಿಕ್ರಿಯೆ:-
ಸಂಯುಕ್ತಾ ಬಿಗ್ ಬಾಸ್ ಮನೆಯಲ್ಲಿ ಸಮೀರ್ ಆಚಾರ್ಯರಿಗೆ ಕಪಾಳಕ್ಕೆ ಹೊಡೆದಿರುವ ವಿಚಾರ ನನ್ನ ಗಮನಕ್ಕೆ ಬಂತು. ಬಿಗ್ ಬಾಸ್ ಜೀವನದ ಪಾಠವನ್ನು ಕಲಿಸುತ್ತದೆ. ಹೇಗಂದ್ರೆ ನಾವು ಅಲ್ಲಿದ್ದಾಗ ನಮ್ಮ ತಂಡದ ಮೇಲೆ ಅಭಿಮಾನ ಪ್ರೀತಿ ಹುಟ್ಟಿಕೊಳ್ಳುತ್ತದೆ. ಸಂಯುಕ್ತಾ ಹೆಗಡೆ ತಾವು ಥ್ರಿಲ್ಲರ್ ಮಂಜು ತಂಗಿ ತರನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಸಮೀರ್ ಅವರ ಮೇಲೆ ಕೈ ಮಾಡಿದ್ದು ನನಗ್ಯಾಕೋ ಅದು ಸರಿ ಅನ್ನಿಸುತ್ತಿಲ್ಲ ಅಂತಾ ಪ್ರಥಮ್ ತಿಳಿಸಿದ್ದಾರೆ.
ಸಮೀರ್ ಆಚಾರ್ಯ ಹೊರಗಡೆ ಅಡುಗೆ ಮಾಡಿಕೊಂಡು ತುಂಬಾ ಶಿಸ್ತಿನಿಂದ ಆ ಮನೆಯಲ್ಲಿದ್ದಾರೆ. ಸಮೀರ್ ಅವ್ರಿಗೆ ಮದುವೆಯಾಗಿದ್ದು, ಅಂತಹ ದೊಡ್ಡ ವ್ಯಕ್ತಿಯ ಮೇಲೆ ಚಿಕ್ಕ ಹುಡುಗಿ ಸಂಯುಕ್ತಾ ತುಂಬಾ ಆತುರ ಮಾಡಿಕೊಂಡರೇನೋ ಅಂತಾ ಅನ್ನಿಸಿತು. ಜನರು ಸಂಯುಕ್ತಾರನ್ನು ಕ್ಷಮಿಸುವ ದೊಡ್ಡ ಮನಸ್ಸು ಮಾಡಬೇಕು ಎಂದು ನಾನು ಕೇಳಿಕೊಳ್ಳುತ್ತೇನೆ ಅಂತಾ ಪ್ರಥಮ್ ಮನವಿ ಮಾಡಿಕೊಂಡರು.
ಕಿರಿಕ್ ರಾಣಿಯ ಕಿರಿಕ್ ಇದೇ ಮೊದಲಲ್ಲ…
ಬಿಗ್ ಬಾಸ್ ಮನೆ ಪ್ರವೇಶಕ್ಕೂ ಮುನ್ನ ತಮ್ಮ ಅಭಿನಯದ ಕಾಲೇಜ್ ಕುಮಾರ್ ಚಿತ್ರಕ್ಕೆ ಸಂಬಂಧಿಸಿದಂತೆಯೂ ನಿರ್ಮಾಪಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಂಯುಕ್ತ ಚಿತ್ರದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಎಂದು ನಿರ್ಮಾಪಕರು ದೂರಿದ್ದರು. ಇದೀಗ ಮತ್ತೊಮ್ಮೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಶೋಯಿಂದ ಹೊರ ನಡೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…