ರಾಜಕೀಯ

ಕುತೂಹಲ ಕೆರಳಿಸಿದ ಯಲಹಂಕ ವಿಧಾನಸಭಾ ಕ್ಷೇತ್ರ..!ಯಾಕೆ ಏನು ತಿಳಿಯಲು ಈ ಲೇಖನ ಓದಿ….

524

ಯಲಹಂಕ ಸಾಂಪ್ರದಾಯಿಕ ಸಿರಿಯನ್ನು ಹೊಂದಿರುವ ಕ್ಷೇತ್ರ. ಈ ಹಿಂದೆ 2008ರ ನಂತರ ಇಂದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ.

ಇನ್ನು ರಾಜಕೀಯ ವಲಯದಲ್ಲಿ ಪ್ರಬಲ ಪೈಪೋಟಿ ನೀಡುವಂತಹ ಭಾರೀ ಕುಳಗಳು ಇಲ್ಲಿದ್ದು , ಪ್ರಸ್ತುತ ನಡೆಯಲಿರುವ 2018ರ ವಿಧಾನಸಭಾ ಚುನಾವಣೆ ಭಾರೀ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಗೊಂಡ ನಂತರ ಇಲ್ಲಿ ಪ್ರತಿಷ್ಠಿತ ಬಹು ರಾಷ್ಟ್ರೀಯ ಕಂಪೆನಿಗಳುಹಾಗು ವಿದೇಶಿಯರು ಗುರುತಿಸುವ ಕ್ಷೇತ್ರವಾಗಿ ಮಾರ್ಪಟ್ಟಿದೆ.

ಇನ್ನು ಕಾರ್ಮಿಕ ವಲಯದಲ್ಲಿ ಗುರುತಿಸಿಕೊಂಡು ಜನಸಾಮಾನ್ಯರಿಗೆ ಹತ್ತಿರವಾಗಿದ್ದ ಎಸ್.ಆರ್.ವಿಶ್ವನಾಥ್ ಅವರು 2008 ಮತ್ತು 2013ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾದ ಮೇಲೆ ಇದೊಂದು ಕಮಲ ಪಾಳಯದ ಪ್ರಬಲ ಪಡೆಯನ್ನೇ ಸೃಷ್ಟಿಸಿದೆ.

ಎಸ್.ಆರ್.ವಿಶ್ವನಾಥ್ ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ನಿಶ್ಚಿತ. ಅವರು ಹ್ಯಾಟ್ರಿಕ್ ಜಯದ ಹುಮ್ಮಸ್ಸಿನಲ್ಲಿದ್ದಾರೆ. ಆದರೆ ಪ್ರಸ್ತುತ ಸನ್ನಿವೇಶದಲ್ಲಿ ಇಲ್ಲಿ ಕಾಂಗ್ರೆಸ್ ಕೂಡ ಪ್ರಬಲ ಪೈಪೋಟಿ ನೀಡುವ ಮುನ್ಸೂಚನೆ ನೀಡಿರುವುದರಿಂದ ಮತ್ತು ಗ್ರಾಮೀಣ ಪ್ರದೇಶಗಳ ಹಳೆ ಸೊಗಡು ಹೊಂದಿರುವ ಹಲವು ಕಡೆಗಳಲ್ಲಿ ಜೆಡಿಎಸ್ ಕೂಡ ತನ್ನ ಓಟ್ ಬ್ಯಾಂಕ್ ಅನ್ನು ಗಟ್ಟಿಗೊಳಿಸಿದೆ.

ಇನ್ನು ವಿಶೇಷ ಎಂದರೆ ಚಲನಚಿತ್ರ ನಟ ಹಾಗೂ ಕಂಚಿನ ಕಂಠದ ರವಿಶಂಕರ್ ಕೂಡ ಈಗ ಯಲಹಂಕ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದು , ಇದು ಹಲವರನ್ನು ಹುಬ್ಬೇರಿಸುವಂತೆ ಮಾಡಿದೆ. ಅದೇನೆಯಿರಲಿ ಈ ಬಾರಿಯ ವಿದಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಮಿಂಚಿನಸಂಚಾಲ ಸೃಷ್ಟಿಯಾಗುವುದೊಂತು ಸುಳಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ