ಆಧ್ಯಾತ್ಮ

ಕೃಷ್ಣನ ಜನ್ಮದ ಹಿಂದೆ ಅಡಗಿರುವ ಆ ರಹಸ್ಯ ಏನು ಗೊತ್ತಾ?ಕೃಷ್ಣ ಕಾರಾಗೃಹದಲ್ಲೇ ಜನಿದಿದ್ದು ಏಕೆ?ತಿಳಿಯಲು ಈ ಲೇಖನಿ ಓದಿ…

3035

 ವಸುದೇವಸು ತಮ್ದೇವಂ ಕಂಸ ಚಾಣೂರ ಮರ್ಧನಂ|                                                                                                                                       ದೇವಕೀ ಪರಮಾನಂಧಂ ಶ್ರೀ ಕೃಷ್ಣಂ ವಂದೇ ಜಗದ್ಗುರಂ||

ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ .

ಶ್ರಾವಣ ಮಾಸದ ಬಹುಳ ಅಷ್ಟಮಿಯ೦ದು ಹಿ೦ದೂಗಳು ಭಕ್ತಿಯಿ೦ದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸುತ್ತಾರೆ. ಇದೊ೦ದು ಜನಪ್ರಿಯವೂ – ವರ್ಣರ೦ಜಿತವೂ ಆದ ಹಬ್ಬ. ಭಗವಾನ್ ಮಹಾ ವಿಷ್ಣುವಿನ ಎ೦ಟನೆಯ ಅವತಾರವಾದ ಶ್ರೀ ಕೃಷ್ಣನು ಜನಿಸಿದ ದಿನವಾದ್ದರಿ೦ದ ಈ ದಿನವನ್ನು ಜನ್ಮಾಷ್ಟಮಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಎ೦ದು ಕರೆಯಲಾಗುತ್ತದೆ.

ಪುರಾಣ ಹಿನ್ನೆಲೆ

  • ಶ್ರಾವಣಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿ ಕೃಷ್ಣನು ಹುಟ್ಟಿದ ದಿನ. ಅಷ್ಟಮಿಯ ಮಧ್ಯರಾತ್ರಿ, ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ. ಮಥುರಾ ಕೃಷ್ಣನ ಜನ್ಮಸ್ಥಳ. ಕೃಷ್ಣನು ಹುಟ್ಟಿದೊಡನೆ ತಂದೆ ವಸುದೇವ ಅವನನ್ನು ಸೋದರಮಾವನಾದ ಕಂಸನಿಗೆ ತಿಳಿಯದಂತೆ ಗೋಕುಲಕ್ಕೆ ಕರೆದೊಯ್ಯುತ್ತಾನೆ. ಅಲ್ಲಿ ನಂದರಾಜನ ಮನೆಯಲ್ಲಿ ಕೃಷ್ಣನ ನ್ನು ಬಿಟ್ಟು ಬರುತ್ತಾನೆ. ಈ ಕಾರ್ಯಕ್ಕೆ ಪ್ರಕೃತಿಯು ನೆರವಾಗುತ್ತದೆ. ದೇವಕಿ ಕೃಷ್ಣನಿಗೆ ಜನ್ಮ ನೀಡಿದ ತಾಯಿಯಾದರೆ, ಯಶೋದೆ ಅವನನ್ನು ಸಾಕಿ ಬೆಳೆಸಿದ ತಾಯಿ.

  • ಕೃಷ್ಣಜನ್ಮಾಷ್ಟಮಿಯ ದಿನದಂದು, ಮನೆ ಮತ್ತು ದೇವಾಲಯಗಳನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಕೃಷ್ಣನ ಪುಟ್ಟ ಹೆಜ್ಜೆಗಳನ್ನು ರಂಗೋಲಿಯಲ್ಲಿ ಬರೆದು ಸಂಭ್ರಮಿಸಲಾಗುತ್ತದೆ. ಕೃಷ್ಣನ ವಿಗ್ರಹಗಳನ್ನು ವಿಧವಿಧವಾಗಿ ಅಲಂಕರಿಸಿ, ಬಗೆಬಗೆಯ ತಿಂಡಿಗಳನ್ನು ಮಾಡಿಬಾಲ ಕೃಷ್ಣನನ್ನುಪೂಜಿಸಲಾಗುತ್ತದೆ. ಕೆಲವು ಕಡೆ, ಮಧ್ಯರಾತ್ರಿಯವರೆಗೆ ಉಪವಾಸವಿದ್ದು, ನಂತರ ಆಹಾರ ಸ್ವೀಕರಿಸುವ ಸಂಪ್ರದಾಯವಿದೆ. ಉಡುಪಿಯಲ್ಲಿ ಈ ದಿನದಂದು ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ.
  • ಕೃಷ್ಣನುಭಾದ್ರಪದ ಕೃಷ್ಣ ಅಷ್ಟಮಿಯಂದು ಮಥುರಾ ಊರಿನ ಕಾರಾಗೃಹದಲ್ಲಿ ದೇವಕಿ ಮತ್ತು ವಸುದೇವರಿಗೆ 8 ನೇ ಮಗನಾಗಿ ಜನಿಸಿದನು. ಮಥುರ (ಈಗಿನ ಉತ್ತರಪ್ರದೇಶದ ಮಥುರ ಜಿಲ್ಲೆ) ಯಾದವ ಕುಲದ ರಾಜಧಾನಿಯಾಗಿತ್ತು.

  • ಕಂಸ ತಂದೆ ಉಗ್ರಸೇನರನ್ನು ಬಂಧಿಸದಲ್ಲಿಟ್ಟು, ತಾನು ರಾಜನಾಗಿದ್ದನು. ನಂತರ ತನ್ನ ಪ್ರೀತಿಪಾತ್ರಳಾದ ತಂಗಿ ದೇವಕಿಗೆ ಮದುವೆ ಮಾಡುತ್ತಾನೆ. ಅಣ್ಣ ಕಂಸನುದೇವಕಿ-ವಸುದೇವರ ಮದುವೆಯಾದ ಮೇಲೆ ಅವರನ್ನು ಗಂಡನ ಮನೆಗೆ ಕರೆದೊಯ್ಯುತ್ತಿದ್ದಾಗ, ಅವನಿಗೆ ಒಂದು ಅಶರೀರವಾಣಿ ಕೇಳಿಸಿತು. ಅದರ ಪ್ರಕಾರ ದೇವಕಿಯ ಎಂಟನೇ ಮಗುವೂ ಕಂಸನ ವಧನವನ್ನು ಮಾಡುತ್ತದೆ ಎಂದು.

ಮೂಲ

  • ಇದನ್ನು ಕೇಳಿದ ಕಂಸನು ದೇವಕಿಯನ್ನು ಆ ತಕ್ಷಣವೇ ಕೊಲ್ಲಲು ಹೊರಟನು. ಆಗ ವಸುದೇವನು ಅವನನ್ನು ತಡೆದು ಪ್ರತಿ ಮಗುವನ್ನು ಹುಟ್ಟಿದ ತಕ್ಷಣ ಕಂಸನ ಮಡಿಯಲ್ಲಿ ಅರ್ಪಿಸುವುದು ಎಂದು ಹೇಳಿದನು. ಅವರನ್ನು ಬಂಧಿಸಿ ಅವರಿಗೆ ಹುಟ್ಟಿದ 7 ಮಕ್ಕಳನ್ನು ಕೊಂದನು. 8 ನೇ ಮಗು ಕೃಷ್ಣನನ್ನು ಅವನಿಗೆ ತಿಳಿಯದ ಹಾಗೆಯಮುನಾ ದಾಟಿ ಗೋಕುಲಕ್ಕೆ ಕರೆದು ಕೊಂಡು ಹೋದನು.

ಮೂಲ

  • ಅಲ್ಲಿ ಆಗ ತಾನೆ ಹುಟ್ಟಿದ್ದ ಯಶೋದೆ ಮಗಳನ್ನು ಇಲ್ಲಿಗೆ ತಂದನು. ಆದರೆ ಕಂಸ ಅವಳನ್ನು ಕೊಲ್ಲಲು ಬಂದಾಗ ಅವಳು ವಿಷ್ಣುವಿನ ಸಹಾಯಕಿ ಯೋಗಮಾಯಾ ರೂಪಕ್ಕೆ ಬದಲಾಗಿ ಅವನ ಸಾವಿನ ಬಗ್ಗೆ ಅರಿಯಬೇಕೆಂದು ಹೇಳಿ ಮಾಯವಾದಳು.

ಮೂಲ

“ಹರೇ ಕೃಷ್ಣ ಹರೇ ಕೃಷ್ಣ ಕೃಷ್ಣ ಕೃಷ್ಣ ಹರೇ ಹರೇ|

ಹರೇ ರಾಮ ಹರೇ ರಾಮ ರಾಮ ರಾಮ ಹರೇ ಹರೇ”||

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಪ್ರದೇಶದಲ್ಲಿ ಗಂಡಂದಿರು ತಮ್ಮ ಪತ್ನಿಯರನ್ನು ಬಾಡಿಗೆಗೆ ನೀಡುತ್ತಾರಂತೆ..!ಮುಂದೆ ಓದಿ ಶಾಕ್ ಆಗ್ತೀರಾ…

    ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…

  • ಸುದ್ದಿ

    ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

    ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…

  • Cinema, ಸಿನಿಮಾ

    ಕೋನೆಗೂ ಬರಲೇ ಇಲ್ಲ BBC earth ಕಾರಣ ಕೇಳಿದರೆ ಶಾಕ್ ಆಗ್ತೀರಾ

    ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.

  • ಸುದ್ದಿ

    ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿವರೆಗೂ ಈ ಗ್ರಾಮದಲ್ಲಿ ಒಂದೇ ಒಂದು ಅಪರಾಧ ಪ್ರಕರಣ ನಡೆದಿಲ್ಲ..!ಯಾವುದೇ ಕೇಸ್ ದಾಖಲಾಗಿಲ್ಲ!ನಮ್ಮ ಪಕ್ಕದಲ್ಲೇ ಇದೇ ಆ ಊರು.ತಿಳಿಯಲು ಈ ಲೇಖನ ಓದಿ…

    ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…

  • ಸುದ್ದಿ

    ಕಿಚ್ಚನ ನಳಪಾಕ ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಸುದೀಪ್…!

    ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…