ಸುದ್ದಿ

ಕೆಲವೇ ನಿಮಿಶಗಳಲ್ಲಿ ಪಾಕಿಸ್ತಾನದಲ್ಲಿನ 300 ಉಗ್ರರನ್ನು ಉಡೀಸ್ ಮಾಡಿದ ಭಾರತೀಯ ವಾಯುಸೇನೆ

80

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ.

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ ಶಿಬಿರದ ಮೇಲೆ 100 ಕೆಜಿಯ 10 ಬಾಂಬ್ ಸಿಡಿಸಲಾಗಿದ್ದು, ಉಗ್ರರ ತಾಣದ 500 ಮೀ. ವ್ಯಾಪ್ತಿ ಧ್ವಂಸಗೊಂಡಿದೆ.

ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಉಗ್ರರ ನೆಲೆಯ ಮೇಲೆ ಬರೋಬ್ಬರಿ ಸಾವಿರ ಕೆಜಿಯ ಬಾಂಬ್ ಹಾಕಲಾಗಿದೆ. ಕಾಶ್ಮೀರದ ಬಾಲ್ಕೋಟ್ ನಲ್ಲಿ ನೆಲೆ ಕಂಡುಕೊಂಡಿದ್ದ ಉಗ್ರರ ಸಂಘಟನೆಯ ಕ್ಯಾಂಪ್ ಸಂಪೂರ್ಣ ಧ್ವಂಸವಾಗಿದ್ದು, ಪುಲ್ವಾಮಾ ದಾಳಿಗೆ ಪ್ರತೀಕಾರವನ್ನು ಭಾರತ ತೆಗೆದುಕೊಂಡಿದೆ. 

ಮಿರಾಜ್- 2000 ಹೆಸರಿನ 12 ಜೆಟ್ ಗಳನ್ನು ಬಳಸಿ ಇಂದು ಬೆಳಗ್ಗಿನ ಜಾವ 3.30ಕ್ಕೆ ವೈಮಾನಿಕ ದಾಳಿ ನಡೆದಿದ್ದು, ಕೆಲವು ದೃಶ್ಯಗಳು ಮತ್ತು ಫೋಟೋಗಳನ್ನು ರಾಷ್ಟ್ರೀಯ ಮಾಧ್ಯಮಗಳು ಬಿತ್ತರಿಸುತ್ತಿವೆ. ಭಾರತೀಯ ಸೇನೆಯ ಯುದ್ಧ ವಿಮಾನಗಳು ಎಲ್‍ಓಸಿ ಗಡಿಯನ್ನು ದಾಟಿ ಪಾಕಿಸ್ತಾನದತ್ತ ಬರುತ್ತಿವೆ ಎಂದು ಪಾಕ್ ಹೇಳಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ