India, Place

ಕೈಲಾಸ ಪರ್ವತ

313

ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ.

ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ ಪರ್ವತವನ್ನು ಏರಲು ಯಾರಿಗೂ ಅನುಮತಿ ದೊರೆಯುವುದಿಲ್ಲ. ಹೀಗಾಗಿ ಜಗತ್ತಿನ ಪ್ರಮುಖ ಶಿಖರಗಳ ಪೈಕಿ ಕೈಲಾಸಪರ್ವತವೊಂದು ಮಾತ್ರ ಆರೋಹಿಸಲ್ಪಡದೇ ಉಳಿದಿದೆ. ಶಿಖರವು ಸಮುದ್ರಮಟ್ಟದಿಂದ ೨೧,೭೭೮ ಅಡಿಗಳಷ್ಟು ಎತ್ತರದಲ್ಲಿದೆಯೆಂದು ಅಂದಾಜು ಮಾಡಲಾಗಿದೆ.

ಹಿಂದೂಧರ್ಮದ ಪ್ರಕಾರ ಪರಶಿವನು ಕೈಲಾಸಪರ್ವತದ ಶಿಖರದ ಮೇಲೆ ಹಿಮವಂತನ ಪುತ್ರಿ ಪಾರ್ವತಿ ಯೊಂದಿಗೆ ನೆಲೆಸಿರುವನು. ಶಿವನು ಇಲ್ಲಿ ಸದಾ ಧ್ಯಾನಮಗ್ನನಾಗಿರುತ್ತಾನೆ. ಅಲ್ಲದೇ ಧನಾಧಿಪತಿ ಕುಬೇರ ನ ನೆಲೆಯು ಸಹ ಕೈಲಾಸಪರ್ವತದ ಸನಿಹದಲ್ಲಿಯೇ ಎಂದು ಹೇಳಲಾಗುತ್ತದೆ. ಹಿಂದೂಧರ್ಮದ ಅನೇಕ ಶಾಖೆಗಳು ಕೈಲಾಸಪರ್ವತವನ್ನು ಸ್ವರ್ಗ  ಆತ್ಮದ ಅಂತಿಮ ನೆಲೆ ಮತ್ತು ವಿಶ್ವದ ಪರಮೋನ್ನತ ಅಧ್ಯಾತ್ಮಿಕ ಕೇಂದ್ರ ವೆಂದು ಪರಿಗಣಿಸುತ್ತವೆ. ವಿಷ್ಣುಪುರಾಣ ದ ಪ್ರಕಾರ ಕೈಲಾಸಪರ್ವತವು ಜಗತ್ತಿನ ಕೇಂದ್ರ ಮತ್ತು ಅದರ ನಾಲ್ಕು ಮುಖಗಳು ಸ್ಪಟಿಕ  ಪದ್ಮರಾಗ , ಸ್ವರ್ಣ  ಮತ್ತು ನೀಲವೈಢೂರ್ಯ ದಿಂದ ಮಾಡಲ್ಪಟ್ಟಿವೆ. ಕೈಲಾಸಪರ್ವತವು ಜಗತ್ತಿನ ಆಧಾರಸ್ಥಂಭ. ಅದರ ಎತ್ತರ ೮೪೦೦೦ ಯೋಜನಗಳಷ್ಟು. ಅದು ವಿಶ್ವಮಂಡಲದ ಕೇಂದ್ರವಾಗಿದ್ದು ಪದ್ಮಾಕೃತಿಯಲ್ಲಿ ಹಬ್ಬಿರುವ ಆರು ಪರ್ವತಶ್ರೇಣಿಗಳ ಕೇಂದ್ರಸ್ಥಾನದಲ್ಲಿದೆ. ಕೈಲಾಸಪರ್ವತದಿಂದ ಹೊರಹರಿಯುವ ನಾಲ್ಕು ನದಿಗಳು ನಾಲ್ಕೂ ದಿಕ್ಕಿನಲ್ಲಿ ಪ್ರವಹಿಸಿ ಜಗತ್ತನ್ನು ನಾಲ್ಕು ಪ್ರದೇಶಗಳನ್ನಾಗಿ ವಿಭಜಿಸಿವೆ. ಜಗತ್ತಿನ ಅತ್ಯಂತ ದೊಡ್ಡ ಮತ್ತು ಅತಿ ಪ್ರಮುಖ ಶಿಲೆಯಲ್ಲಿ ಕೊರೆದು ಮಾಡಿರುವ ದೇವಾಲಯವೆಂದರೆ ಎಲ್ಲೋರಾ ದ ಕೈಲಾಸ ದೇಗುಲ. ಇದಕ್ಕೆ ಕೈಲಾಸಪರ್ವತವೇ ಸ್ಫೂರ್ತಿ. ಈ ದೇವಸ್ಥಾನದ ಅನೇಕ ಶಿಲ್ಪಗಳು ಶಿವಪಾರ್ವತಿಯರಿಗೆ ಸಂಬಂಧಿಸಿದ ಘಟನಾವಳಿಗಳನ್ನು ತೋರಿಸುತ್ತವೆ. ಇವುಗಳ ಪೈಕಿ ರಾವಣ ನು ಕೈಲಾಸಪರ್ವತವನ್ನು ಬುಡಸಮೇತ ಕೀಳಲು ನಡೆಸಿದ ಪ್ರಯತ್ನವೂ ಒಂದು.

ಸಹಸ್ರಾರು ವರ್ಷಗಳಿಂದ ನಡೆದು ಬಂದಿರುವ ಸಂಪ್ರದಾಯದಂತೆ ಪ್ರತಿ ವರ್ಷ ದೊಡ್ಡ ಸಂಖ್ಯೆಯಲ್ಲಿ ಆಸ್ತಿಕರು ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳುವರು. ಹಲವು ಧರ್ಮದ ಶ್ರದ್ಧಾಳುಗಳು ಕೈಲಾಸಪರ್ವತಕ್ಕೆ ಕಾಲ್ನಡಿಗೆಯಲ್ಲಿ ಸುತ್ತುಬರುವುದು ಒಂದು ಪಾವನ ಕಾಯಕವೆಂದು ಭಾವಿಸುತ್ತಾರೆ. ಹಿಂದೂಗಳು ಮತ್ತು ಬೌದ್ಧರು ಪರ್ವತಕ್ಕೆ ಪ್ರದಕ್ಷಿಣವಾಗಿ ಸುತ್ತು ಬಂದರೆ ಜೈನರು ಮತ್ತು ಬಾನ್ ಧರ್ಮೀಯರು ಕೈಲಾಸಪರ್ವತಕ್ಕೆ ಅಪ್ರದಕ್ಷಿಣವಾಗಿ ಸುತ್ತು ಬರುತ್ತಾರೆ. ಪರ್ವತವನ್ನು ಒಂದು ಬಾರಿ ಸುತ್ತಿಬರಬೇಕಾದರೆ ೫೨ ಕಿ.ಮೀ. ಗಳಷ್ಟು ಉದ್ದದ ದಾರಿಯನ್ನು ಕ್ರಮಿಸಬೇಕಾಗುವುದು.

ಕೆಲವು ಯಾತ್ರಿಕರು ಕೈಲಾಸಪರ್ವತವನ್ನು ಒಂದೇ ದಿನದಲ್ಲಿ ಸುತ್ತಿಬರಬೇಕೆಂದು ನಂಬುವರು. ಆದರೆ ಒರಟು ಮೇಲ್ಮೈ, ಉನ್ನತಪ್ರದೇಶದಲ್ಲುಂಟಾಗುವ ಅಸ್ವಾಸ್ಥ್ಯ ಮತ್ತು ಪ್ರತಿಕೂಲ ವಾತಾವರಣಗಳಿಂದಾಗಿ ಇದು ಕಠಿಣಸಾಧ್ಯ ಮತ್ತು ಕೆಲವೇ ಕೆಲವರು ಮಾತ್ರ ಇದನ್ನು ಸಾಧಿಸುವರು. ಕೆಲವು ಭಕ್ತರು ಇಡೀ ಪರ್ವತಕ್ಕೆ ಅಂಗಪ್ರದಕ್ಷಿಣೆಯನ್ನು ಸಹ ಮಾಡುವರು. ಈ ಕ್ರಮದಲ್ಲಿ ಪ್ರತಿ ಹೆಜ್ಜೆಗೊಮ್ಮೆ ಭಕ್ತರು ಪರ್ವತಕ್ಕೆ ದೀರ್ಘದಂಡ ನಮಸ್ಕಾರ ಮಾಡಿ ಆ ಸ್ಥಾನವನ್ನು ಬೆರಳಿನಿಂದ ಗುರುತಿಸಿ ನಂತರ ಮಂಡಿಯೂರಿ ಪ್ರಾರ್ಥನೆ ಸಲ್ಲಿಸಿ ಮುಂದೆ ಕೈಗಳು ಮತ್ತು ಮಂಡಿಯ ಮೇಲೆ ಮೊದಲು ಗುರುತಿಸಿದ್ದ ಸ್ಥಾನಕ್ಕೆ ತೆವಳುವರು. ಈ ಪ್ರಕಾರದ ಅಂಗಪ್ರದಕ್ಷಿಣೆಯ ಮೂಲಕ ಕೈಲಾಸಪರ್ವತವನ್ನು ಒಂದು ಬಾರಿ ಸುತ್ತಿಬರಲು ಕನಿಷ್ಟ ನಾಲ್ಕು ದಿನಗಳು ತಗಲುತ್ತವೆಯಲ್ಲದೆ ಅತಿ ತೀವ್ರವಾದ ದೈಹಿಕ ದಂಡನೆಯನ್ನು ಸಹಿಸಿಕೊಳ್ಳಬೇಕಾಗುತ್ತದೆ.

ಕೈಲಾಸಪರ್ವತವು ಟಿಬೆಟ್ ನ ಹಿಮಾಲಯದಲ್ಲಿ ಅತಿ ದುರ್ಗಮ ಪ್ರಾಂತ್ಯದಲ್ಲಿ ಮತ್ತು ಪ್ರತಿಕೂಲ ಪರಿಸರದಲ್ಲಿದೆ. ಈಚೆಗೆ ಯಾತ್ರಿಕರಿಗೆ ಕೆಲವು ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವ ದಿಸೆಯಲ್ಲಿ ಪ್ರಯತ್ನಗಳು ಸಾಗಿವೆ. ಕೈಲಾಸಪರ್ವತವನ್ನು ಪೂಜಿಸುವ ಎಲ್ಲ ಧರ್ಮಗಳ ಪ್ರಕಾರ ಪರ್ವತಕ್ಕೆ ಕಾಲು ಸೋಕಿಸುವುದು ಅತಿ ಘೋರ ಪಾಪದ ಕಾರ್ಯ. ಇದನ್ನು ಮೀರಿ ಪರ್ವತವನ್ನು ಏರಲು ಹೊರಟವರು ಪ್ರಾಣಕಳೆದುಕೊಂಡರೆಂದು ಜನರ ಹೇಳಿಕೆ.

೧೯೫೦ರಲ್ಲಿ ಚೀನೀಯರಿಂದ ಟಿಬೆಟ್ ನ ಆಕ್ರಮಣ ಮತ್ತು ಭಾರತ -ಚೀನಾಗಳ ನಡುವೆ ಸಂಭವಿಸಿದ ಘರ್ಷಣೆಗಳಿಂದಾಗಿ ೧೯೫೯ ರಿಂದ ೧೯೮೦ ರ ವರೆಗೆ ಕೈಲಾಸಪರ್ವತದ ಯಾತ್ರೆ ನಿಂತುಹೋಗಿತ್ತು. ೧೯೮೦ರ ನಂತರ ಪ್ರತಿವರ್ಷ ಭಾರತದಿಂದ ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳಲು ನಿಗದಿತ ಸಂಖ್ಯೆಯ ಯಾತ್ರಿಕರಿಗೆ ಪರವಾನಿಗಿ ನೀಡಲಾಗುತ್ತಿದೆ. ಈ ಯಾತ್ರೆಯು ಭಾರತ ಮತ್ತು ಚೀನಾ ಸರಕಾರಗಳ ಮಾರ್ಗದರ್ಶನ ಮತ್ತು ನಿರ್ದೇಶನದಡಿ ನಡೆಯುವುದು. ಭಾರತೀಯರು ಸಾಮಾನ್ಯವಾಗಿ ಉತ್ತರಾಖಂಡ ದ ಕುಮಾವ್ ಹಿಮಾಲಯವನ್ನು ಕಾಲ್ನಡಿಗೆಯಲ್ಲಿ ದಾಟಿ ಕೈಲಾಸಪರ್ವತವನ್ನು ತಲುಪುವರು. ಈ ಪಾದಯಾತ್ರೆಯು ಅತಿ ದೀರ್ಘದಾರಿಯದು ಮತ್ತು ಅಪಾಯಕಾರಿ ಕೂಡ. ಬೇರೆ ಮಾರ್ಗಗಳೆಂದರೆ ಕಾಠ್ಮಂಡುವಿನಿಂದ ಅಥವಾ ಲ್ಹಾಸಾದಿಂದ ರಸ್ತೆಯ ಮೇಲಿನ ಪಯಣ. ಕಾಠ್ಮಂಡು ಮತ್ತು ಲ್ಹಾಸಾಗಳನ್ನು ಭಾರತದಿಂದ ವಿಮಾನಯಾನದ ಮೂಲಕ ತಲುಪಬಹುದು.

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ಸುದ್ದಿ

    ಕರೀನಾಳ “ಸ್ನೇಕ್ ಚೈನ್ ‘’ ಬೆಲೆ ಕೇಳಿದರೆ ಅಚ್ಚರಿಯಂತು ಗ್ಯಾರಂಟಿ..!ಅಷ್ಟಕ್ಕೂ ಅದರ ಬೆಲೆ ಎಷ್ಟು ಗೊತ್ತ.?

    ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…

  • ಸುದ್ದಿ

    ಹಳಿಗಳಲ್ಲಿ ಇನ್ಮುಂದೆ ಕಂಪನಿ ರೈಲು ಸಂಚಾರ…!

    ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್‌ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್‌ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದ‌ಕ್ಕೂ ಮುನ್ನ…

  • ಸುದ್ದಿ

    884 ವರ್ಷಗಳಿಂದ ರಾಮಾನುಜಾಚಾರ್ಯರ ಮೂಲ ಶರೀರವನ್ನು ಯಾವುದೇ ರಾಸಾಯನಿಕಗಳ ಪ್ರಯೋಗವಿಲ್ಲದೆ ಸಂರಕ್ಷಿಸಿ ಇಡಲಾಗಿದೆ…!

    ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • ಉಪಯುಕ್ತ ಮಾಹಿತಿ

    ಕೇವಲ ಲಕ್ಷದಷ್ಟು ಬ್ರಿಟೀಶ್ ಸೈನಿಕರು ಇಡೀ ಭಾರತವನ್ನು, ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿದ್ದು ಹೇಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ  ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ  ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ  ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ  ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…