ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ ಆಗುತ್ತದೆ ಎಂದು ಯೋಚಿಸುವ ಹೊತ್ತಿಗೆ ಕೊರೊನಾ ಎರಡನೇ ಅಲೆಯ ಆರ್ಭಟ ಬಂದು ಅಪ್ಪಳಿಸಿದೆ. ಕೊರೊನಾ ಎರಡನೇ ಅಲೆಗೆ ಈಗಾಗಲೇ ಜನ ನೊಂದು ಬೆಂದಿದ್ದಾರೆ. ಆದರೆ ಕೊರೊನಾ ಮೂರನೇ ಅಲೆ ಬರುತ್ತದೆ ಎಂಬ ಸೂಚನೆಗಳಿವೆ. ಹೀಗಾಗಿ ಸರ್ಕಾರ ಮೂರನೆ ಅಲೆಯನ್ನು ಎದುರಿಸುವುದಕ್ಕೆ ಸಿದ್ಧತೆಯನ್ನು ಮಾಡಿಕೊಂಡಿದೆಯಂತೆ.
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಕೊರೊನಾ ಮೂರನೇ ಅಲೆ ಎದುರಿಸುವುದಕ್ಕೆ ಸರ್ಕಾರ ಹೊಸ ಯೋಜನೆ ರೂಪಿಸುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಸರ್ಕಾರ ಚರ್ಚೆ ನಡೆಸುತ್ತಿದೆ.
ದೊಡ್ಡ ದೊಡ್ಡ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲಾಗುತ್ತದೆ. ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಿ ಆಕ್ಸಿಜನ್ ಉತ್ಪಾದನೆಯ ಜೊತೆಗೆ ಬಳಕೆ ಮಾಡಲಾಗುತ್ತದೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಆಕ್ಸಿಜನ್ ಸಮಸ್ಯೆಯಾಗಬಹುದು. ಹೀಗಾಗಿ ಆಕ್ಸಿಜನ್ ಸಮಸ್ಯೆ ಎದುರಾಗಬಾರದೆಂಬ ಕಾರಣಕ್ಕೆ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲು ಸರ್ಕಾರ ಆಸ್ಪತ್ರೆಗಳ ಹುಡುಕಾಟ ನಡೆಸುತ್ತಿದೆ. ಸದ್ಯ ಜನರಲ್ ಬೆಡ್ಗಳ ಅವಶ್ಯಕತೆ ಇಲ್ಲದಿರುವ ಕಾರಣ, ಜನರಲ್ ಬೆಡ್ಗಳನ್ನು ಐಸಿಯು ಬೆಡ್ಗಳಾಗಿ ಮಾರ್ಪಾಡು ಮಾಡಲಾಗುತ್ತದೆ. 3ನೇ ಅಲೆ ಆರಂಭವಾಗುವ ಮೊದಲೇ ಐಸಿಯು ಬೆಡ್ಗಳ ಸಂಖ್ಯೆ ಹೆಚ್ಚಿಸುವುದಕ್ಕೆ ಸಿದ್ಧತೆ ಮಾಡಿಕೊಳ್ಳುವುದಕ್ಕೆ ಸರ್ಕಾರ ಮುಂದಾಗಿದೆ.
ರಾಜ್ಯದಲ್ಲಿ ಹೆಚ್ಚು ಮಕ್ಕಳ ಆಸ್ಪತ್ರೆ ತೆರೆಯುವ ಬಗ್ಗೆ ಯೋಚಿಸಿದ್ದು, ವಾರ್ಡ್ ಮಟ್ಟದಲ್ಲೂ ಮಕ್ಕಳ ಆಸ್ಪತ್ರೆ ಸ್ಥಾಪಿಸಲು ಪ್ಲ್ಯಾನ್ ಮಾಡುತ್ತಿದೆ. ಜೊತೆಗೆ ಮಕ್ಕಳಿಗೂ ಲಸಿಕೆ ನೀಡುವ ಬಗ್ಗೆ ಚರ್ಚೆ ಆಗುತ್ತಿದೆ. ಮೂರನೇ ಅಲೆಯಿಂದ ಮಕ್ಕಳನ್ನು ತಪ್ಪಿಸಲು 8-12 ವರ್ಷದ ಮಕ್ಕಳಿಗೆ ಲಸಿಕೆ ನೀಡುವುದು ಉತ್ತಮ ಎಂದು ತಜ್ಞರು ತಿಳಿಸಿದ್ದಾರೆ. ಹೀಗಾಗಿ ಕೇಂದ್ರದ ಆದೇಶಕ್ಕಾಗಿ ರಾಜ್ಯ ಸರ್ಕಾರ ಕಾಯುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.