corona

ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

32

ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ.
ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ. ಅದರಲ್ಲೂ, ವಿಶೇಷವಾಗಿ ವೃದ್ಧರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ. ಅರ್ಹರೆಲ್ಲರೂ ಕೋವಿಡ್-19 ಲಸಿಕೆಯ ಪ್ರಿಕಾಶನರಿ ಡೋಸ್‌ಅನ್ನು ಶೀಘ್ರವಾಗಿ ಪಡೆದುಕೊಳ್ಳಬೇಕು. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿದ್ದು ಪರೀಕ್ಷೆ ಮಾಡಿಸಿಕೊಳ್ಳಬೇಕು ಹಾಗೂ ಫಲಿತಾಂಶದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಪ್ರಮಾಣೀಕೃತ ಶಿಷ್ಠಾಚಾರದ ಅನ್ವಯ ಕ್ರಮಗಳನ್ನು ಪಾಲಿಸುವುದು. ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ವ್ಯಾಯಾಮ, ಉಸಿರಾಟದ ವ್ಯಾಯಾಮಗಳು ಹಾಗೂ ಧ್ಯಾನವನ್ನು ಮಾಡಬಹುದಾಗಿದೆ.


ಮುಂದುವರೆದು, ಸಭೆ ಹಾಗೂ ಸಮಾರಂಭಗಳ ಆಯೋಜಕರು ಈ ಕೆಳಗಿನ ಮಾರ್ಗಸೂಚಿಯನ್ನು ಪಾಲಿಸುವಂತೆ ನಿರೀಕ್ಷಿಸಲಾಗಿದೆ.
ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟೂ ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ-ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ, ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು. ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರವನ್ನು ಪಾಲಿಸುವುದು ಅಗತ್ಯವಾಗಿದೆ. ಕೈಗಾರಿಕಾ ಸಂಸ್ಥೆಗಳಲ್ಲಿ, ಗಾರ್ಮೆಂಟ್ಸ್ ಇತರೇ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಕಡ್ಡಾಯವಾಗಿ ದೈಹಿಕ ಅಂತರ ಮತ್ತು ಮಾಸ್ಕ್ ಧರಿಸುವುದು. ಹೆಚ್ಚಿನ ಜನರು ಗುಂಪು ಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು.
ಕೋವಿಡ್-19 ಮುನ್ನೆಚ್ಚರಿಕೆ ಹಾಗೂ ನಿಯಂತ್ರಣದಲ್ಲಿ ಈವರೆಗೆ ಸಾಧಿಸಲಾಗಿರುವ ಉತ್ತಮ ಅಂಶಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ, ಮೇಲೆ ತಿಳಿಸಿರುವ ಸಲಹೆಗಳನ್ನು ಪಾಲಿಸಲು ಸಾರ್ವಜನಿಕರು ಹಾಗೂ ಸಭೆ/ಸಮಾರಂಭಗಳ ಆಯೋಜಕರಿಗೆ ಈ ಮಾಹಿತಿಯನ್ನು ನಿಖರವಾಗಿ ಪ್ರಚುರಪಡಿಸುವುದು ಹಾಗೂ ಪಾಲನೆಯನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲೆಯ ಆರೋಗ್ಯ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀತಾಫಲ ಹಣ್ಣು ಸೇವಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?ಒಮ್ಮೆ ತಿಂದು ನೋಡಿ

    ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…

  • ಆರೋಗ್ಯ, ಜೀವನಶೈಲಿ

    ಫುಡ್ ಪಾಯಿಸನ್’ಗೆ ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…

  • ಸುದ್ದಿ

    ವಿಘ್ನ ವಿನಾಯಕ,ಗಣೇಶನಿಗೇ ಇನ್ಸೂರೆನ್ಸ್..ಇದನ್ನೊಮ್ಮೆ ನೋಡಿ ….!

    ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…

  • ಉಪಯುಕ್ತ ಮಾಹಿತಿ

    ಅಡುಗೆ ಮನೆಯಲ್ಲಿರುವ ಈ ಕರಿಮೆಣಸಿನ ಬಗ್ಗೆ ನಿಮ್ಗೆ ಗೊತ್ತಿಲ್ಲದ ಪ್ರಯೋಜನಗಳು..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ..

    ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…