ಸರ್ಕಾರದ ಯೋಜನೆಗಳು

ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

1101

ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.

ಅಲ್ಲದೆ ಒಂದು ಗ್ರಾಮ ಪಂಚಾಯತ್‌ನಲ್ಲಿ ಎಷ್ಟು ಮಹಿಳೆಯರು ಉದ್ಯೋಗ ಹೊಂದಿದ್ದಾರೆ ಅಥವಾ ಸ್ವಯಂ ಉದ್ಯೋಗಿಗಳಾಗಿದ್ದಾರೆ ಮತ್ತು ಎಲ್‌ಪಿಜಿ ಸಂಪರ್ಕವನ್ನು ಎಷ್ಟು ಕುಟುಂಬಗಳು ಹೊಂದಿವೆ ಎಂಬುದನ್ನೂ ಪರಿಗಣಿಸಲಾಗುತ್ತದೆ. ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕುಟುಂಬಗಳ ಬಡತನ ಶ್ರೇಣಿ ಅಳೆಯಲು ಸುಮಾರು 21 ಮಾನದಂಡಗಳನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ನಿಗದಿಸಿದೆ.

ಸಾಲ, ಹೈನುಗಾರಿಕೆ, ಕೃಷಿಯೇತರ ಉದ್ಯೋಗ, ಮಾರುಕಟ್ಟೆ ಮತ್ತು ಬ್ಯಾಂಕ್‌ ಖಾತೆಗಳ ಸಂಖ್ಯೆಯ ಅಂಶಗಳನ್ನೂ ಇದರ ಅಡಿಯಲ್ಲಿ ಮೌಲೀಕರಿಸಲಾಗುತ್ತದೆ. ಕೂಲಿ ಅಥವಾ ಸ್ವಯಂ ಉದ್ಯೋಗ ಹೊಂದಿರುವ ಕುಟುಂಬವು ಒಂದು ಗ್ರಾಮ ಪಂಚಾಯಿತಿಯಲ್ಲಿ ಎಷ್ಟಿವೆ ಎಂಬುದನ್ನು ಆಧರಿಸಿ ಗ್ರಾಮ ಪಂಚಾಯತ್‌ಎಷ್ಟು ಉತ್ತಮವಾಗಿದೆ ಎಂದು ವಿಶ್ಲೇಷಿಸಲಾಗುತ್ತದೆ.

ಮಿಶನ್‌ ಅಂತ್ಯೋದಯ ಯೋಜನೆ ಅಡಿಯಲ್ಲಿ, ಗ್ರಾಮ ಪಂಚಾಯತ್‌ಗಳನ್ನು ಶ್ರೇಣೀಕರಿಸಲು ಮೂರು ಮೂಲ ಮಾನದಂಡ ಗಳಿಗೆ ಸಚಿವಾಲಯವು ಅನುಮೋದನೆ ನೀಡಿದೆ. ಮೂಲಸೌಕರ್ಯ, ಸಾಮಾಜಿಕ ಅಭಿವೃದ್ಧಿ ಮತ್ತು ರಕ್ಷಣೆ, ಆರ್ಥಿಕ ಅಭಿವೃದ್ಧಿ ಹಾಗೂ ಜೀವನಮಟ್ಟದ ವೈವಿಧ್ಯತೆಯನ್ನು ಈ ಮಾನದಂಡಗಳಿಗೆ ಸೂಕ್ತವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಗಣಿ ಧಣಿಗಳ ಬಳ್ಳಾರಿ ನೆಲದಲ್ಲಿ, ಕಾಂಗ್ರೆಸ್ ನ ಉಗ್ರಪ್ಪಗೆ ಗೆಲವು..!ಗೆದ್ದಿದ್ದು ಎಷ್ಟು ಮತಗಳಿಂದ ಗೊತ್ತಾ..?

    ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…

  • ಸಿನಿಮಾ

    ತನ್ನ ವಿಶೇಷ ಅಭಿಮಾನಿಯೋಬ್ಬರನ್ನ ಭೇಟಿ ಮಾಡಲು ಮುಂದಾಗಿರುವ ಕಿಚ್ಚಾ ಸುದೀಪ್!ಏಕೆ ಗೊತ್ತಾ..?

    ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…

  • ಜೀವನಶೈಲಿ

    ಬಾರ್ಬಿಯಂತೆ ಕಾಣಲು ತಿಂಗಳಿಗೆ ಈ ಯುವತಿ ಭಾರೀ ಹಣ ಖರ್ಚು..!ತಿಳಿಯಲು ಈ ಲೇಖನ ಓದಿ…

    ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.

  • ಸಿನಿಮಾ, ಸ್ಪೂರ್ತಿ

    ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.

  • ಸುದ್ದಿ

    ಪತ್ನಿ ಕೇಳಿದಳೆಂದು ಮಾವಿನ ಮರವೇರಿದ ಜನಾರ್ದನ ರೆಡ್ಡಿ…..!

    ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…