ಸರ್ಕಾರದ ಯೋಜನೆಗಳು

ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

By admin

November 20, 2017

ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.

ಅಲ್ಲದೆ ಒಂದು ಗ್ರಾಮ ಪಂಚಾಯತ್‌ನಲ್ಲಿ ಎಷ್ಟು ಮಹಿಳೆಯರು ಉದ್ಯೋಗ ಹೊಂದಿದ್ದಾರೆ ಅಥವಾ ಸ್ವಯಂ ಉದ್ಯೋಗಿಗಳಾಗಿದ್ದಾರೆ ಮತ್ತು ಎಲ್‌ಪಿಜಿ ಸಂಪರ್ಕವನ್ನು ಎಷ್ಟು ಕುಟುಂಬಗಳು ಹೊಂದಿವೆ ಎಂಬುದನ್ನೂ ಪರಿಗಣಿಸಲಾಗುತ್ತದೆ. ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕುಟುಂಬಗಳ ಬಡತನ ಶ್ರೇಣಿ ಅಳೆಯಲು ಸುಮಾರು 21 ಮಾನದಂಡಗಳನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ನಿಗದಿಸಿದೆ.

ಸಾಲ, ಹೈನುಗಾರಿಕೆ, ಕೃಷಿಯೇತರ ಉದ್ಯೋಗ, ಮಾರುಕಟ್ಟೆ ಮತ್ತು ಬ್ಯಾಂಕ್‌ ಖಾತೆಗಳ ಸಂಖ್ಯೆಯ ಅಂಶಗಳನ್ನೂ ಇದರ ಅಡಿಯಲ್ಲಿ ಮೌಲೀಕರಿಸಲಾಗುತ್ತದೆ. ಕೂಲಿ ಅಥವಾ ಸ್ವಯಂ ಉದ್ಯೋಗ ಹೊಂದಿರುವ ಕುಟುಂಬವು ಒಂದು ಗ್ರಾಮ ಪಂಚಾಯಿತಿಯಲ್ಲಿ ಎಷ್ಟಿವೆ ಎಂಬುದನ್ನು ಆಧರಿಸಿ ಗ್ರಾಮ ಪಂಚಾಯತ್‌ಎಷ್ಟು ಉತ್ತಮವಾಗಿದೆ ಎಂದು ವಿಶ್ಲೇಷಿಸಲಾಗುತ್ತದೆ.

ಮಿಶನ್‌ ಅಂತ್ಯೋದಯ ಯೋಜನೆ ಅಡಿಯಲ್ಲಿ, ಗ್ರಾಮ ಪಂಚಾಯತ್‌ಗಳನ್ನು ಶ್ರೇಣೀಕರಿಸಲು ಮೂರು ಮೂಲ ಮಾನದಂಡ ಗಳಿಗೆ ಸಚಿವಾಲಯವು ಅನುಮೋದನೆ ನೀಡಿದೆ. ಮೂಲಸೌಕರ್ಯ, ಸಾಮಾಜಿಕ ಅಭಿವೃದ್ಧಿ ಮತ್ತು ರಕ್ಷಣೆ, ಆರ್ಥಿಕ ಅಭಿವೃದ್ಧಿ ಹಾಗೂ ಜೀವನಮಟ್ಟದ ವೈವಿಧ್ಯತೆಯನ್ನು ಈ ಮಾನದಂಡಗಳಿಗೆ ಸೂಕ್ತವಾಗಿದೆ.