ಸುದ್ದಿ

ಗಂಡನಂತೆ ಬಟ್ಟೆ ಧರಿಸಿ ಟ್ರೋಲ್ ಆದ ದೀಪಿಕಾ ಪಡುಕೋಣೆ…..

89

ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್‍ವೀರ್ ಸಿಂಗ್‍ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್‍ವೀರ್ ಸಿಂಗ್‍ರನ್ನು ಭೇಟಿ ಆಗಲು ಲಂಡನ್‍ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್‍ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ.

ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು. ಅಲ್ಲದೆ ಈ ಉಡುಪಿಗ ಅವರು ನ್ಯೂಡ್ ಮೇಕಪ್ ಹಾಕಿದ್ದರು. ದೀಪಿಕಾರ ಈ ಲುಕ್ ನೋಡಿ ಅಭಿಮಾನಿಗಳು ಆಶ್ಚರ್ಯಗೊಂಡರು.ಈ ಫೋಟೋ ನೋಡಿ ಅಭಿಮಾನಿಗಳು ದೀಪಿಕಾ ತನ್ನ ಪತಿ ರಣ್‍ವೀರ್ ಸಿಂಗ್ ಜೊತೆ ಇದ್ದು,

ಅವರಂತೆ ಪ್ರಭಾವಗೊಂಡಿದ್ದಾರೆ ಎಂದು ಕೆಲವರು ಕಮೆಂಟ್ ಮಾಡಿದರೆ, ಮತ್ತೆ ಕೆಲವರು ವಾಸ್ತವವಾಗಿ ಈಗ ನೀವು ಮಿಸೆಸ್ ರಣ್‍ವೀರ್ ಸಿಂಗ್ ರೀತಿ ಕಾಣುತ್ತಿದ್ದೀರಿ ಎಂದು ಕಮೆಂಟ್ ಮಾಡುವ ಮೂಲಕ ಟ್ರೋಲ್ ಆಗುತ್ತಿದ್ದಾರೆ.ಮತ್ತೆ ಕೆಲವರು ಅವರಿಬ್ಬರಿಗೆ ಮಕ್ಕಳಿದ್ದು ಹಾಗೂ ಅವರು ಈ ರೀತಿ ಉಡುಪು ಧರಿಸಿದರೆ ಇಡೀ ಕುಟುಂಬ ಸರ್ಕಸ್ ಕಂಪನಿಯಂತೆ ಕಾಣುತ್ತೆ ಎಂದು ಕಮೆಂಟ್ ಮಾಡಿದ್ದಾರೆ. ಅಲ್ಲದೆ ಕೆಲವರು ದೀಪಿಕಾ ನಿಮ್ಮ ಈ ಲುಕ್ ಕಣ್ಣಿಗೆ ಹೊಡೆಯುತ್ತಿದೆ ಎಂದು ಬರೆದಿದ್ದಾರೆ.

ರಣ್‍ವೀರ್ ಸಿಂಗ್ ಈ ನಡುವೆ ಲಂಡನ್‍ನಲ್ಲಿ ತಮ್ಮ ಮುಂಬರುವ ’83’ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ರಣ್‍ವೀರ್ ಸಿಂಗ್ ಅವರ ಜೊತೆ ಮಾಜಿ ಕ್ರಿಕೆಟ್ ಆಟಗಾರ ಕಪಿಲ್ ದೇವ್ ಕೂಡ ಇದ್ದಾರೆ. ರಣ್‍ವೀರ್ ತಮ್ಮ ಚಿತ್ರೀಕರಣದ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ನೀಡುವಂತೆ ಸಚಿವ ಸಂಪುಟ ಅಸ್ತು…!

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ‌ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…

  • ವ್ಯಕ್ತಿ ವಿಶೇಷಣ

    ಭಗತ್ ಸಿಂಗ್’ರವರ ಬಾಲ್ಯದ, ಈ ರೋಚಕ ಕಥೆ ಓದಿದ್ರೆ ನೀವು ಶಾಕ್ ಆಗ್ತೀರಾ..!

    ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.

  • ಜೀವನಶೈಲಿ

    ದಯವಿಟ್ಟು ಹೀಗೆ ಹಲ್ಲುಜ್ಜುವುದು ಬೇಡವೇ ಬೇಡ ??? ಏಕೇ ಗೊತ್ತಾ? ಮುಂದೆ ಓದಿ…..

    ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….

  • ಸಿನಿಮಾ

    ಚಂದನವನದ ನಟನ ಜೊತೆ ಹಾಸ್ಯ ನಟ ಸಿಹಿ ಕಹಿ ಚಂದ್ರು ಮಗಳ ಪ್ರೇಮ ವಿವಾಹ..ಆ ನಟ ಯಾರು ನೋಡಿ…

    ಸ್ಯಾಂಡಲ್‍ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…

  • ಆರೋಗ್ಯ

    ನೀವು ಬ್ರೇಕ್‌ಫಾಸ್ಟ್ ತಪ್ಪಿಸಿದರೆ ಈ ಗಂಭೀರ ಆರೋಗ್ಯ ಸಮಸ್ಯ ನಿಮಗೆ ಗ್ಯಾರೆಂಟಿ..!ತಿಳಿಯಲು ಈ ಲೇಖನ ಓದಿ..

    ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್‌ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ

  • ಸುದ್ದಿ

    BSNL ಲ್ಯಾಂಡ್ ಲೈನ್ ಫೋನ್ ಬಳಸುವವರಿಗೆ ಬಹುಮಾನವಾಗಿ ಕೊಡಲಿದೆ ದುಡ್ಡು..!ಯಾಕೆ ಗೊತ್ತಾ?

    ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…