ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ.

ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ ಈ ಯೋಜನೆಯಡಿ, ನೊಂದಾಯಿತ ಎಲ್ಲಾ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ತಿಂಗಳಿಗೆ 25 ದಿನದಂತೆ ವರ್ಷದಲ್ಲಿ 3೦೦ ದಿನ ನಿತ್ಯ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಉಚಿತ ಪೌಷ್ಟಿಕಾಂಶಯುಕ್ತ ಬಿಸಿಯೂಟ ವಿತರಿಸಲಾಗುತ್ತದೆ.

ಈ ಯೋಜನೆಯಡಿ ನೀಡಲಾಗುವ ಬಿಸಿಯೂಟದಲ್ಲಿ ಅನ್ನ, ಸಾಂಬಾರ್, ಬೇಯಿಸಿದ ಮೊಟ್ಟೆ, ಪಲ್ಯ, 200 ಮಿಲಿ ಹಾಲು, ಶೇಂಗಾ ಚಿಕ್ಕಿ (ಮಿಠಾಯಿ) ಸೇರಿರುತ್ತದೆ. ಮೊಟ್ಟೆ ಸೇವಿಸದವರಿಗೆ ಮೊಳಕೆ ಕಾಳು ನೀಡಲಾಗುತ್ತದೆ. ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ದಿನಕ್ಕೆ ಅಗತ್ಯವಿರುವ ಶೇ 4೦ ರಿಂದ 45 ರಷ್ಟು ಪ್ರೋಟೀನ್, ಕ್ಯಾಲರಿ ಮತ್ತು ಕ್ಯಾಲ್ಸಿಯಂ ಈ ಒಂದು ಹೊತ್ತಿನ ಊಟದಿಂದ ದೊರಕುತ್ತದೆ. ಜೊತೆಗೆ ಕಬ್ಬಿಣಾಂಶಯುಕ್ತ ಮಾತ್ರೆಯನ್ನು ನೀಡಲಾಗುತ್ತಿದ್ದು, ಊಟವಾದ ಬಳಿಕ ಕಡ್ಡಾಯವಾಗಿ ಸೇವಿಸುವಂತೆ ಸೂಚಿಸಲಾಗುತ್ತದೆ.

ಗರ್ಭಿಣಿಯರ ನೊಂದಣಿಯಿಂದ ಅವರಿಗೆ ಪ್ರಸವಪೂರ್ವ ಆರೈಕೆ ಸೇವೆಗಳು ದೊರಕುತ್ತದೆ. ಇಲ್ಲಿ ಹೆರಿಗೆಯ ಅನುಭವ ಹೊಂದಿರುವವರು ಮತ್ತು ಅನುಭವಿಗಳು ಒಂದೆಡೆ ಸೇರುವುದರಿಂದ ಅನುಭವ ಹಂಚಿಕೆ ಸಾಧ್ಯವಾಗುತ್ತದೆ. ಈ ವೇಳೆ ಅವರಿಗೆ ಆಪ್ತ ಸಮಾಲೋಚನೆ ಮಾಡಲಾಗುತ್ತದೆ. ಸ್ತನ್ಯ ಪಾನದ ಮಹತ್ವ, ಹೆರಿಗೆಯನ್ನು ಆಸ್ಪತ್ರೆಯಲ್ಲಿಯೇ ಮಾಡಿಸಿಕೊಳ್ಳುವುದು, ನಿಯಮಿತ ವೈದ್ಯಕೀಯ ತಪಾಸಣೆ, ವಿಶ್ರಾಂತಿ ಮುಂತಾದ ಅಗತ್ಯ ಮಾಹಿತಿ ನೀಡಲಾಗುತ್ತದೆ. ಪ್ರಸ್ತುತ ಗರ್ಭಿಣಿಯರು ಇರುವ ಮನೆಗೆ ಅಕ್ಕಿ, ಗೋಧಿ ಮುಂತಾದ ಧಾನ್ಯ ಪದಾರ್ಥಗಳನ್ನು ನೀಡುವ ಯೋಜನೆ ಜಾರಿಯಲ್ಲಿದೆ.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…