inspirational, ಸುದ್ದಿ

ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

41

ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ.

ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ. ಹಣ ಬಲದಿಂದ ಸರ್ಕಾರ ಉರುಳಿಸುವ ಪ್ರಯತ್ನವನ್ನು ಮಾಡಲಾಗಿದೆ’ ಎಂದು ಸಿದ್ದರಾಮಯ್ಯ ಆರೋಪಿಸಿದರು.’ಆಪರೇಷನ್ ಕಮಲಕ್ಕೆ ಕೆಲವು ಶಾಸಕರು ಟ್ರ್ಯಾಪ್ ಆಗಿದ್ದಾರೆ. ಒಂದೇ ವಿಮಾನದಲ್ಲಿ ಮುಂಬೈಗೆ ಹೋಗಿದ್ದಾರೆ. ಅಲ್ಲಿ ಒಟ್ಟಿಗೆ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇವುಗಳನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಲಾಗಿದೆ’ ಎಂದು ಸಿದ್ದರಾಮಯ್ಯ ಹೇಳಿದರು.

ರಾಜೀನಾಮೆ ನೀಡಿರುವ ಶಾಸಕರು ಗೈರು ವಿಧಾನಸೌಧದಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ 10 ಶಾಸಕರು ಸಭೆಗೆ ಗೈರಾಗಿದ್ದರು. ಸಭೆಯ ಬಳಿಕ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಧರಣಿಯನ್ನು ನಡೆಸುತ್ತಿದ್ದಾರೆ.ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿದೆ. ಶಾಸಕರಿಗೆ ಹಣ, ಸ್ಥಾನಮಾನದ ಆಮಿಷವೊಡ್ಡಿ ಅವರನ್ನು ಖರೀದಿ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ.

ಒಂದು ಗಂಟೆಗಳ ಕಾಲ ಧರಣಿ ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನಡೆ ಖಂಡಿಸಿ ಕಾಂಗ್ರೆಸ್ ನಾಯಕರು 1 ಗಂಟೆಗಳ ಕಾಲ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಬಳಿಕ ಎಲ್ಲಾ ನಾಯಕರು ಧರಣಿ ಸ್ಥಳಕ್ಕೆ ಆಗಮಿಸಿದ್ದಾರೆ.ಸ್ಪೀಕರ್‌ರಿಂದ ರಾಜೀನಾಮೆ ಪರೀಶಿಲನೆ ಮತ್ತೊಂದು ಕಡೆ ಸ್ಪೀಕರ್ ರಮೇಶ್ ಕುಮಾರ್ ಅವರು ವಿಧಾನಸೌಧದ ಕಚೇರಿಗೆ ಆಗಮಿಸಿದ್ದಾರೆ. ಕಾಂಗ್ರೆಸ್‌ನ 9, ಜೆಡಿಎಸ್‌ನ 3 ಶಾಸಕರು ನೀಡಿರುವ ರಾಜೀನಾಮೆಯನ್ನು ಅವರು ಪರಿಶೀಲನೆ ನಡೆಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಜಿಯೋ ಫ್ರೀ 4G ಫೋನ್ ಬುಕಿಂಗ್ ಶುರು!ಇವತ್ತೇ ಬುಕ್ ಮಾಡಿ.ಬುಕ್ ಮಾಡೋದು ಹೇಗೆ ಗೊತ್ತಾ?ಈ ಲೇಖನಿ ಓದಿ…

    ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…

  • ಸುದ್ದಿ

    10 ಸಾವಿರ ಅಡಿ ಎತ್ತರದಲ್ಲಿ ಇದ್ದ ವಿಮಾನದಿಂದ ಬಿದ್ದ ಈ ಹುಡುಗಿ ಅಮೆಜಾನ್ ಕಾಡಿನಲ್ಲಿ ಬದುಕಿದ್ದು ಹೇಗೆ ಗೊತ್ತಾ.

    ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…

  • inspirational

    ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸಬೇಕಾಗಿದ್ದ ಆ ಸಿನಿಮಾ ನಿಂತಿದ್ದೇಕೆ? ಇಂದ್ರಜಿತ್ ಬಿಚ್ಚಿಟ್ರು ಮೂಲ ಕಾರಣ.

    ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…

  • ಸಿನಿಮಾ

    ತೆಲುಗಿನ ಅಕ್ಕಿನೇನಿಗೆ ಜೋಡಿಯಾಗಿ ಕಿರಿಕ್ ಬೆಡಗಿ..!ತಿಳಿಯಲು ಈ ಲೇಖನ ಓದಿ..

    ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್‍ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.