ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ.
ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ. ಹಣ ಬಲದಿಂದ ಸರ್ಕಾರ ಉರುಳಿಸುವ ಪ್ರಯತ್ನವನ್ನು ಮಾಡಲಾಗಿದೆ’ ಎಂದು ಸಿದ್ದರಾಮಯ್ಯ ಆರೋಪಿಸಿದರು.’ಆಪರೇಷನ್ ಕಮಲಕ್ಕೆ ಕೆಲವು ಶಾಸಕರು ಟ್ರ್ಯಾಪ್ ಆಗಿದ್ದಾರೆ. ಒಂದೇ ವಿಮಾನದಲ್ಲಿ ಮುಂಬೈಗೆ ಹೋಗಿದ್ದಾರೆ. ಅಲ್ಲಿ ಒಟ್ಟಿಗೆ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇವುಗಳನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಲಾಗಿದೆ’ ಎಂದು ಸಿದ್ದರಾಮಯ್ಯ ಹೇಳಿದರು.
ರಾಜೀನಾಮೆ ನೀಡಿರುವ ಶಾಸಕರು ಗೈರು ವಿಧಾನಸೌಧದಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ 10 ಶಾಸಕರು ಸಭೆಗೆ ಗೈರಾಗಿದ್ದರು. ಸಭೆಯ ಬಳಿಕ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಧರಣಿಯನ್ನು ನಡೆಸುತ್ತಿದ್ದಾರೆ.ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿದೆ. ಶಾಸಕರಿಗೆ ಹಣ, ಸ್ಥಾನಮಾನದ ಆಮಿಷವೊಡ್ಡಿ ಅವರನ್ನು ಖರೀದಿ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ.
ಒಂದು ಗಂಟೆಗಳ ಕಾಲ ಧರಣಿ ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನಡೆ ಖಂಡಿಸಿ ಕಾಂಗ್ರೆಸ್ ನಾಯಕರು 1 ಗಂಟೆಗಳ ಕಾಲ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಬಳಿಕ ಎಲ್ಲಾ ನಾಯಕರು ಧರಣಿ ಸ್ಥಳಕ್ಕೆ ಆಗಮಿಸಿದ್ದಾರೆ.ಸ್ಪೀಕರ್‌ರಿಂದ ರಾಜೀನಾಮೆ ಪರೀಶಿಲನೆ ಮತ್ತೊಂದು ಕಡೆ ಸ್ಪೀಕರ್ ರಮೇಶ್ ಕುಮಾರ್ ಅವರು ವಿಧಾನಸೌಧದ ಕಚೇರಿಗೆ ಆಗಮಿಸಿದ್ದಾರೆ. ಕಾಂಗ್ರೆಸ್‌ನ 9, ಜೆಡಿಎಸ್‌ನ 3 ಶಾಸಕರು ನೀಡಿರುವ ರಾಜೀನಾಮೆಯನ್ನು ಅವರು ಪರಿಶೀಲನೆ ನಡೆಸುತ್ತಿದ್ದಾರೆ.