ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಮೋದಿ ಸರ್ಕಾರ ಕಸಾಯಿಖಾನೆಗಳಿಗೆ ಜಾನುವಾರುಗಳ ಮಾರಾಟವನ್ನು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮೂರನೇ ವರ್ಷದ ಸಂಭ್ರಮದ ಹೊತ್ತಲ್ಲೇ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.
ಪರಿಸರ ಖಾತೆ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಭಾರತ ಸರ್ಕಾರ ಒಮ್ಮತದಿಂದ ಈ ಹೊಸ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದ್ದು ಈ ವಾರವೇ ಅಧಿಸೂಚನೆ ಜಾರಿಯಗುವ ಸಾಧ್ಯತೆಯಿದೆ. ಜಾನುವಾರುಗಳನ್ನು ಕೃಷಿ ಉಪಯೋಗಕ್ಕೆ ಮಾತ್ರ ಮಾರಾಟ ಮಾಡಬೇಕು, ಕಸಾಯಿಖಾನೆಗೆ ಮಾರುವಂತಿಲ್ಲ ಎಂದು ಪ್ರಾಣಿ ಹಿಂಸೆ ತಡೆ (ಪಿಸಿಎ) ಕಾಯ್ದೆಯ 1960ರ ಸೆಕ್ಷನ್ ಅಡಿಯಲ್ಲಿ ಈ ನಿರ್ಬಂಧ ಹೇರಲಾಗಿದೆ.
ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ತೆಗೆದುಕೊಂಡು ಹೋಗುವಾಗ ಆ ರಾಜ್ಯ ಸರ್ಕಾರದ ವಿಶೇಷ ಅನುಮತಿಯನ್ನು ಪಡೆಯಬೇಕು. ಧಾರ್ಮಿಕ ಕಾರ್ಯಕ್ರಮದಲ್ಲೂ ಈ ಮೇಲೆ ತಿಳಿಸಿದ ಜಾನುವಾರುಗಳ ಹತ್ಯೆಯನ್ನು ನಿಷೇಧಿಸಲಾಗಿದೆ.
ಹೊಸ ನಿಯಮದಲ್ಲಿರುವ ಪ್ರಮುಖ ಅಂಶಗಳು
ಇನ್ನು ಮುಂದೆ ಜಾನುವಾರುಗಳನ್ನು ವ್ಯಾಪಾರ ಮಾಡುವ ಮಾರಾಟಗಾರರು ಮತ್ತು ಖರೀದಿ ಮಾಡುವವರು ಗುರುತಿನ ಚೀಟಿ ಮತ್ತು ಮಾಲೀಕತ್ವದ ದಾಖಲೆಗಳನ್ನು ತೋರಿಸಬೇಕಾಗುತ್ತದೆ.
ಖರೀದಿಸಿದ ಜಾನುವಾರನ್ನು 6 ತಿಂಗಳೊಳಗೆ ಮತ್ತೊಮ್ಮೆ ಮಾರಾಟ ಮಾಡುವಂತಿಲ್ಲ. ರೈತರಿಗೆ ಮಾತ್ರ ಜಾನುವರನ್ನು ಮಾರಾಟ ಮಾಡಬೇಕು. ಖರೀದಿಸುವಾಗ ಕಡ್ಡಾಯವಾಗಿ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಎಳೆ ಕರುಗಳನ್ನು ಅಥವಾ ಅನಾರೋಗ್ಯ ಪೀಡಿತ ಹಸುಗಳನ್ನು ಮಾರಾಟ ಮಾಡುವಂತಿಲ್ಲ.
5 ಪ್ರತಿಗಳನ್ನು ಇಟ್ಟುಕೊಳ್ಳಬೇಕು:
ಒಂದು ಹಸುವನ್ನು ಕೊಂಡುಕೊಂಡರೆ, ಜಾನುವಾರು ವ್ಯಾಪಾರಿಯು ಮಾರಾಟ ಮಾಡಿದ ದಾಖಲೆಗಳ 5 ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ. ಒಂದು ಪ್ರತಿಯನ್ನು ಸ್ಥಳೀಯ ಕಂದಾಯ ಅಧಿಕಾರಿಗೆ, ಎರಡನೇ ಪ್ರತಿಯನ್ನು ಹಸು ಖರೀದಿ ಮಾಡಿದ ವ್ಯಕ್ತಿಯ ಜಿಲ್ಲೆಯ ಸ್ಥಳೀಯ ಪಶು ವೈದ್ಯರಿಗೆ, ಮೂರನೇ ಪ್ರತಿಯನ್ನು ಜಾನುವಾರು ಮಾರುಕಟ್ಟೆ ಸಮಿತಿಗೆ ನೀಡಬೇಕಾಗುತ್ತದೆ. ಮಾರಾಟಗಾರ ಮತ್ತು ಖರೀದಿಸಿದ ವ್ಯಕ್ತಿಯೂ ಒಂದೊಂದು ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ.
ಸಂಕ್ಷಿಪ್ತ ವಾಗಿ ಏನಿದು ಇಲ್ಲಿ ನೋಡಿ.
ಕೇರಳದಲ್ಲಿ ಬಾರಿ ವಿರೋಧ
ಹಸುವಿನ ವಧೆ ನಿಷೇಧದ ಬಗ್ಗೆ ಕೇರಳ ಸರ್ಕಾರ ಕೋಪ ವ್ಯಕ್ತಪಡಿಸಿದೆ. ಸುದ್ದಿಗೆ ಪ್ರತಿಕ್ರಿಯಿಸಿದ ಕೇರಳದ ಎಡಪಕ್ಷ ಸರ್ಕಾರವು ಅದು ಫ್ಯಾಸಿಸ್ಟ್ ಚಳುವಳಿ ಎಂದು ಹೇಳಿದೆ.
ವಾಸ್ತವವಾಗಿ, ಕೇರಳದ ಮುಖ್ಯಮಂತ್ರಿ ಪಿನಾರೈ ವಿಜಯನ್ ಅವರು ಟ್ವೀಟ್ ಮಾಡಿದರು: “ಆರ್ಎಸ್ಎಸ್ ಮತ್ತು ಇತರ ಅಂಚುಗಳ ಫ್ಯಾಸಿಸ್ಟ್ ನೀತಿಗಳನ್ನು ಜಾರಿಗೆ ತರಲು ನಾವು (ಕೇಂದ್ರ) ಸರ್ಕಾರವನ್ನು ಅನುಮತಿಸುವುದಿಲ್ಲ. ಇಂತಹ ಹಲವು ಅಧಿಸೂಚನೆಗಳನ್ನು ನಾವು ಬಿಡುಗಡೆ ಮಾಡೋಣ, ನಾವು ಅವರನ್ನು ಅನುಸರಿಸುವುದಿಲ್ಲ “ಎಂದು ಕೇರಳ ಕೃಷಿ ಸಚಿವ ವಿ.ಎಸ್.ಸುನಿಲ್ ಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…
ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…
ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…