ಉಪಯುಕ್ತ ಮಾಹಿತಿ

ಗ್ರೀನ್ ಟೀ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಬೇರೆಯವರಿಗೂ ಉಪಯೋಗವಾಗಲಿ…

220

ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು.

ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ…

ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿರಿಸಲು ನೆರವಾಗುತ್ತದೆ.

ಕೊಬ್ಬು ಕರಗಿಸಲು ನೆರವಾಗುತ್ತದೆ :-

ಹಸಿರು ಟೀ ನಮ್ಮ ಪಚನಕ್ರಿಯೆ ಮತ್ತು ಜೀವರಾಸಾಯನಿಕ ಕ್ರಿಯೆಯನ್ನು ಸರಿಸುಮಾರು ಶೇಖಡಾ ನಾಲ್ಕರಷ್ಟು ಹೆಚ್ಚಿಸುತ್ತದೆ. ಈ ಹೆಚ್ಚುವರಿ ಕೆಲಸವನ್ನು ಪೂರೈಸಲು ದೇಹದಲ್ಲಿ ಶೇಖರವಾಗಿದ್ದ ಕೊಬ್ಬನ್ನು ಬಳಸಬೇಕಾಗಿ ಬರುತ್ತದೆ. ನಿತ್ಯದ ಹಸಿರು ಟೀ ಸೇವನೆಯಿಂದ ನಿಧಾನವಾಗಿಯಾದರೂ ಆರೋಗ್ಯಕರವಾಗಿ ಕೊಬ್ಬು ಕರಗುತ್ತದೆ.

ಕ್ಯಾನ್ಸರ್ ಬರದಂತೆ ತಡೆಯುತ್ತದೆ:-

ನಮ್ಮ ದೇಹದ ಎಲ್ಲಾ ಅಂಗಗಳ ಬೆಳವಣಿಗೆಗೆ ಒಂದು ಮಿತಿಯಿದೆ. ಆದರೆ ಕೆಲವು ಕೋಶಗಳು ಅನಿಯಂತ್ರಿತವಾಗಿ ಬೆಳವಣಿಗೆಯಾಗುವ ಮೂಲಕ ಕ್ಯಾನ್ಸರ್ ರೋಗವನ್ನು ಹುಟ್ಟುಹಾಕುತ್ತವೆ. ಈ ಬೆಳವಣಿಗೆಗೆ ಫ್ರೀ ರ್‍ಯಾಡಿಕಲ್ ಎಂಬ ಕಣಗಳು ಕಾರಣವೆಂದು ಇತ್ತೀಚೆಗೆ ತಿಳಿದುಬಂದಿದೆ. ಹಸಿರು ಟೀ ಯಲ್ಲಿರುವ ವಿವಿಧ ಆಂಟಿ ಆಕ್ಸಿಡೆಂಟುಗಳು ಈ ಕಣಗಳನ್ನು ಹಿಮ್ಮೆಟ್ಟಿಸಿ ಕ್ಯಾನ್ಸ್ರರ್ ತಗಲುವ ಸಂಭವವನ್ನು ಕಡಿಮೆಗೊಳಿಸುತ್ತವೆ.ವಿಶೇಷವಾಗಿ ಸ್ತನಕ್ಯಾನ್ಸರ್, ಕರುಳು ಕ್ಯಾನ್ಸರ್ ಮತ್ತು ಪ್ರಾಸ್ಟ್ರೇಟ್ ಗ್ರಂಥಿಯ ಕ್ಯಾನ್ಸರ್ ಬರದಂತೆ ಸಮರ್ಥವಾಗಿ ತಡೆಯುತ್ತದೆ ಎಂದು ತಿಳಿದುಬಂದಿದೆ.

ಕೆಟ್ಟ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ:-

ನಮ್ಮ ದೇಹದಲ್ಲಿ ಯಾವುದೋ ಮಾಯೆಯಿಂದ ಒಳಪ್ರವೇಶಿಸಿ ವಿಶೇಷವಾಗಿ ಹಲ್ಲು ಮತ್ತು ಗಂಟಲಿನೊಳಗೆ ಮನೆ ಮಾಡಿಕೊಂಡು ಹಬ್ಬ ಆಚರಿಸುತ್ತಿರುವ ವಿವಿಧ ಕೆಟ್ಟ ಬ್ಯಾಕ್ಟೀರಿಯಾಗಳನ್ನು ಕೊಲ್ಲುವಲ್ಲಿಯೂ ಹಸಿರು ಟೀ ಮಹತ್ವದ ಪಾತ್ರ ವಹಿಸುತ್ತದೆ.

ತಲೆನೋವನ್ನು ನಿವಾರಿಸಲು:-

ಹಸಿರು ಚಹಾ (ಗ್ರೀನ್ ಟೀ) ಯಲ್ಲಿ ಒಂದು ನಿರ್ಧಾರಿತ ಪ್ರಮಾಣದ ಕೆಫೀನ್ ಇದ್ದು ಇದು ಎಲ್ಲಾ ತರಹದ ತಲೆನೋವುಗಳನ್ನು ನಿವಾರಿಸಲು ಅತ್ಯಂತ ಸೂಕ್ತವಾದ ಪ್ರಮಾಣವಾಗಿದೆ. ಹಸಿರು ಟೀಯಲ್ಲಿ ಹಾಲಿಲ್ಲದೇ ಕೊಂಚವೇ ಸಕ್ಕರೆ ಸೇರಿಸಿ ಕುಡಿಯಬಹುದು ಅಥವಾ ಕೊಂಚ ಲಿಂಬೆರಸ ಸೇರಿಸುವುದರಿಂದ ರುಚಿ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆಯೂ ಹೆಚ್ಚುತ್ತದೆ.

ಚರ್ಮದ ಕಾಂತಿ ಹೆಚ್ಚಿಸಲು:-

ಒಂದು ಚಿಕ್ಕಚಮಚ ಮೊಸರಿಗೆ ಒಂದು ಚಿಕ್ಕಚಮಚ ಲಿಂಬೆಹಣ್ಣಿನ ರಸ ಸೇರಿಸಿ. (ಈಗ ತಾನೇ ಹಿಂಡಿದ ಲಿಂಬೆರಸ). ಇದಕ್ಕೆ ಒಂದರಿಂದ ಎರಡು ಚಿಕ್ಕ ಚಮಚ ಹಸಿರು ಟೀ ಕುದಿಸಿ ಸೋಸಿದ ನೀರನ್ನು ಬೆರೆಸಿ. ಈ ಲೇಪನವನ್ನು ಮುಖದ ಮೇಲೆ ನಯವಾಗಿ ಒಮ್ಮುಖವಾಗಿ ಹಚ್ಚಿರಿ. ಸುಮಾರು ಹದಿನೈದು ನಿಮಿಷ ಒಣಗಲು ಬಿಡಿ. ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ. ಸೋಪು ಉಪಯೋಗಿಸಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ