ಸುದ್ದಿ

ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

84

ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು.

ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ 2.40ರ ನಸುಕಿನಲ್ಲಿ ನಭಕ್ಕೆ ಚಿಮ್ಮಬೇಕಿತ್ತು.ಇದರೊಂದಿಗೆ ಇಸ್ರೋ ಈ ಹಿಂದೆ ಯಾವ ರಾಷ್ಟ್ರವೂ ತಲುಪಲು ಸಾಧ್ಯವಾಗದ ಚಂದಿರನ ಪಾಶ್ರ್ವವೊಂದರಲ್ಲಿ ಮಹತ್ವದ ಸಂಶೋಧನೆ ನಡೆಸಬೇಕಿತ್ತು. 57 ದಿನಗಳ ಭಾರತದ ಈ ಚಂದ್ರಯಾನ-2 ಇಡೀ ವಿಶ್ವದ ಕುತೂಹಲ ಕೆರಳಿಸಿತ್ತು.

ಚಂದ್ರಯಾನ-2 ಗಗನನೌಕೆಯನ್ನು ಹೊತ್ತು ಅಂತರಿಕ್ಷಕ್ಕೆ ಚಿಮ್ಮಲಿರುವ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ 44 ಮೀಟರ್‍ಗಳಷ್ಟು ಎತ್ತರವಿದೆ. ಇದೇ ಕಾರಣಕ್ಕಾಗಿ ಇದನ್ನು ಬಾಹುಬಲಿ ರಾಕೆಟ್ ಎಂದು ಹೆಸರಿಡಲಾಗಿತ್ತು.ಈ ಬಾಹುಬಲಿ 3.8 ಟನ್‍ಗಳ ಚಂದ್ರಯಾನ-2 ನೌಕೆಯನ್ನು ಶಶಾಂಕನತ್ತ ಹೊತ್ತೊಯ್ದು ನಿಗದಿತ ಸ್ಥಳದಲ್ಲಿ ಇಳಿಸಬೇಕಿತ್ತು. 375 ಕೋಟಿ ರೂ.

ವೆಚ್ಚದ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ 15 ನಿಮಿಷಗಳ ಪ್ರಯಾಣದ ನಂತರ 603 ಕೋಟಿ ರೂ. ವೆಚ್ಚದ ಚಂದ್ರಯಾನ-2 ಗಗನೌಕೆಯನ್ನು ಚಂದ್ರನ ಮೇಲೆ ಇಳಿಸುವ ಯೋಜನೆಯಾಗಿತ್ತು.ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನ ಉಪಗ್ರಹವನ್ನು ಜಿಎಸ್‍ಎಲ್‍ವಿ ಶ್ರೇಣಿಯ ರಾಕೆಟ್‍ನಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.ಇಸ್ರೋ ಅಂತರಿಕ್ಷ ಯಾನ ಮತ್ತು ಪ್ರಯೋಗದಲ್ಲಿ ವಿಶ್ವದಲ್ಲೇ ಅತ್ಯಂತ ಮುಂಚೂಣಿ ಸ್ಥಾನದಲ್ಲಿದ್ದು, ಅನೇಕ ದಾಖಲೆಗಳಿಗೆ ಪಾತ್ರವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಗ್ ಬ್ರೇಕಿಂಗ್ ನ್ಯೂಸ್ : ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…

  • ಆರೋಗ್ಯ

    ನಿಂಬೆ ಸಿಪ್ಪೆಯನ್ನ ಬಿಸಾಡ್ತೀದೀರಾ ಇನ್ನು ಮುಂದೆ ಬಿಸಾಡಬೇಡಿ ಇದರಿಂದ ಸಾಕಷ್ಟು ಉಪಯೋಗಗಳಿವೆ.

    ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…

  • ಉಪಯುಕ್ತ ಮಾಹಿತಿ, ಸೌಂದರ್ಯ

    ನಿಮ್ಮ ಸೌಂದರ್ಯ ಮತ್ತು ಆರೋಗ್ಯಕ್ಕಾಗಿ ಲೋಳೆಸರ(ಅಲೋವೇರ)ದ ಈ 15 ಅದ್ಭುತ ಪ್ರಯೋಜನಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ

  • ಸಿನಿಮಾ, ಸುದ್ದಿ

    ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

    ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….

  • ಸುದ್ದಿ

    ‘ಕಾರ್ಗಿಲ್‌’ ಮೀನುಗಳ ಕಾಟ ; ಗಗನಕ್ಕೇರಿದ ಮೀನಿನ ಬೆಲೆ,.!!

    ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ  ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್‌ ಮೀನಿನ ಕಾಟವು  ಮುಂದುವರೆದಿದೆ ಇದರಿಂದ  ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು  ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್‌ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…