ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನ ಅನ್ನೋ ಹೆಸರು ಕೇಳಿದ್ರೆ, ಹೆಂಗಳೆಯರ ಮುಖ ಅರಳುತ್ತೆ. ಆದರೆ ಇನ್ನೂ ಮುಂದೆ ಚಿನ್ನ ಕೊಳ್ಳಬೇಕಾದ್ರೆ ಯೋಚನೆ ಮಾಡಬೇಕಾಗುತ್ತೆ.ಯಾಕೆ ಗೊತ್ತಾ? ಮುಂದೆ ಓದಿ…
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಕೇಂದ್ರ ಸರ್ಕಾರ ಮೊದಲೇ 2 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತದ ಚಿನ್ನದ ವಹಿವಾಟು ನಡೆಸುವಾಗ ಪಾನ್ ಸಂಖ್ಯೆಯನ್ನು ನಮೂದಿಸುವುದನ್ನು ಕಡ್ಡಾಯ ಮಾಡಿತ್ತು.
ತೆರಿಗೆ ವಂಚನೆಯನ್ನು ತಪ್ಪಿಸಲು ಈ ಕಾನೂನು ಜಾರಿ…
ತೆರಿಗೆ ಕಳ್ಳರು ತೆರಿಗೆ ವಂಚಿಸುವುದನ್ನು ತಡೆಯಲು ಕೇಂದ್ರ ಸರ್ಕಾರ ಈ ಕ್ರಮ ತೆಗೆದುಕೊಂಡಿದ್ದು, ಚಿನ್ನದ ಪ್ರಿಯರು ಚಿನ್ನ ಕೊಳ್ಳುವ ಮುಂಚೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ನಂಬರ್’ನ್ನು ಕಡ್ಡಾಯವಾಗಿ ನಮೂದಿಸಬೇಕಾಗಿದೆ.
ಚಿನ್ನವನ್ನು ಖರೀದಿ ವ್ಯವಹಾರದಲ್ಲಿನ ತೆರಿಗೆ ವಂಚನೆಯನ್ನು ತಡೆಯಲು ಇಂತಹ ಕ್ರಮ ಕೈಗೊಳ್ಳಲಾಗಿದೆ. ಚಿನ್ನದ ದಾಸ್ತಾನು ವ್ಯವಹಾರ ಕಡ್ಡಾಯವಾಗಿ ನಮೂದಿಸುವುದರಿಂದ ವಂಚನೆ ತಡೆಯಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಅಲ್ಲದೇ, ಆದಾಯ ತೆರಿಗೆ ಮಾಹಿತಿಯ ಸಮಗ್ರ ಬಳಕೆ, ಚಿನ್ನದ ವ್ಯವಹಾರಗಳಿಗೆ ಪಾನ್ ಸಂಖ್ಯೆಯ ಕಡ್ಡಾಯ ಮಾಡುವುದರಿಂದ ತೆರಿಗೆ ವಂಚನೆ ತಡೆಯಬಹುದು ಎಂದು ಹೇಳಲಾಗಿದೆ.
ಹೀಗಾಗಿ ಕೇಂದ್ರ ಸರ್ಕಾರ ಚಿನ್ನದ ಎಲ್ಲಾ ವ್ಯವಹಾರಗಳಿಗೆ ಪಾನ್ ಕಡ್ಡಾಯ ಎಂದು ಹೇಳಿದೆ. ಹೀಗಾಗಿ ಚಿನ್ನದ ಪ್ರಿಯರು ಚಿನ್ನ ಕೊಳ್ಳುವುದಕ್ಕೆ ಮುಂಚೆ ಪಾನ್ ನೋಂದಣಿ ಮಾಡುವುದು ಕಡ್ಡಾಯವಾಗಿದೆ.
ಹಾಗಾದ್ರೆ ಎಲ್ಲರ ಹತ್ತಿರ ಪಾನ್ ಇದೆಯಾ ಎಂಬುದೇ ಪ್ರಶ್ನೆಯಾಗಿದೆ..?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್ರವರು ಚೆಕ್ನಲ್ಲೋ, ಡಿಡಿಯಲ್ಲೋ, ಇಎಂಐನಲ್ಲೊ…
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…