ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.
ಕಳೆದ ವಾರ ಚೀನಾದ ಪ್ರಮುಖ ನಗರಗಳಲ್ಲಿ ಬಿಡುಗಡೆಗೊಂಡಿರುವ ‘ಸೀಕ್ರೆಟ್ ಸೂಪರ್ಸ್ಟಾರ್’, ಮೂರೇ ದಿನಗಳಲ್ಲಿ 174 ಕೋಟಿ ರೂ. ಬಾಚುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಆ ಮೂಲಕ ಮೊದಲವಾರದ ಗಳಿಕೆಯಲ್ಲಿ ಅದು ದಂಗಲ್ ಚಿತ್ರದ ದಾಖಲೆಯನ್ನು ಮುರಿದಿದೆ.
ಅಂದಹಾಗೆ, ಭಾರತದಲ್ಲಿಯೂ ‘ಸೀಕ್ರೆಟ್ ಸೂಪರ್ಸ್ಟಾರ್’ನ ಮೊದಲ ವಾರದ ಗಳಿಕೆ ಕೇವಲ 30 ಕೋಟಿ ರೂ.ಯಾಗಿತ್ತು. ಕೇವಲ 15 ಕೋಟಿ ವೆಚ್ಚದಲ್ಲಿ ತಯಾರಾಗಿರುವ ‘ಸೀಕ್ರೆಟ್ ಸೂಪರ್ಸ್ಟಾರ್’ಗೆ ಚೀನಾ ಪ್ರೇಕ್ಷಕರು ಫಿದಾ ಆಗಿರುವುದು ಬಾಲಿವುಡ್ ಚಿತ್ರಮಂದಿಯನ್ನು ದಂಗುಬಡಿಸಿದೆ.
ಕಳೆದ ವರ್ಷ ಚೀನಾದಲ್ಲಿ ಬಿಡುಗಡೆಗೊಂಡ ದಂಗಲ್ 1,100 ಕೋಟಿ ರೂ. ಬಾಚಿತ್ತು. ಈ ಚಿತ್ರದ ಪ್ರಚಂಡ ಯಶಸ್ಸಿನ ಬಳಿಕ ಆಮಿರ್, ಆ ದೇಶದಲ್ಲೂ ಜನಪ್ರಿಯ ನಟನೆನಿಸಿಕೊಂಡಿದ್ದಾರೆ. ಇದಕ್ಕೂ ಮುಂಚೆ ಆಮಿರ್ ಅಭಿನಯದ 3 ಇಡಿಯಟ್ಸ್ ಹಾಗೂ ಪಿಕೆ ಕೂಡಾ ಭಾರೀ ಯಶಸ್ಸು ಕಂಡಿದ್ದವು.
ದಂಗಲ್ ಹುಡುಗಿ ಝೈರಾವಾಸಿಂ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಸೀಕ್ರೆಟ್ ಸೂಪರ್ಸ್ಟಾರ್’, ಮುಸ್ಲಿಂ ಬಾಲಕಿಯೊಬ್ಬಳು ಹಲವಾರು ಅಡೆತಡೆಗಳನ್ನು ಮೀರಿ, ಪ್ರಖ್ಯಾತ ಗಾಯಕಿಯಾಗುವ ರೋಚಕ ಕಥೆಯನ್ನು ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….
78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್ನ ಸಂಗ್ರೂರ್ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…