ಉಪಯುಕ್ತ ಮಾಹಿತಿ

ಜಗತ್ತಿನಲ್ಲಿ ಬಿರುಗಾಳಿ ಎಬ್ಬಿಸುತ್ತಿರುವ ಬಿಟ್‌ಕಾಯಿನ್‌ ಹಣದ ಬಗ್ಗೆ ನಿಮಗೆ ಗೊತ್ತಾ..?ನಿಮ್ಮಲ್ಲಿ ಬಿಟ್‌ಕಾಯಿನ್‌ ಕರೆನ್ಸಿ ಇದ್ರೆ ನೀವ್ ಏನಾಗ್ತೀರಾ..?ತಿಳಿಯಲು ಈ ಲೇಖನ ಓದಿ…

561

ಬಿಟ್‌ಕಾಯಿನ್‌ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್‌ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್‌ಕಾಯಿನ್‌” ಕೂಡ ವರ್ಚುಯಲ್‌, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್‌ಕಾಯಿನ್‌ ಅಸ್ತಿತ್ವ ಕಂಪ್ಯೂಟರ್‌ ಪ್ರಪಂಚಕ್ಕೆ ಸೀಮಿತ. ನಾವೆಲ್ಲ ಪರ್ಸಿನಲ್ಲಿ ದುಡ್ಡು ಇಟ್ಟುಕೊಳ್ಳುತ್ತೇವಲ್ಲ, ಬಿಟ್‌ಕಾಯಿನ್‌ಗಳನ್ನು ಕಂಪ್ಯೂಟರಿನಲ್ಲಿರುವ ಡಿಜಿಟಲ್‌ ವ್ಯಾಲೆಟ್‌ಗಳಲ್ಲಷ್ಟೆ ಇಟ್ಟುಕೊಳ್ಳುವುದು ಸಾಧ್ಯ

 ಏನಿದು ಬಿಟ್‌ಕಾಯಿನ್?

ಬಳಕೆದಾರರು ಹೇಳುವ ಪ್ರಕಾರ ಇದು ಒಂದು ಡಿಜಿಟಲ್ ಕರೆನ್ಸಿ. ಜಗತ್ತಿನ ಯಾವುದೇ ಭಾಗದಿಂದ ಕೆಲವೇ ನಿಮಿಷಗಳಲ್ಲಿ ಹಣ ಕಳಿಸಲು ಅಥವಾ ಪಡೆಯಲು ಬಳಸಬಹುದು. ಕೆಲವು ಕಡೆಗಳಲ್ಲಿ ಉತ್ಪನ್ನ ಮತ್ತು ಸೇವೆಗಳನ್ನು ಪಡೆಯಲು ಕೂಡ ಉಪಯೋಗಿಸಬಹುದು. ಷೇರು ಮತ್ತು ಚಿನ್ನದಲ್ಲಿ ಹೂಡಿಕೆ ಬೇಕಾದರೂ ಮಾಡಬಹುದು. ಆದರೆ ಇಲ್ಲಿ ವರ್ಗಾವಣೆಗಳೆಲ್ಲವೂ ಇಂಟರ್‌ನೆಟ್ ಮೂಲಕ ನಡೆಯುತ್ತದೆ. ಬಿಟ್‌ಕಾಯಿನ್‌ನ ಮೌಲ್ಯವನ್ನು ಕೊನೆಯಲ್ಲಿ ನಿಮ್ಮ ಆಯ್ಕೆಯ ಕರೆನ್ಸಿಗೆ ಪರಿವರ್ತಿಸಿಕೊಳ್ಳಬಹುದು.

ಬಿಟ್‌ಕಾಯಿನ್ ಸೃಷ್ಟಿಕರ್ತ ಯಾರು..?

ಬಿಟ್‌ಕಾಯಿನ್‌ ವ್ಯವಸ್ಥೆ ಪರಿಚಯವಾದದ್ದು 2009ರಲ್ಲಿ. ಸಟೋಶಿ ನಕಾಮೋಟೋ ಎಂಬ ಹೆಸರಿನ ಅಜ್ಞಾತ ವ್ಯಕ್ತಿಯನ್ನು ಬಿಟ್‌ಕಾಯಿನ್‌ ಸೃಷ್ಟಿಕರ್ತ ಎಂದು ಗುರುತಿಸಲಾಗುತ್ತದೆ. ಆದರೆ, ಅದು ಯಾರಾದರೂ ನಿಜವಾದ ಹೆಸರೋ ಅಲ್ಲವೋ ಎನ್ನುವುದರ ಬಗ್ಗೆ ಸಾಕಷ್ಟು ಸಂದೇಹಗಳಿವೆ. ಅಷ್ಟೇ ಅಲ್ಲ, ಬಿಟ್‌ಕಾಯಿನ್‌ ಸೃಷ್ಟಿಯ ಹಿಂದೆ ದೊಡ್ಡದೊಂದು ತಂಡವೇ ಇರುವ ಸಂಶಯ ಕೂಡ ಇದೆ.
ಪ್ರತಿ ದೇಶದಲ್ಲೂ ಚಲಾವಣೆಯಲ್ಲಿರುವ ಕರೆನ್ಸಿಗಳಂತೆ ಬಿಟ್‌ಕಾಯಿನ್‌ ಅನ್ನು ಯಾವುದೇ ಬ್ಯಾಂಕ್‌ ಅಥವಾ ಸರಕಾರ ನಿಯಂತ್ರಿಸುವುದಿಲ್ಲ. ಹಾಗೆಂದ ಮಾತ್ರಕ್ಕೆ ಬಿಟ್‌ಕಾಯಿನ್‌ ಕರೆನ್ಸಿಯನ್ನು ಗೊತ್ತುಗುರಿಯಿಲ್ಲದಂತೆ ಚಲಾವಣೆಗೆ ತರಲಾಗುತ್ತದೆ ಎಂದೇನೂ ಇಲ್ಲ, ಪೂರೈಕೆ ಹೆಚ್ಚಾಗಿ ಹಣದುಬ್ಬರ ಉಂಟಾಗದಂತೆ ತಡೆಯಲು ಪ್ರತಿ ಬಾರಿಯೂ ನಿರ್ದಿಷ್ಟ ಪ್ರಮಾಣದ ಬಿಟ್‌ಕಾಯಿನ್‌ಗಳಷ್ಟೆ ಹೊಸದಾಗಿ ಚಲಾವಣೆಗೆ ಬರುತ್ತವೆ.

ಈ ಬಿಟ್‌ಕಾಯಿನ್‌ ಅನ್ನು ಸಂಪಾದಿಸುವುದು ಹೇಗೆ..?

ಬಿಟ್‌ಕಾಯಿನ್‌ ಸಂಪಾದಿಸಬೇಕು ಎನ್ನುವವರು ತಮ್ಮ ಕಂಪ್ಯೂಟರುಗಳಲ್ಲಿ ಒಂದು ವಿಶೇಷ ತಂತ್ರಾಂಶವನ್ನು ಅನುಸ್ಥಾಪಿಸಿಕೊಳ್ಳಬೇಕು. ಅನೇಕ ಜನರು ಹೀಗೆ ಸೇರಿದಾಗ ದೊರಕುವ ಸಂಸ್ಕರಣಾ ಸಾಮರ್ಥಯವನ್ನು ಬಳಸಿಕೊಂಡು ವಿಶ್ವದೆಲ್ಲೆಡೆ  ಬಿಟ್‌ಕಾಯಿನ್‌ ಬಳಕೆದಾರರು ನಡೆಸುವ ವಹಿವಾಟನ್ನೆಲ್ಲ ಸಂಸ್ಕರಿಸುವ ಕೆಲಸ ನಡೆಯುತ್ತದೆ. ಈ ಪ್ರಕ್ರಿಯೆಯಲ್ಲಿ ಹಲವಾರು ಸಂಕೀರ್ಣ ಲೆಕ್ಕಾಚಾರಗಳನ್ನು ಕೈಗೊಳ್ಳಬೇಕಾದ್ದರಿಂದ ಅದು ಕ್ಲಿಷ್ಟವಷ್ಟೇ ಅಲ್ಲ, ನಿಧಾನವೂ ಹೌದು. ಈ ಪ್ರಕ್ರಿಯೆ ಮುಂದುವರಿಯುತ್ತ ಹೋದಂತೆ ಅದರಲ್ಲಿ ನೆರವಾದವರಿಗೆ ಬಿಟ್‌ಕಾಯಿನ್‌ ರೂಪದ ಹಣ ದೊರಕುತ್ತ ಹೋಗುತ್ತದೆ, ಆ ಮೂಲಕ ಚಲಾವಣೆಯಲ್ಲಿರುವ ಬಿಟ್‌ಕಾಯಿನ್‌ಗಳ ಪ್ರಮಾಣವೂ ಹೆಚ್ಚುತ್ತದೆ. ಬಳ್ಳಾರಿಯಲ್ಲಿ ಮಣ್ಣು ಬಗೆಯುವ ಬದಲು ಕಂಪ್ಯೂಟರಿನಲ್ಲಿ ಬಿಟ್‌ಕಾಯಿನ್‌ ಕೂಡಿಸುವ ಈ ಪ್ರಕ್ರಿಯೆಗೂ ಮೈನಿಂಗ್‌ ಎಂದೇ ಹೆಸರು. ಈಚೆಗೆ ಬಿಟ್‌ಕಾಯಿನ್‌ ಗಣಿಗಾರಿಕೆಯ ಈ ಕೆಲಸ ಸಾಧಾರಣ ಕಂಪ್ಯೂಟರುಗಳ ಸಾಮರ್ಥಯವನ್ನು ಮೀರಿ ಬೆಳೆದುಬಿಟ್ಟಿರುವುದರಿಂದ ಅದಕ್ಕೆಂದೇ ಮೈನರ್‌ಗಳೆಂಬ ವಿಶೇಷ ಯಂತ್ರಾಂಶಗಳೂ ತಯಾರಾಗುತ್ತಿವೆ.

ಷೇರು ಮಾರುಕಟ್ಟೆ ಜೂಜು..!

ಇತ್ತೀಚೆಗೆ ಒಂದು ಬಿಟ್‌ಕಾಯಿನ್‌ನ ಬೆಲೆ 10,000 ಡಾಲರ್‌ನಷ್ಟು ಏರಿರುವುದು ವಿಶ್ವದೆಲ್ಲೆಡೆ ಆತಂಕಕ್ಕೆ ಕಾರಣವಾಗಿದ್ದು, ಇದನ್ನು ಷೇರು ಮಾರುಕಟ್ಟೆ ಜೂಜು ಎಂದು ಕರೆಯುತ್ತಿದ್ದಾರೆ. ಕೇವಲ 4 ತಿಂಗಳಿನಲ್ಲಿ 6 ಲಕ್ಷ ಬೆಲೆ ಏರಿಕೆಯಾಗಿರುವುದು ಇದಕ್ಕೆ ಉದಾಹರಣೆಯಾಗಿದ್ದು, ಇಷ್ಟೆಲ್ಲ ದುಡ್ಡು ಯಾಕೆ ಸುರಿಯುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ.!!

ಇದರ ಅನುಕೂಲಗಳು ಮತ್ತು ಅನಾನುಕುಲಗಳ ಬಗ್ಗೆ ತಿಳಿಯಿರಿ…

  • 1. ಬೇರೆಲ್ಲಾ ಮಾಧ್ಯಮಗಳಿಗಿಂತ ತ್ವರಿತವಾಗಿ ಮತ್ತು ಸುರಕ್ಷಿತವಾಗಿ ಹಣ ವರ್ಗಾವಣೆ ಸಾಧ್ಯ. ಶುಲ್ಕವೂ ಅತೀ ಕಡಿಮೆ.
  • 2. ಯಾವುದೇ ಕ್ರೆಡಿಟ್ ಕಾರ್ಡ್ ಇಲ್ಲದೆಯೂ ಬಿಟ್ ಕಾಯಿನ್‍ಗಳನ್ನು  ನೀವು ಹೊಂದಬಹುದು, ಅವುಗಳನ್ನು  ಇನ್ನೊಬ್ಬರಿಗೆ ವರ್ಗಾಯಿಸಬಹುದು.
  • 3. ಬಿಟ್ ಕಾಯಿನ್ ಮೂಲಕ ಒಮ್ಮೆ ಮಾಡಿದ  ಪಾವತಿಯನ್ನು ರದ್ದು ಮಾಡಲು ಆಗುವುದಿಲ್ಲ.
  • 4. ಇತರೆ ಹಣಕಾಸು ವಹಿವಾಟುಗಳ ಹೋಲಿಕೆಯಲ್ಲಿ ಬಿಟ್ ಕಾಯಿನ್  ಅಷ್ಟು ಸುಲಭವಾಗಿ  ಪತ್ತೆ ಮಾಡಲಾಗುವುದಿಲ್ಲ. ಯಾರ ನಿಯಂತ್ರಣವೂ ಇಲ್ಲದ ಕಾರಣ ಸರಕಾರದ ಅಥವಾ ಹಣಕಾಸು  ಇಲಾಖೆಯ ಗಮನಕ್ಕೆ ಬಾರದೇ ಮೊತ್ತ ವರ್ಗಾವಣೆ ಮಾಡಬಹುದು.ಹೀಗಾಗಿ ಬೇನಾಮಿ ಹಣಪಾವತಿಗಳು, ಹವಾಲಾಗಳು ಈ ಮಾಧ್ಯಮದಿಂದ ನಡೆಯುವ ಸಾಧ್ಯತೆಯೂ ಇದೆ.

 

 

 ಬಿಟ್‌ಕಾಯಿನ್‌ ‘ನ ಪ್ರಮುಖ ಉಪಯೋಗಗಳೇನು..?

ಹಣದ ತ್ವರಿತ ವರ್ಗಾವಣೆಗೆ ಇಲ್ಲಿ ಸಂಸ್ಕರಣೆ ಶುಲ್ಕ ಇರುವುದಿಲ್ಲ. ಇದ್ದರೂ ಅತ್ಯಲ್ಪ. ವಿಶ್ವಾದ್ಯಂತ ಚಲಾವಣೆ ಮಾಡಬಹುದು. ಆದರೆ ಚೀನಾ ಇತ್ತೀಚೆಗೆ ತನ್ನ ಬ್ಯಾಂಕಿಂಗ್ ವಲಯದಲ್ಲಿ ಬಳಕೆಯನ್ನು ನಿಷೇಧಿಸಿದೆ. ಉತ್ಪನ್ನ, ಸೇವೆಗಳ ಖರೀದಿಗೆ ಬಳಸಬಹುದು. ಒಂದು ವೇಳೆ ನಷ್ಟವಾದರೆ ತಡೆದುಕೊಳ್ಳಬಲ್ಲೆ ಎಂಬ ನಂಬಿಕೆ ಇದ್ದರೆ ಹೂಡಿಕೆಯನ್ನೂ ಮಾಡಬಹುದು. ವರ್ಡ್‌ಪ್ರೆಸ್, ರೆಡಿಟ್, ನೇಮ್‌ಚೀಪ್ ಮತ್ತು ಫ್ಲಾಟ್ಟರ್ ಮುಂತಾದ ಆನ್‌ಲೈನ್ ತಾಣಗಳು ಬಿಟ್‌ಕಾಯಿನ್‌ಗಳನ್ನು ನೇರವಾಗಿ ಸ್ವೀಕರಿಸುತ್ತವೆ.

ಇದರಿಂದ ಆಗುವ ಅಪಾಯಗಳೇನು..?

ಬಿಟ್‌ಕಾಯಿನ್‌ಗಳು ಅಪರಾಧಿಗಳಿಗೆ ಆರ್ಥಿಕ ಅಪರಾಧಗಳನ್ನು ಎಸಗಲು ಹಾದಿ ಮಾಡಿಕೊಟ್ಟಿದೆ. ಮಾದಕ ದ್ರವ್ಯಗಳ ಕಳ್ಳಸಾಗಣೆದಾರರಿಗೆ ಹಣ ವರ್ಗಾವಣೆಗೆ ಬಿಟ್‌ಕಾಯಿನ್‌ಗಳು ಬಳಕೆಯಾಗುತ್ತದೆ. ಯಾಕೆಂದರೆ ಇಲ್ಲಿ ಹಣದ ವರ್ಗಾವಣೆ ಯಾರು ಯಾರಿಗೆ ಮಾಡಿದರು ಎಂಬ ವಿವರವನ್ನು ಪತ್ತೆ ಹಚ್ಚಲಾಗುವುದಿಲ್ಲ. ಇದರ ಬೆಲೆ ಕೂಡ ಕ್ಷಣ ಕ್ಷಣಕ್ಕೆ ತೀವ್ರ ಏರಿಳಿತವಾಗುತ್ತಿರುವುದರಿಂದ ಹೂಡಿಕೆದಾರರಿಗೆ ಯಾವಾಗ ಬೇಕಾದರೂ ಭಾರಿ ನಷ್ಟವಾಗಬಹುದು. ಅಲ್ಲದೆ ಬಳಕೆದಾರರು ಹೆಚ್ಚಿದಂತೆ ಲಭ್ಯತೆ ಕಡಿಮೆಯಾಗುತ್ತದೆ.

ಅಂತರಜಾಲದಲ್ಲೇ  ಬಿಟ್‌ಕಾಯಿನ್‌ಗಳನ್ನು ಕದಿಯುತ್ತಾರೆ..!

ಈಗ ಬೇರೊಬ್ಬರ ಬಿಟ್‌ಕಾಯಿನ್‌ಗಳನ್ನು ಕದ್ದು ಬಳಸುವ ವಂಚಕರೂ ಹುಟ್ಟಿಕೊಂಡಿದ್ದಾರೆ. ಕಳೆದ ಎರಡು-ಮೂರು ವರ್ಷಗಳಲ್ಲಿ ಬಳಕೆದಾರರ ಸಾವಿರಾರು ಬಿಟ್‌ಕಾಯಿನ್‌ಗಳು ಕಳ್ಳತನವಾದ ಅನೇಕ ಘಟನೆಗಳು ವರದಿಯಾಗಿವೆ. ಅಂತರಜಾಲದಲ್ಲಿರುವ ಬಿಟ್‌ಕಾಯಿನ್‌ ವಿನಿಮಯ ಕೇಂದ್ರಗಳಿಗೂ ಹಲವುಬಾರಿ ಕನ್ನಹಾಕಿದ ಕಳ್ಳರು ಅಲ್ಲೂ ತಮ್ಮ ಕೈಚಳಕ ತೋರಿಸಿದ್ದರು. ಅಂತಹ ಒಂದು ಸಂದರ್ಭದಲ್ಲಿ ಉಂಟಾದ ಗೊಂದಲ ಎಷ್ಟರಮಟ್ಟಿಗಿತ್ತು ಎಂದರೆ ಬಿಟ್‌ಕಾಯಿನ್‌ಗಳ ವಿನಿಮಯ ದರ ಒಮ್ಮೆಲೇ ಹತ್ತಾರು ಪಟ್ಟು ಕುಸಿದು ಅವುಗಳ ಅಸ್ತಿತ್ವಕ್ಕೇ ಸಂಚಕಾರ ಬರುವಂತಹ ಪರಿಸ್ಥಿತಿ ಉಂಟಾಗಿತ್ತು.

ಭಾರತದಲ್ಲಿ ಕಾನೂನುಬದ್ಧವೇ..?

ಈ ಡಿಜಿಟಲ್‌ ಕರೆನ್ಸಿಗೆ ದೇಶದಲ್ಲಿ ಕಾನೂನಿನ ಮಾನ್ಯತೆ ಇಲ್ಲ. ಇವುಗಳ ಖರೀದಿ ಮತ್ತು ವಹಿವಾಟಿನ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್‌ ಈಗಾಗಲೇ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಸದ್ಯ ಬಿಟ್‌ಕಾಯಿನ್‌ ಮೇಲೆ ಯಾವುದೇ ಸರಕಾರ ಅಥವಾ ಕೇಂದ್ರೀಯ ಪ್ರಾಧಿಕಾರದ ನಿಯಂತ್ರಣ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ವಿವಿಧ ಸರಕಾರಗಳು ಬಿಟ್‌ಕಾಯಿನ್‌ ಮೇಲೆ ನಿರ್ಬಂಧ ಹೇರಲು ಪ್ರಯತ್ನಿಸಬಹುದು ಎಂಬ ಊಹೆ ಕೂಡ ಇದೆ. ಹಣಕಾಸು ಸಂಸ್ಥೆಗಳು ಬಿಟ್‌ಕಾಯಿನ್‌ ವಹಿವಾಟಿನಲ್ಲಿ ತೊಡಗದಂತೆ ಕೆಲದಿನಗಳ ಹಿಂದೆ ಚೀನಾದಲ್ಲಿ ಘೋಷಣೆಯಾದ ನಿರ್ಬಂಧ ಇದಕ್ಕೊಂದು ಉದಾಹರಣೆ.

ಬಿಟ್‌ಕಾಯಿನ್ ಸುರಕ್ಷಿತವೇ..?

ಸದ್ಯ ಬಿಟ್‌ಕಾಯಿನ್‌ ಮೇಲೆ ಯಾವುದೇ ಸರಕಾರ ಅಥವಾ ಕೇಂದ್ರೀಯ ಪ್ರಾಧಿಕಾರದ ನಿಯಂತ್ರಣ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ವಿವಿಧ ಸರಕಾರಗಳು ಬಿಟ್‌ಕಾಯಿನ್‌ ಮೇಲೆ ನಿರ್ಬಂಧ ಹೇರಲು ಪ್ರಯತ್ನಿಸಬಹುದು ಎಂಬ ಊಹೆ ಇದೆ.ಬಿಟ್‌ಕಾಯಿನ್‌ ಮೌಲ್ಯದಲ್ಲಿ ಬಹಳ ಕ್ಷಿಪ್ರವಾಗಿ ಸಂಭವಿಸುವ ಏರಿಳಿತಗಳಿಂದ ಅವುಗಳ ಸ್ಥಿರತೆಯ ಬಗೆಗೂ ಅನುಮಾನ ಮೂಡಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.

  • ಸೌಂದರ್ಯ

    ಮೆಂತೆ ಕಾಳು ಬಳಸಿ ನಿಮ್ಮ ‘ಸೌಂದರ್ಯವನ್ನು’ ಹೆಚ್ಚಿಸಿಕೊಳ್ಳಿ

    ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…

  • ಸುದ್ದಿ

    ಆನ್‌ ಲೈನ್‌ ವ್ಯಾಪಾರಕ್ಕೆ ಬೀಳಲಿದೆಯಾ ಬ್ರೇಕ್…?

    ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್‌ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…

  • ಆಧ್ಯಾತ್ಮ

    ಮಾರ್ಚ್ 4 ಮಹಾಶಿವರಾತ್ರಿ..ಇಂದು ತಪ್ಪದೆ ಈ ಕೆಲಸ ಮಾಡಿ…

    ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.