ಗ್ಯಾಜೆಟ್

ಜಿಯೋ ಗ್ರಾಹಕರೇ ಎಚ್ಚರ..!ಇನ್ಮೇಲೆ ಈ ಆಫರ್ ಸಿಗಲ್ಲ!ಯಾಮಾರಿದ್ರೆ ನಿಮ್ಮ ಜೋಬಿಗೆ ಬೀಳುತ್ತೆ ಕತ್ತರಿ..!

912

ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್  ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು 300 ನಿಮಿಷಗಳಿಗೆ ನಿಗದಿಪಡಿಸಲು ಮುಂದಾಗಿದೆ.

ಯಾಕೆ ಈ ನಿರ್ಧಾರ..!ಯಾರಿಗೆಲ್ಲಾ ಅನ್ವಯಿಸುತ್ತೆ..?

ಹೌದು, ಜಿಯೋ ಗ್ರಾಹಕರು ಇನ್ಮೇಲೆ ದಿನಕ್ಕೆ 300 ನಿಮಿಷ ಮಾತ್ರ ಉಚಿತ ಕರೆ ಮಾಡಬಹುದು. ಇಷ್ಟಕ್ಕೂ ಜಿಯೋ ಸಂಸ್ಥೆಯ ಈ ಕಠಿಣ ನಿರ್ಧಾರಕ್ಕೆ ಕಾರಣ ಕೇಳಿದರೆ ಅಚ್ಚರಿಯಾಗುತ್ತದೆ. ಆದ್ರೆ ಈ ನಿಯಮ ಎಲ್ಲಾ ಜಿಯೋ ಗ್ರಾಹಕರಿಗೂ ಅನ್ವಯವಾಗುವುದಿಲ್ಲ. ಕೆಲವೊಂದು ಗ್ರಾಹಕರಿಗೆ ಮಾತ್ರ ಅನ್ವಯವಾಗುತ್ತದೆ. ಕೆಲ  ಜಿಯೋ ಗ್ರಾಹಕರು ಸಂಸ್ಥೆಯ ಈ ಆಫರ್ ಅನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಆರೋಪ ಕೇಳಿಬಂದಿದೆ. ವೈಯುಕ್ತಿಕ ಬಳಕೆ ನೀಡಲಾಗಿದ್ದ ಈ ಸೇವೆಯನ್ನು ಮುಂದಿಟ್ಟುಕೊಂಡು ಕೆಲ ಖಾಸಗಿ ಸಂಸ್ಥೆಗಳು ತಮ್ಮ  ವಾಣಿಜ್ಯಾತ್ಮಕ ಉದ್ದೇಶಗಳನ್ನು ಈಡೇರಿಸಿಕೊಳ್ಳುತ್ತಿವೆಯಂತೆ.

ಆಫರ್ ಹಿಂತೆಗೆದುಕೊಳ್ಳಲು ಪ್ರಮುಖ ಕಾರಣ…

ಅನ್ ಲಿಮಿಟೆಡ್ ಕಾಲಿಂಗ್ ಸೇವೆಯನ್ನು ಪಡೆದ ಈ ಖಾಸಗಿ ಸಂಸ್ಥೆಗಳು ತಮ್ಮ ಉತ್ಪನ್ನಗಳು ಮತ್ತು ತಮ್ಮ ಸಂಸ್ಥೆಯ ಯೋಜನೆಗಳನ್ನು ಪ್ರಮೋಷನ್ ಗೆ ಬಳಸಿಕೊಳ್ಳುತ್ತಿದ್ದಾರಂತೆ.. ಇದೇ ಕಾರಣಕ್ಕೆ ಇಂತಹ  ವಂಚಕ ನಡೆಯನ್ನು ತಪ್ಪಿಸುವ ಉದ್ದೇಶದಿಂದಲೇ ಜಿಯೋ ಸಂಸ್ಥೆ ಈ ಕಠಿಣ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

ಇನ್ನು ಮುಂದೆ ಎಷ್ಟು ಸಮಯ ಕರೆ ಮಾಡಬಹುದು?

ಸಂಸ್ಥೆಯ ಈ ನಿರ್ಧಾರದಿಂದಾಗಿ ಜಿಯೋ ಗ್ರಾಹಕ ಪ್ರತೀ ತಿಂಗಳು ಅಂದರೆ 28 ದಿನಗಳು, 3000 ನಿಮಿಷಗಳಷ್ಟು ಕರೆಗಳನ್ನು  ಮಾತ್ರ ಮಾಡಬಹುದು. ಅಂದರೆ ಪ್ರತೀ ನಿತ್ಯ 300 ನಿಮಿಷದಂತೆ ಅಥವಾ 7 ದಿನಕ್ಕೆ 1200 ನಿಮಿಷಗಳಷ್ಟು ಮಾತ್ರ ಕರೆ ಮಾಡಬಹುದಾಗಿದೆ.

ಯಾರಿಗೆಲ್ಲಾ ಈ ಕಾಯಿದೆ ಅನ್ವಯಿಸುತ್ತೆ…

ಯಾರೆಲ್ಲಾ ಜಿಯೋದ ಈ ಅನ್ ಲಿಮಿಟೆಡ್ ಕಾಲ್ ಆಫರ್ ಅನ್ನು ಅತಿಯಾಗಿ ಬಳಸಿಕೊಳ್ಳುತ್ತಿದ್ದಾರೋ ಅವರಿಗೆ 300 ನಿಮಿಷಗಳ ಮಿತಿ ನಿಗದಿಪಡಿಸಲಾಗುತ್ತದೆ. ದಿನಕ್ಕೆ 10 ಗಂಟೆಗಳಷ್ಟು ಕಾಲ ಮಾತನಾಡುವವರಿಗೆ ಈ ನಿಯಮ ಅನ್ವಯವಾಗುತ್ತದೆ ಎಂದು ಹೇಳಲಾಗಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ವಿಧ್ಯಾಭ್ಯಾಸ, ಸರ್ಕಾರದ ಯೋಜನೆಗಳು

    ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಕೆ ..!ತಿಳಿಯಲು ಈ ಲೇಖನ ಓದಿ..

    ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.

  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.