ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

ಏಕೆಂದರೆ ಒಂದು ಹನಿ ಜೇನು ತುಪ್ಪ ತನ್ನಲ್ಲಿ ಅದೆಷ್ಟೋ ಆರೋಗ್ಯಕರ ಗುಣಗಳನ್ನು ಬಚ್ಚಿಟ್ಟುಕೊಂಡಿದೆ. ಸಾಮಾನ್ಯವಾಗಿ ಕಾಡುವ ಕೆಮ್ಮು, ತಲೆನೋವು, ಜ್ವರ, ಚರ್ಮತೊಂದರೆ, ಬಾಯಿಹುಣ್ಣುಗಳಂತಹ ನಾನಾ ಕಾಯಿಲೆಗಳಿಗೆ ರಾಮಬಾಣವಾಗಿದೆ. ಜೇನು ನಮ್ಮ ಆರೊಗ್ಯಕ್ಕೆ ಎಷ್ಟು ಒಳ್ಳೆಯದು ಎಂಬುದನ್ನು ಈ ಮುಂದಿನ ಅಂಶಗಳೇ ಸಾರಿ ಹೇಳುತ್ತವೆ.

ಜೇನುತುಪ್ಪದ ಆರೋಗ್ಯಕರ ಅಂಶಗಳು ಉಷ್ಣ ದಿಂದ ಬಾಯೊಳಗೆ ಹುಣ್ಣಾಗಿದ್ದರೆ ಜೇನುತುಪ್ಪ ಹಚ್ಚುವುದರಿಂದ, ನೀರಿನೊಡನೆ ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಹುಣ್ಣು
ವಾಸಿಯಾಗುತ್ತದೆ.ಬೊಜ್ಜು ಕರಗಿಸುವುದಕ್ಕೆ ಕುದಿಸಿ ಆರಿಸಿದ 1 ಲೋಟ ನೀರಿಗೆ 2 ಚಮಚ ಜೇನುತುಪ್ಪ ಬೆರೆಸಿ ಕುಡಿಯತ್ತಿದ್ದರೆ ತೂಕ ಕಡಿಮೆಯಾಗುತ್ತದೆ.

ನೆಗಡಿ ಅಥವಾ ಶೀತದಿಂದ ಗಂಟಲು ಕಟ್ಟಿ ಧ್ವನಿ ಸರಿಯಾಗಿ ಹೊರಡದಿದ್ದರೆ ದಿನಕ್ಕೆ 3-4 ಸಲ ಅರ್ಧ ಚಮಚದಿಂದ ಒಂದು ಚಮಚದವರೆಗೆ ಜೇನುತುಪ್ಪ ಸೇವಿಸುತ್ತಿರಬೇಕು. ಶುಂಠಿಯನ್ನು ಜೇನುತುಪ್ಪದೊಡನೆ ಸೇರಿಸಿ ದಂತಗಳಿಗೆ ಉಜ್ಜಬೇಕು. ಇದರಿಂದ ವಸಡುಗಳಿಂದ ರಕ್ತ ಸೋರುವುದು ವಸಡು ಊದಿ ಕೊಳ್ಳುವುದು ಕಡಿಮೆಯಾಗುತ್ತದೆ.

ರಕ್ತದೊತ್ತಡ ಹೆಚ್ಚಾಗಿರುವವರು ಬೆಳಗ್ಗೆ ಖಾಲಿ ಹೊಟ್ಟೆಗೆ 3 ಚಮಚ ಜೇನನ್ನು ನೀರಿನಲ್ಲಿ ಸೇರಿಸಿ ಕುಡಿಯಬೇಕು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರು
ಪೊಟ್ಯಾಷಿಯಂ ಮತ್ತು ಖನಿಜಗಳು ಅಧಿಕ ಪ್ರಮಾಣದಲ್ಲಿರುವ ಜೇನುತುಪ್ಪವನ್ನು ದಿನಕ್ಕೆ 2 ಬಾರಿ 2 ಚಮಚದಷ್ಟು ಸೇವಿಸಬೇಕು. ಪ್ರತಿದಿನ ಜೇನುತುಪ್ಪ ಸೇವಿಸಿದರೆ ಮೆದುಳಿನ ದೌರ್ಬಲ್ಯ ನಿವಾರಣೆಯಾ ಗಿ ಕಾರ್ಯನಿರ್ವಹಿಸುತ್ತದೆ. ಜೇನುತುಪ್ಪ ಉತ್ತಮ ಆರೋಗ್ಯವರ್ಧಕ ಹಾಗೂ ಚರ್ಮಕ್ಕೆ ಪ್ರಯೋಜನವಾದ ಅಂಶಗಳನ್ನು ಒಳಗೊಂಡಿದೆ ಎಂಬ ಅಂಶ ಅನಾದಿಕಾಲದಿಂದಲೂ ತಿಳಿದು ಬಂದಿದೆ.

ವಿಟಮಿನ್, ಪ್ರೊಟೀನ್ ಮತ್ತು ರೋಗನಿರೋಧಕ ಜೀವಸತ್ವಗಳಿಂದ ಸಂವೃದ್ದವಾಗಿರುವ ಜೇನುತುಪ್ಪ ನಿಸ್ಸಂಶಯವಾಗಿಯೂ ಪ್ರಯೋಜನಕಾರಿ.ಜೇನಿನಲ್ಲಿರುವ ವಿಟಮಿನ್ ಸಿ
ವಿಕಿರಣಗಳಿಂದ ಹಾನಿಗೀಡಾದ ಚರ್ಮದ ಪದರಗಳನ್ನು ಸರಿಪಡಿಸುತ್ತದೆ. ಇದರಲ್ಲಿರುವ ವಿಟಮಿನ್ ಬಿ5 ಚರ್ಮದಲ್ಲಿ ಉತ್ಪತ್ತಿಯಾಗುವ ಎಣ್ಣೆಯ ಅಂಶವನ್ನು ತಡೆಯುವುದಲ್ಲದೆ ಒಣ ಚರ್ಮವನ್ನು ಮೃದುಗೊಳಿಸುತ್ತದೆ.

ಜೇನಿನಲ್ಲೇನಿದೆ: –
ತೇವಾಂಶ : ಶೇ.17ರಿಂದ 25 ಫಲಸಕ್ಕರೆ : ಶೇ.34 ರಿಂದ 4೦ ಗ್ಲೂಕೋಸ್ : ಶೇ.32 ರಿಂದ ೩8 ಅಂಟು : ಶೇ.1 ರಿಂದ 2 ಖನಿಜಗಳು : ಕಬ್ಬಿಣ, ಮ್ಯಾಗ್ನೀ ಶಿಯಂ, ಕ್ಯಾಲ್ಸಿಯಂ, ಮ್ಯಾಂಗನೀಸ್, ತಾಮ್ರ. ಪೋಷಕ ದ್ರವ್ಯಗಳು : ವಿಟಮಿನ್ ಬಿ೧ ಬಿ೨ ಬಿ೩ ಬಿ೧೨ ಸಿ ಮುಂತಾದವುಗಳಿವೆ. ಮಕ್ಕಳು ಸೇರಿದಂತೆ ಯಾವುದೇ ವಯಸ್ಸಿನವರು ಕೂಡ ಕೆಮ್ಮಿಗೆ ಜೇನುತುಪ್ಪವನ್ನು ಬಳಸಬಹುದು. ಕೆಮ್ಮು ಪ್ರಾರಂಭಿಕ ಹಂತದಲ್ಲಿರುವಾಗ ಜೇನುತುಪ್ಪ ಸೇವಿಸಿದರೆ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…