ಉಪಯುಕ್ತ ಮಾಹಿತಿ

ಜೇನು ತುಪ್ಪದಲ್ಲಿದೆ ಔಷದಕಾರಿ ಗುಣಗಳು..!ತಿಳಿಯಲು ಈ ಲೇಖನ ಓದಿ ..

1378

 ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

ಏಕೆಂದರೆ ಒಂದು ಹನಿ ಜೇನು ತುಪ್ಪ ತನ್ನಲ್ಲಿ ಅದೆಷ್ಟೋ ಆರೋಗ್ಯಕರ ಗುಣಗಳನ್ನು ಬಚ್ಚಿಟ್ಟುಕೊಂಡಿದೆ. ಸಾಮಾನ್ಯವಾಗಿ ಕಾಡುವ ಕೆಮ್ಮು, ತಲೆನೋವು, ಜ್ವರ, ಚರ್ಮತೊಂದರೆ, ಬಾಯಿಹುಣ್ಣುಗಳಂತಹ ನಾನಾ ಕಾಯಿಲೆಗಳಿಗೆ ರಾಮಬಾಣವಾಗಿದೆ. ಜೇನು ನಮ್ಮ ಆರೊಗ್ಯಕ್ಕೆ ಎಷ್ಟು ಒಳ್ಳೆಯದು ಎಂಬುದನ್ನು ಈ ಮುಂದಿನ ಅಂಶಗಳೇ ಸಾರಿ ಹೇಳುತ್ತವೆ.

ಜೇನುತುಪ್ಪದ ಆರೋಗ್ಯಕರ ಅಂಶಗಳು ಉಷ್ಣ ದಿಂದ ಬಾಯೊಳಗೆ ಹುಣ್ಣಾಗಿದ್ದರೆ ಜೇನುತುಪ್ಪ ಹಚ್ಚುವುದರಿಂದ, ನೀರಿನೊಡನೆ ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಹುಣ್ಣು
ವಾಸಿಯಾಗುತ್ತದೆ.ಬೊಜ್ಜು ಕರಗಿಸುವುದಕ್ಕೆ ಕುದಿಸಿ ಆರಿಸಿದ 1 ಲೋಟ ನೀರಿಗೆ 2 ಚಮಚ ಜೇನುತುಪ್ಪ ಬೆರೆಸಿ ಕುಡಿಯತ್ತಿದ್ದರೆ ತೂಕ ಕಡಿಮೆಯಾಗುತ್ತದೆ.

ನೆಗಡಿ ಅಥವಾ ಶೀತದಿಂದ ಗಂಟಲು ಕಟ್ಟಿ ಧ್ವನಿ ಸರಿಯಾಗಿ ಹೊರಡದಿದ್ದರೆ ದಿನಕ್ಕೆ 3-4 ಸಲ ಅರ್ಧ ಚಮಚದಿಂದ ಒಂದು ಚಮಚದವರೆಗೆ ಜೇನುತುಪ್ಪ ಸೇವಿಸುತ್ತಿರಬೇಕು. ಶುಂಠಿಯನ್ನು ಜೇನುತುಪ್ಪದೊಡನೆ ಸೇರಿಸಿ ದಂತಗಳಿಗೆ ಉಜ್ಜಬೇಕು. ಇದರಿಂದ ವಸಡುಗಳಿಂದ ರಕ್ತ ಸೋರುವುದು ವಸಡು ಊದಿ ಕೊಳ್ಳುವುದು ಕಡಿಮೆಯಾಗುತ್ತದೆ.

ರಕ್ತದೊತ್ತಡ ಹೆಚ್ಚಾಗಿರುವವರು ಬೆಳಗ್ಗೆ ಖಾಲಿ ಹೊಟ್ಟೆಗೆ 3 ಚಮಚ ಜೇನನ್ನು ನೀರಿನಲ್ಲಿ ಸೇರಿಸಿ ಕುಡಿಯಬೇಕು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರು
ಪೊಟ್ಯಾಷಿಯಂ ಮತ್ತು ಖನಿಜಗಳು ಅಧಿಕ ಪ್ರಮಾಣದಲ್ಲಿರುವ ಜೇನುತುಪ್ಪವನ್ನು ದಿನಕ್ಕೆ 2 ಬಾರಿ 2 ಚಮಚದಷ್ಟು ಸೇವಿಸಬೇಕು. ಪ್ರತಿದಿನ ಜೇನುತುಪ್ಪ ಸೇವಿಸಿದರೆ ಮೆದುಳಿನ ದೌರ್ಬಲ್ಯ ನಿವಾರಣೆಯಾ ಗಿ ಕಾರ್ಯನಿರ್ವಹಿಸುತ್ತದೆ. ಜೇನುತುಪ್ಪ ಉತ್ತಮ ಆರೋಗ್ಯವರ್ಧಕ ಹಾಗೂ ಚರ್ಮಕ್ಕೆ ಪ್ರಯೋಜನವಾದ ಅಂಶಗಳನ್ನು ಒಳಗೊಂಡಿದೆ ಎಂಬ ಅಂಶ ಅನಾದಿಕಾಲದಿಂದಲೂ ತಿಳಿದು ಬಂದಿದೆ.

ವಿಟಮಿನ್, ಪ್ರೊಟೀನ್ ಮತ್ತು ರೋಗನಿರೋಧಕ ಜೀವಸತ್ವಗಳಿಂದ ಸಂವೃದ್ದವಾಗಿರುವ ಜೇನುತುಪ್ಪ ನಿಸ್ಸಂಶಯವಾಗಿಯೂ ಪ್ರಯೋಜನಕಾರಿ.ಜೇನಿನಲ್ಲಿರುವ ವಿಟಮಿನ್ ಸಿ
ವಿಕಿರಣಗಳಿಂದ ಹಾನಿಗೀಡಾದ ಚರ್ಮದ ಪದರಗಳನ್ನು ಸರಿಪಡಿಸುತ್ತದೆ. ಇದರಲ್ಲಿರುವ ವಿಟಮಿನ್ ಬಿ5 ಚರ್ಮದಲ್ಲಿ ಉತ್ಪತ್ತಿಯಾಗುವ ಎಣ್ಣೆಯ ಅಂಶವನ್ನು ತಡೆಯುವುದಲ್ಲದೆ ಒಣ ಚರ್ಮವನ್ನು ಮೃದುಗೊಳಿಸುತ್ತದೆ.

ಜೇನಿನಲ್ಲೇನಿದೆ: –

ತೇವಾಂಶ : ಶೇ.17ರಿಂದ 25 ಫಲಸಕ್ಕರೆ : ಶೇ.34 ರಿಂದ 4೦ ಗ್ಲೂಕೋಸ್ : ಶೇ.32 ರಿಂದ ೩8 ಅಂಟು : ಶೇ.1 ರಿಂದ 2 ಖನಿಜಗಳು : ಕಬ್ಬಿಣ, ಮ್ಯಾಗ್ನೀ ಶಿಯಂ, ಕ್ಯಾಲ್ಸಿಯಂ, ಮ್ಯಾಂಗನೀಸ್, ತಾಮ್ರ. ಪೋಷಕ ದ್ರವ್ಯಗಳು : ವಿಟಮಿನ್ ಬಿ೧ ಬಿ೨ ಬಿ೩ ಬಿ೧೨ ಸಿ ಮುಂತಾದವುಗಳಿವೆ. ಮಕ್ಕಳು ಸೇರಿದಂತೆ ಯಾವುದೇ ವಯಸ್ಸಿನವರು ಕೂಡ ಕೆಮ್ಮಿಗೆ ಜೇನುತುಪ್ಪವನ್ನು ಬಳಸಬಹುದು. ಕೆಮ್ಮು ಪ್ರಾರಂಭಿಕ ಹಂತದಲ್ಲಿರುವಾಗ ಜೇನುತುಪ್ಪ ಸೇವಿಸಿದರೆ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಶಿವನ ಆಭರಣಗಳಲ್ಲಿ ಅಡಗಿರುವ ಸತ್ಯವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…

  • ಸುದ್ದಿ

    ಯಾವುದೇ ರಸಗೊಬ್ಬರ ಬಳಕೆ ಮಾಡದೇ. ಅತೀ ಕಡಿಮೆ ಬೆಲೆಯಲ್ಲಿ, ಬೆಳೆಯನ್ನ ತೆಗೆದ ನಟ ಉಪೇಂದ್ರ.

    ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…

  • ಉಪಯುಕ್ತ ಮಾಹಿತಿ

    ನಿಮ್ಮ ವೋಟರ್ ID ಯಲ್ಲಿ ಏನಾದ್ರೂ ತಪ್ಪಿದ್ದರೇ ಕೇವಲ ನಿಮಿಷಗಳಲ್ಲಿ ನಿಮ್ಮ ಮೊಬೈಲ್ ಮೂಲಕವೇ ಸರಿಪಡಿಸಿಕೊಳ್ಳಿ.. ಸಂಪೂರ್ಣ ಮಾಹಿತಿಗೆ ಮುಂದೆ ನೋಡಿ…

    ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.

  • ಸುದ್ದಿ

    ಕಾಡಿನ ನಾಶವಾಗುತ್ತಿರುವ ಹಿನ್ನೆಲೆ ಬಗ್ಗೆ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಹೇಳಿದ್ದೇನು..?

    ನೀರಿನ  ಸಂರಕ್ಷಣೆಗಾಗಿ ನ್ಯೂಸ್ ​18 ಹಮ್ಮಿಕೊಂಡಿರುವ  #Mission Paani ಆಂದೋಲನ  ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್​ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್​ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….