ಸುದ್ದಿ

ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

992

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ  ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಮೂರು ದಿನಗಳ ಹಿಂದೆ ಬೆಂಗಳೂರು ಮೂಲದ ಮಂಜುನಾಥ್ ಎಂಬುವರು ತನ್ನ ಬೈಕ್‌‌ನಲ್ಲಿ ಜೋಗ ಜಲಪಾತದ ನೆತ್ತಿ ಪ್ರದೇಶಕ್ಕೆ ಬಂದಿದ್ದು, ಜೋಗ್‌ಫಾಲ್ಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಆ ಯುವಕನ ಮೃತದೇಹವನ್ನು ಹುಡುಕಲೆಂದು,ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್‌ ರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ.ಇದು ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಪತ್ತೆಯಾಗಿದ್ದು ಎಲ್ಲಿ..?ಯಾವ ಸ್ಥಿತಿಯಲ್ಲಿದ್ದರು ಗೊತ್ತಾ..?

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ  ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಹೋಗಿ, ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ಡು, ರಾಜಾ ಫಾಲ್ಸ್​ನ ಬಂಡೆಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ.

ಶೋಧ ಕಾರ್ಯ ನಡೆಸಿ ಅಗ್ನಿಶಾಮಕ ಸಿಬ್ಬಂದಿ, ಜ್ಯೋತಿರಾಜ್ ಅಲಿಯಾಸ್ (ಕೋತಿರಾಜ್)ನನ್ನು ಪತ್ತೆ ಮಾಡಿದ್ದು, ರಾಜಾ ಫಾಲ್ಸ್​ನ ಬಂಡೆಯ ಬಳಿ ಅತಿಯಾದ ಚಳಿ ಇದ್ದ ಕಾರಣ, ನಿಶ್ಶಕ್ತರಾಗಿದ್ದ ಜ್ಯೋತಿರಾಜ್ ಅಲ್ಲಿಯೇ ಕುಳಿತಿದ್ದರು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಮಕ್ಕಳಿಗೆ ಹಳ್ಳಿ ಸೊಗಡಿನ ಅರಿವು ಮೂಡಿಸಲು ಸುನಿತಾ ಮಂಜುನಾಥ್ ರವರು ತಮ್ಮ ಶಾಲೆಯಲ್ಲಿ ಮಾಡಿದ ಪ್ರಯತ್ನಕ್ಕೆ ಹ್ಯಾಟ್ಸ್ ಆಫ್…

    ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..

  • ಸಿನಿಮಾ

    ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

    ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…

  • ಸುದ್ದಿ

    ಹೊಳಪು ಹಾಗು ಸೊಂಪಾದ ಕೂದಲಿಗೆ ʼದಾಸವಾಳʼ ರಾಮಬಾಣ…! ಅದರ ಪ್ರಯೋಜನಗಳೇನು.?

    ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…

  • ಆರೋಗ್ಯ

    ಕಡಿಮೆ ವೆಚ್ಚದಲ್ಲಿ ಮೂತ್ರ ಪಿಂಡ ಶುದ್ದೀಕರಿಸುವ ಮನೆಮದ್ದು. ಈ ಮಾಹಿತಿ ನೋಡಿ.

    ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…

  • ಸಿನಿಮಾ

    ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದ ನಟ ಅರುಣ್ ಸಾಗರ್ ಪುತ್ರ..

    ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್‍ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್‍ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…

  • ಸಿನಿಮಾ

    ಟಾಲಿವುಡ್ ಸ್ಟಾರ್ ಪ್ರಭಾಸ್ ಚಿರಂಜೀವಿ ಫ್ಯಾಮಿಲಿಯ ಅಳಿಯನಾಗ್ತಾರಾ ..?ತಿಳಿಯಲು ಈ ಲೇಖನ ಓದಿ…

    ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….