ಕವಿ

ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

By admin

February 26, 2018

ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.

 

ಜೀವನ:-

 

ಪರಿಸರ ಹೋರಾಟ:-

ಕಾರಂತರ ಕಾದಂಬರಿಗಳುದ್ದಕ್ಕೂ ಪರಿಸರದ ಚಿತ್ರಣ ಗಾಢವಾಗಿದೆ. ನಿಜ ಜೀವನದಲ್ಲೂ ಪರಿಸರದ ಉಳಿವಿಗೆ ಹೋರಾಡಿದ ಕಾರಂತರು, ಕೈಗಾ ಅಣುವಿದ್ಯುತ್ ಸ್ಥಾವರದ ವಿರುದ್ಧ ಹೋರಾಟಕ್ಕೆ ನಾಯಕತ್ವ ವಹಿಸಿದ್ದು ಪ್ರಖ್ಯಾತವಾಗಿದೆ. ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. ಕರ್ನಾಟಕದ ಮೂಲೆ ಮೂಲೆ, ಭಾರತದ ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ತಮ್ಮ ಕೊನೆಗಾಲದವರೆಗೂ ಪ್ರವಾಸ ಮಾಡಿದ್ದರು. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ “ಕಾರಂತಜ್ಜ” ಆಗಿದ್ದರು. ವಿಶ್ವ ಪ್ರೇಮಿ ಹಾಗೂ ಮಹಾ ಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು.

ಕಾದಂಬರಿಗಳು:-

  1. ಅದೇ ಊರು, ಅದೆ ಮರ
  2. ಅಳಿದ ಮೇಲೆ
  3. ಅಂಟಿದ ಅಪರಂಜಿ
  4. ಆಳ, ನಿರಾಳ
  5. ಇದ್ದರೂ ಚಿಂತೆ
  6. ಇನ್ನೊಂದೇ ದಾರಿ
  7. ಇಳೆಯೆಂಬ

ಕವನ ಸಂಕಲನಗಳು:-

  1. ರಾಷ್ಟ್ರಗೀತ ಸುಧಾಕರ
  2. ಸೀಳ್ಗವನಗಳು

ಸಣ್ಣ ಕತೆ:-