ಸುದ್ದಿ

ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಪತಿ…….!

80

ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್‍ಟಾಕ್‍ಗೆ ಅಡಿಕ್ಟ್ ಆಗಿ ಅದನ್ನು ಅಪ್ಲೋಡ್ ಮಾಡುತ್ತಿದ್ದಳು. ಇದನ್ನು ನೋಡಿದ ಆಕೆಯ ಪತಿ ಕನಕ ರಾಜು, ಟಿಕ್‍ಟಾಕ್ ವಿಡಿಯೋ ಅಪ್ಲೋಡ್ ಮಾಡದಂತೆ ಎಚ್ಚರಿಸಿದ್ದನು. ಅಲ್ಲದೆ ತನ್ನ ಮನೆಗೆ ಹಿಂದಿರುಗಿ ಕುಟುಂಬದ ಜೊತೆ ವಾಸಿಸಲು ಹೇಳಿದ್ದನು.

ಆದರೆ ನಂದಿನಿ ತನ್ನ ಪತಿಯ ಮಾತನ್ನು ಕೇಳಲಿಲ್ಲ. ನಂದಿನಿಗೆ ಕನಕ ರಾಜು ಸಾಕಷ್ಟು ಬಾರಿ ಕರೆ ಮಾಡಿದ್ದನು. ಆದರೆ ಆಕೆಯ ಮೊಬೈಲ್ ಬ್ಯುಸಿ ಬರುತ್ತಿತ್ತು. ಇದರಿಂದ ಕೋಪಗೊಂಡ ಕನಕ ರಾಜು ಕುಡಿದು ಪತ್ನಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಗಲಾಟೆ ಮಾಡಿದ್ದಾನೆ.ಈ ವೇಳೆ ನಂದಿನಿ ಹಾಗೂ ಕನಕ ರಾಜು ನಡುವಿನ ಜಗಳ ವಿಕೋಪಕ್ಕೆ ತಲುಪುತ್ತಿದ್ದಂತೆ ಕನಕ ರಾಜು ಪತ್ನಿ ನಂದಿನಿಯನ್ನು ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ನಂದಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ದೇಹದಿಂದ ತೀವ್ರ ರಕ್ತಸ್ತ್ರಾವ ಆಗುತ್ತಿತ್ತು.

ಈ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಲುಪಿ ನಂದಿನಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಅಲ್ಲದೆ ಆರೋಪಿ ಕನಕ ರಾಜುನನ್ನು ಬಂಧಿಸಿ ಆತನ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ