ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ.
ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು ಹೊಂದಿದೆ. ಬಹಳಷ್ಟು ಮಂದಿಗೆ ಉದ್ಯೋಗ ನೀಡಲಾಗಿದೆ.
ದೇಶದಲ್ಲಿ ಟೀ ಪ್ರೇಮಿಗಳ ಸಂಖ್ಯೆ ಸಾಕಷ್ಟಿದೆ. ಸಮಯಕ್ಕೆ ಸರಿಯಾಗಿ ಟೀ ಸಿಗದೆ ಹೋದ್ರೆ ತಲೆನೋವು ಬರುತ್ತೆ ಎನ್ನುವವರಿದ್ದಾರೆ. ಹಾಗಾಗಿ ಟೀಗೆ ಬೇಡಿಕೆ ಎಂದೂ ಕಡಿಮೆಯಾಗುವುದಿಲ್ಲ. ಇದನ್ನು ತಿಳಿದಿರುವ ಯೇವ್ಲಿ 2011ರಲ್ಲಿ ಟೀ ಸ್ಟಾಲ್ ಶುರು ಮಾಡಿದ್ರಂತೆ. ಪ್ರತಿದಿನ 3-5 ಸಾವಿರ ಕಪ್ ಟೀ ಮಾರಾಟ ಮಾಡ್ತಾರಂತೆ ಇವರು.