ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ.

ಸುದ್ದಿ ವಾಹಿನಿಯೊಂದಕ್ಕೆ ಈ ಕುರಿತಾಗಿ ಪ್ರತಿಕ್ರಿಯಿಸಿರುವ ಅಪರ್ಣಾ ಲವಕುಮಾರ್ ನಾನು ಈ ಕುರಿತು ಯಾರಿಗೂ ಮಾಹಿತಿ ನೀಡಿರಲಿಲ್ಲ. ಮಾಹಿತಿ ನೀಡಿದ್ದರೆ ಇದನ್ನು ತಡೆಯುವ ಯತ್ನ ನಡೆಯುತ್ತಿತ್ತು ಕೂದಲು ಬೋಳಿಸುವುದು ದೊಡ್ಡ ವಿಷಯವೆಂದು ನನಗೆ ಹೀಗಾಗಿ ಸಲೂನ್ ಒಂದಕ್ಕೆ ತೆರಳಿ ಕೂದಲು ಕತ್ತರಿಸಿಕೊಂಡೆ. ಅನೇಕರು ಇದಕ್ಕೂ ಉತ್ತಮ ಕೆಲಸ ಮಾಡುತ್ತಾರೆ ಇತರರಿಗೆ ಆರ್ಥಿಕವಾಗಿ ಸಹಾಯ ಮಾಡುವಷ್ಟು ಸಬಲಳು ನಾನಲ್ಲ, ನನ್ನಿಂದಾಗುವ ಸಹಾಯವನ್ನು ನಾನು ಮಾಡಿದೆ’ ಎಂದಿದ್ದಾರೆ.

ಇನ್ನು ಕೂದಲು ಬೋಳಿಸಿದ್ದೇನೆ, ತನಗೆ ಕೂದಲಿಲ್ಲ ಎಂಬ ಬಗ್ಗೆ ಈ ಪೊಲೀಸ್ ಅಧಿಕಾರಿಗೆ ಬೇಸರವಿಲ್ಲ ಇಷ್ಟೇ ಅಲ್ಲದೇ, ಅಪರ್ಣಾ ಈ ಮೊದಲು ಕೂಡಾ ಕ್ಯಾನ್ಸರ್ ಪೀಡಿತರಿಗಾಗಿ ತಮ್ಮ ಕೂದಲನ್ನು ದಾನ ಮಾಡಿದ್ದಾರೆ ಆದರೆ ಈ ಬಾರಿ ಅವರು ಸಂಪೂರ್ಣವಾಗಿ ತಲೆ ಬೋಳಿಸಿಕೊಂಡಿದ್ದಾರೆ.

10 ವರ್ಷಗಳ ಹಿಂದೆಯೂ ಅಪರ್ಣಾ ಲವಕುಮಾರ್ ಕುಟುಂಬವೊಂದಕ್ಕೆ ಸಹಾಯ ಮಾಡುವ. ಸಲುವಾಗಿ ತನ್ನ ಮೂರು ಚಿನ್ನದ ಬಳೆಗಳನ್ನು ಮಾರಿ ಸದ್ದು ಮಾಡಿದ್ದರು. ಅಂದು ಆ ಕುಟುಂಬ ಆಸ್ಪತ್ರೆಯಲ್ಲಿ 60 ಸಾವಿರ ರೂಪಾಯಿ ಬಿಲ್ ಪಾವತಿಸಲಾಗದೆ ಪರದಾಡುತ್ತಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ. ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…
ಟಿಕ್ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್ಟಾಕ್ಗೆ ಅಡಿಕ್ಟ್…
ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.
ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…