ಸುದ್ದಿ

ಶಾಕಿಂಗ್ ನ್ಯೂಸ್ : ಪ್ರವಾಸಿಗರಿಗೆ ಇನ್ಮುಂದೆ ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ…!

39

ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ…

ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ ಅನಧಿಕೃತ ಪ್ರವೇಶವನ್ನು ನಿಯಂತ್ರಿಸುವ ಸಲುವಾಗಿ ಈ ಹೊಸ ನಿಯಮವನ್ನು ಜಾರಿಗೆ ತಂದಿರುವುದಾಗಿ ಇಲಾಖೆ ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಮಾತನಾಡಿರುವ ಇಲಾಖೆಯ ಸೂಪರಿಂಟೆಂಟ್ ಬಸಂತ್ ಕುಮಾರ್ ಅವರು, ತಾಜ್ ಮಹಲ್ ನಲ್ಲಿ ಈ ಹಿಂದೆ ಪ್ರವಾಸಿಗರು ಬೆಳಗ್ಗಿನಿಂದ ಸಂಜೆಯವರೆಗೂ ಸಮಯ ಕಳೆಯಬಹುದಿತ್ತು. ಆದರೆ ಈ ವೇಳೆ ತಾಜ್ ಮಹಲ್ ನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿರುತ್ತಿತ್ತು. ಅಲ್ಲದೆ ಅನಧಿಕೃತವಾಗಿ ಪ್ರವೇಶದ ಅವಕಾಶವೂ ಇತ್ತು. ಹೀಗಾಗಿ ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಹೊಸ ನಿಯಮ ಜಾರಿಗೆತರಲಾಗಿದೆ. ಹೊಸ ನಿಯಮದ ಅನ್ವಯ ಪ್ರವಾಸಿಗರು ತಾಜ್ ಮಹಲ್ ನಲ್ಲಿ 3 ಗಂಟೆಗಳನ್ನು ಮಾತ್ರ ಕಳೆಯಬಹುದು. 3 ಗಂಟೆಗೂ ಅಧಿಕ ಸಮಯದ ಬಳಿಕ ದಂಡ ವಿಧಿಸಲಾಗುತ್ತದೆ. ಇದಕ್ಕಾಗಿ ಟರ್ನ್ ಸ್ಟೈಲ್ ಗೇಟ್ ಗಳನ್ನು ಪರಿಚಯಿಲಾಗುತ್ತಿದ್ದು, ಪೂರ್ವ ಮತ್ತು ಪಶ್ಚಿಮ ದ್ವಾರಗಳಲ್ಲಿ ಇವುಗಳನ್ನು ಅಳವಡಿಸಲಾಗುತ್ತದೆ. 7 ಗೇಟ್ ಗಳ ಪೈಕಿ 5 ಗೇಟ್ ಗಳು ಎಕ್ಸಿಟ್ ಗೆ ಮೀಸಲಿಡಲಾಗುತ್ತದೆ. ವಿದೇಶಿಗರ ಪ್ರವೇಶಕ್ಕೆ ಪ್ರತ್ಯೇಕ ಗೇಟ್ ಗಳು ಇರಲಿದ್ದು, ಟೋಕನ್ ಗಳ ಮೂಲಕವಷ್ಟೇ ಪ್ರವೇಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಹೊಸ ನಿಯಮಕ್ಕೆ ಪ್ರವಾಸಿಗರ ತೀವ್ರ ವಿರೋಧ , ಇನ್ನು ಪುರಾತತ್ವ ಇಲಾಖೆಯ ಹೊಸ ನಿಯಮಕ್ಕೆ ಪ್ರವಾಸಿಗರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ನಾವು ತಾಜ್ ಮಹಲ್ ಸಮಯ ಕಳೆಯಲು ಬರುತ್ತೇವೆ. ಆದರೆ ಪುರಾತತ್ವ ಇಲಾಖೆಯ ಈ ನಿಯಮಗಳಿಂದ ಪ್ರವಾಸಿಗರು ತಾಜ್ ಮಹಲ್ ನಿಂದ ವಿಮುಖರಾಗುವ ಅಪಾಯವಿದೆ. ಕೇವಲ ಮೂರು ಗಂಟೆ ಮಾತ್ರ ಸಮಯಾವಕಾಶ ವಿಧಿಸಿದರೆ ತಾಜ್ ಮಹಲ್ ಗೆ ಆಗಮಿಸಲೂ ಕೂಡ ಪ್ರವಾಸಿಗರು ಎರಡೆರಡು ಬಾರಿ ಯೋಚಿಸುತ್ತಾರೆ. ಇದು ನಿಜಕ್ಕೂ ಪ್ರವಾಸೋದ್ಯಮದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
ಅಂತೆಯೇ ಅಸ್ಟ್ರೇಲಿಯಾ ಮೂಲದ ಸೆಲಿನಾ ಎಂಬ ಪ್ರವಾಸಿಗರೂ ಕೂಡ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದು, ಭಾರತೀಯ ಪ್ರವಾಸಗರಿಗಿಂತ ವಿದೇಶಗರಿಗೆ ಬಹುತೇಕ 10 ಪಟ್ಟು ಹೆಚ್ಚು ಶುಲ್ಕು ವಿಧಿಸುತ್ತಿದ್ದಾರೆ. ಅದಾಗ್ಯೂ ನಾವು ಇಲ್ಲಿಗೆ ಬರುತ್ತಿದ್ದೇವೆ. ಆದರೆ ಇದೀಗ ಸಮಯದ ಮಿತಿ ವಿಧಿಸಿರುವುದು ನಾವು ಮತ್ತೆ ತಾಜ್ ಮಹಲ್ ಗೆ ಭೇಟಿ ನೀಡಬೇಕೆ ಎಂಬ ಪ್ರಶ್ನೆ ಉದ್ಭವಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

    ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.  ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…

  • ಸುದ್ದಿ

    ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

    ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…

  • ಉಪಯುಕ್ತ ಮಾಹಿತಿ

    ಕನ್ಯಾದಾನ ಯೋಜನೆ ಅಡಿಯಲ್ಲಿ ದಿನಾಲೂ 121 ರೂಪಾಯಿ ಇನ್ವೆಸ್ಟ್ಮೆಂಟ್ ಮಾಡಿದ್ರೆ ಸಿಗುತ್ತೆ 27 ಲಕ್ಷ ರೂಪಾಯಿಗಳು..!

    ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…

  • ಸುದ್ದಿ

    ‘ಮೈ ಲವ್ ಲೆಟರ್ ಟು ಶ್ರೀದೇವಿ ಫ್ಯಾನ್ಸ್‌’ಈ ಲೆಟರ್’ನಲ್ಲಿ ಏನಿದೆ ಗೊತ್ತಾ..?ವರ್ಮಾ ಬಿಚ್ಚಿಟ್ಟ ಶ್ರೀದೇವಿ ನಿಜ ಜೀವನದ ರಹಸ್ಯ ಏನು.?ತಿಳಿಯಲು ಈ ಲೇಖನ ಓದಿ…

    ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್‌ ಟು ಶ್ರೀದೇವೀಸ್ ಫ್ಯಾನ್ಸ್‌’ ಎಂಬ ಹೆಸರಿನಲ್ಲಿ,ತಮ್ಮ ಫೇಸ್‌ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.