ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ.
ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ ರಸ್ತೆ ನಿರ್ಮಿಸುವ ಮೂಲಕ ತ್ಯಾಜ್ಯ ನಿರ್ವಹಣೆಯ ಹೊಸ ಯೋಜನೆಗೆ ಮಾದರಿಯಾಗಿತ್ತು. ಇದೀಗ ಕಸ ವಿಲೇವಾರಿಗೆ ಹೊಸ ಯೋಜನೆ ರೂಪಿಸಿರುವ ನಗರ ಕಸ ಕೊಡಿ ಆಹಾರ ಸ್ವೀಕರಿಸಿ ಎಂಬ ವಿನೂತನ ಆಫರ್ ನೀಡಿದೆ.
ಕಸ ವಿಲೇವಾರಿ ಸಮಸ್ಯೆಯನ್ನು ಕಡಿಮೆ ಮಾಡಲು ವಿನೂತನ ಯೋಜನೆಯೊಂದನ್ನು ಶುರುಮಾಡಿದ್ದಾರೆ, ಅದೇನೆಂದರೆ, ಗಾರ್ಬೇಜ್ ಹೋಟೆಲ್. ಈ ಹೋಟೆಲ್ ನ ವಿಶೇಷತೆ ಏನೆಂದರೆ, ಇಲ್ಲಿ ಹಣದ ಬದಲಿಗೆ ಕಸವನ್ನು ಪಡೆಯಲಾಗುತ್ತದೆ. ಉದಾಹರಣೆಗೆ 500ಗ್ರಾಂ ಕಸ ತಂದವರಿಗೆ ತಿಂಡಿ, ಹಾಗು 1ಕೆಜಿ ಕಸ ತಂದವರಿಗೆ ಊಟವನ್ನು ಇಲ್ಲಿ ಉಚಿತವಾಗಿ ಕೊಡುತ್ತಾರಂತೆ.
ಈ ಹೋಟೆಲ್ ಛತ್ತೀಸ್‌ಗಢದ ಅಂಬಿಕಾಪುರದಲ್ಲಿ ನಗರದ ಬಸ್ ನಿಲ್ದಾಣದ ಬಳಿ ಆರಂಭಿಸಬೇಕೆಂದು ಅಂಬಿಕಾಪುರದ ಪಾಲಿಕೆ ತೀರ್ಮಾನಿಸಿದೆ. ಈ ರೀತಿ ಮಾಡುವುದರಿಂದ ಎಲ್ಲೆಂದರಲ್ಲಿ ಕಸ ಹಾಕುವುದು ಕಡಿಮೆಯಾಗುತ್ತದೆ, ನಗರದಲ್ಲಿ ಸ್ವಚ್ಛತೆ ಕಾಪಾಡಲು ಸಹಾಯವಾಗುತ್ತದೆ.ಸಧ್ಯ ಈ ಯೋಜನೆ ಕಸ, ಪೇಪರ್ ಆಯುವವರಿಗೆ ಮೀಸಲಾಗಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ವಸತಿ ಸೌಲಭ್ಯ ಕಲ್ಪಿಸಲು ಪಾಲಿಕೆ ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ “ಸುದೀಪ್”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್ರವರು ಟ್ವಿಟ್ಟರ್ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.
ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ.