ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನಕದಾಸರು ಕಾಲ:1508-1606
ಜನ್ಮನಾಮ :ತಿಮ್ಮಪ್ಪ ನಾಯಕ
ಸ್ಠಳ :ಬಾಡ ಸ್ಥಳ :ಕಾಗಿನೆಲೆ (ಹಾವೇರಿ ಜಿಲ್ಲೆ)
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.ಅಂದಿನಿಂದ ಕನಕದಾಸರೆಂದೇ ಪ್ರಕ್ಯತಿ ಹೊಂದಿದರು.
ಕುರುಬರು ಮೂಲತಃ ಶ್ರೀವೈಷ್ಣವ ಪಂಥವನ್ನು ಅವಲಂಬಿಸಿದ್ದರೂ, ಕನಕದಾಸರು ವ್ಯಾಸರಾಜರ ಶಿಷ್ಯವೃತ್ತಿಯನ್ನು ಪಡೆದು, ವೈಷ್ಣವ ಪಂಥವನ್ನು ಅವಲಂಬಿಸಿದ್ದರು. ಇವರ ಆರಾಧ್ಯದೇವ ಆದಿಕೇಶವ (ಬಾಡದಾದಿ)ಅಂಕಿತ – ಆದಿಕೇಶವ (ಬಾಡದಾದಿ)
ಮುಖ್ಯ ಗ್ರಂಥಗಳು:-
ಕನಕನಿಗಾಗಿ ತಿರುಗಿದ ಕೃಷ್ಣ: ಒಮ್ಮೆ ಕನಕದಾಸರು ಉಡುಪಿಗೆ ಬಂದು ಶ್ರೀಕೃಷ್ಣನ ದರ್ಶನಕ್ಕೆ ಹೋಗಿದ್ದರು, ಉಡುಪಿಯಲ್ಲಿ ಶ್ರೀಕೃಷ್ಣ ಪಶ್ಚಿಮದಿಕ್ಕಿಗೆ ಮುಖ ಮಾಡಿದ್ದಾನೆ.ಸಾಮಾನ್ಯವಾಗಿ ದೇವರು ಪೂರ್ವ ದಿಕ್ಕಿಗೆ ಇರುವುದು ವಾಡಿಕೆ. ಒಮ್ಮೆ ಕನಕದಾಸರು ಉಡುಪಿಯ ಕೃಷ್ಣನನ್ನು ಕಾಣಲು ಹೋದಾಗ ಅಲ್ಲಿನ ಪಂಡಿತರು ತಡೆದಿದ್ದು ಎಲ್ಲರಿಗೂ ಗೊತ್ತೇ ಇದೆ .ಆಗ ಒಂದು ಸಣ್ಣ ಕಿಡಕಿಯಲ್ಲಿ ದೇವರೇ ತಿರುಗಿ ದರ್ಶನ ನೀಡಿದ್ದು ಅಲ್ಲಿನ ಇತಿಹಾಸ. ಆ ನೆನಪಿನಲ್ಲೇ ಕನಕದಾಸರ ಗೌರವಾರ್ಥ ನಾವು ಈಗಲೂ ಆ ಒಂದು ಸಣ್ಣ ಕಿಡಕಿಯಲ್ಲೇ ಶ್ರೀಕೃಷ್ಣನನ್ನು ನೋಡುವ ಒಂದು ವಾಡಿಕೆ.
ಕನಕ ಸಾಹಿತ್ಯಶೈಲಿ :- ಕನಕದಾಸರ ಹಲವಾರು ಸಾಹಿತ್ಯಗಳು ಬಲು ವಿಶೇಷವಾಗಿದೆ. ಅದನ್ನು ಅರ್ಥ ಮಾಡಿಕೊಳ್ಳುವುದು ಗುರುಗಳ ಕರುಣೆಯಿಲ್ಲದೆ ಅಸಾಧ್ಯ.
ದಾಸ ಮುಂಡಿಗೆ ಪುಟ್ಟದಾಸನು ನಾನಲ್ಲ | ದಿಟ್ಟ ದಾಸನು ನಾನಲ್ಲ |
ಸಿಟ್ಟು ದಾಸನು ನಾನಲ್ಲ | ಸುಟ್ಟ ದಾಸನು ನಾನಲ್ಲ |
ಸುಡಗಾಡುದಾಸ ನಾನಲ್ಲ |ಕಷ್ಠದಾಸ ನಾನಲ್ಲ |
ಕೊಟ್ಟದಾಸ ನಾನಲ್ಲ |ಹೊಟ್ಟೆದಾಸ ನಾನಲ್ಲ |
ಇಟ್ಟಿಗೆ ದಾಸ ನಾನಲ್ಲ |ಶಿಷ್ಟದಾಸ ನಾನಲ್ಲ |
ನಿಷ್ಠದಾಸ ನಾನಲ್ಲ |ಭ್ರಷ್ಠದಾಸ ನಾನಲ್ಲ |
ಶ್ರೇಷ್ಠದಾಸ ನಾನಲ್ಲ |ವಿತ್ತದಾಸ ನಾನಲ್ಲ | ಹುತ್ತದಾಸ ನಾನಲ್ಲ |
ನಾನು ಈ ಷೋಡಶ ದಾಸರುಗಳ ದಾಸಾನು ದಾಸರ ದಾಸಿಯರ ಮನೆಯ ಮಂಕುದಾಸರ ಮನೆಯ ಶಂಕುದಾಸ ಬಾಡದಾದಿ ಕೇಶವ ||
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…