ಕಾನೂನು

ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

124

ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

ತ್ರಿವಳಿ ತಲಾಖ್‌ ಸಂವಿದಾನ ಬಾಹಿರ ಎಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ. ಒಂದೊಮ್ಮೆ ತ್ರಿವಳಿ ತಲಾಖ್ ಬ್ಯಾನ್ ಮಾಡಬೇಕಿದ್ದರೆ ಇದಕ್ಕೆ ಕಾನೂನು ಜಾರಿಗೆ ತನ್ನಿ ಎಂದು ಕೇಂದ್ರ ಸರಕಾರಕ್ಕೆ ಸಲಹೆ ನೀಡಿದೆ.

ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲವಾದ್ದರಿಂದ ತ್ರಿವಳಿ ತಲಾಖ್‌ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಮೂಲ

ಇನ್ನು ತ್ರಿವಳಿ ತಲಾಖ್ ನೀಡುವುದಕ್ಕೆ 6 ತಿಂಗಳ ಕಾಲ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅದಕ್ಕೂ ಮೊದಲು ಇದಕ್ಕೆ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.

ನ್ಯಾಯಮೂರ್ತಿಗಳ ಬಹುಮತದ ತೀರ್ಪಿನ ಆಧಾರದ ಮೇಲೆ ತ್ರಿವಳಿ ತಲಾಖ್‌ ಅನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ. ಬೇರೆ ಬೇರೆ ಧರ್ಮಕ್ಕೆ ಸೇರಿದ ನ್ಯಾ. ಖೇಹರ್, ಕುರಿಯನ್ ಜೋಸೆಫ್, ರೋಹಿಂಗ್ಟನ್ ಎಫ್ ನಾರಿಮನ್, ಉದಯ್ ಲಲಿತ್, ಎಸ್ ಅಬ್ದುಲ್ ನಜೀರ್ ನ್ಯಾಯಪೀಠ ಈ ತೀರ್ಪು ನೀಡಿದೆ.

ಈ ಹಿಂದೆ ತ್ರಿವಳಿ ತಲಾಖ್‌ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಮಹಿಳೆಯರ ಗುಂಪನ್ನು ಕೇಂದ್ರ ಸರ್ಕಾರವು ಬೆಂಬಲಿಸಿತ್ತು. ಈ ವಿಚಾರವನ್ನು ಲಿಂಗ ಸಮಾನತೆ, ಸಾಂವಿಧಾನಿಕ ನೈತಿಕತೆ ಮತ್ತು ಆತ್ಮಸಾಕ್ಷಿಯ ದೃಷ್ಟಿಯಿಂದ ಪರಿಶೀಲನೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿತ್ತು.

ತ್ರಿವಳಿ ತಲಾಖ್‌ ಎಂಬುದು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವಣ ಸಂಘರ್ಷ ಅಲ್ಲ. ಇದು ಮುಸ್ಲಿಂ ಸಮುದಾಯದೊಳಗಿನ ಗಂಡಸರು ಮತ್ತು ಹೆಂಗಸರ ನಡುವಣ ಸಂಘರ್ಷ ಎಂದು ಸರ್ಕಾರ ವಾದಿಸಿತ್ತು.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • National, Place, tourism

    ಜಂತರ್ ಮಂತರ್

    ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…

  • ಸುದ್ದಿ

    ನೀರಿಗಾಗಿ ಕಾದು ಕುಳಿತಿದ್ದವರು ನಲ್ಲಿ ತಿರುವಿದ ತಕ್ಷಣ ಬಂತು ರಕ್ತ…ಕಾರಣ?

    ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…

  • ಉಪಯುಕ್ತ ಮಾಹಿತಿ

    ನಿಮ್ಮ ಬ್ಯಾಂಕ್ ಅಕೌಂಟ್, ಮೊಬೈಲ್ ಸಂಪರ್ಕಕ್ಕೆ ಇನ್ನುಮುಂದೆ ಇದು ಬೇಕಾಗಿಲ್ಲ..!

    ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…

  • ಆರೋಗ್ಯ

    ದೇಹದಲ್ಲಿ ರಕ್ತ ಕಡಿಮೆ ಇದೆಯೇ? ರಕ್ತ ಹೆಚ್ಚಾಗಲು ಈ ಟಿಪ್ಸ್ ಫಾಲೋ ಮಾಡಿ ಸಾಕು.

    ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…

  • ಸಂಬಂಧ

    ಈ ಮಹಿಳೆ ತನ್ನ ತಾಯಿಯ ಚಿತಾಭಸ್ಮ ತಿನ್ನುತ್ತಾಳೆ ..!ಕಾರಣ ತಿಳಿಯಲು ಈ ಲೇಖನ ಓದಿ…

    ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.