ಕಾನೂನು

ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

By admin

August 22, 2017

ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು  ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

ತ್ರಿವಳಿ ತಲಾಖ್‌ ಸಂವಿದಾನ ಬಾಹಿರ ಎಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ. ಒಂದೊಮ್ಮೆ ತ್ರಿವಳಿ ತಲಾಖ್ ಬ್ಯಾನ್ ಮಾಡಬೇಕಿದ್ದರೆ ಇದಕ್ಕೆ ಕಾನೂನು ಜಾರಿಗೆ ತನ್ನಿ ಎಂದು ಕೇಂದ್ರ ಸರಕಾರಕ್ಕೆ ಸಲಹೆ ನೀಡಿದೆ.

ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲವಾದ್ದರಿಂದ  ತ್ರಿವಳಿ ತಲಾಖ್‌ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಮೂಲ

ಇನ್ನು ತ್ರಿವಳಿ ತಲಾಖ್ ನೀಡುವುದಕ್ಕೆ 6 ತಿಂಗಳ ಕಾಲ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅದಕ್ಕೂ ಮೊದಲು ಇದಕ್ಕೆ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.

ನ್ಯಾಯಮೂರ್ತಿಗಳ ಬಹುಮತದ ತೀರ್ಪಿನ ಆಧಾರದ ಮೇಲೆ ತ್ರಿವಳಿ ತಲಾಖ್‌ ಅನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ. ಬೇರೆ ಬೇರೆ ಧರ್ಮಕ್ಕೆ ಸೇರಿದ ನ್ಯಾ. ಖೇಹರ್, ಕುರಿಯನ್ ಜೋಸೆಫ್, ರೋಹಿಂಗ್ಟನ್ ಎಫ್ ನಾರಿಮನ್, ಉದಯ್ ಲಲಿತ್, ಎಸ್ ಅಬ್ದುಲ್ ನಜೀರ್ ನ್ಯಾಯಪೀಠ ಈ ತೀರ್ಪು ನೀಡಿದೆ.

ಈ ಹಿಂದೆ ತ್ರಿವಳಿ ತಲಾಖ್‌ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಮಹಿಳೆಯರ ಗುಂಪನ್ನು ಕೇಂದ್ರ ಸರ್ಕಾರವು ಬೆಂಬಲಿಸಿತ್ತು. ಈ ವಿಚಾರವನ್ನು ಲಿಂಗ ಸಮಾನತೆ, ಸಾಂವಿಧಾನಿಕ ನೈತಿಕತೆ ಮತ್ತು ಆತ್ಮಸಾಕ್ಷಿಯ ದೃಷ್ಟಿಯಿಂದ ಪರಿಶೀಲನೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿತ್ತು.

ತ್ರಿವಳಿ ತಲಾಖ್‌ ಎಂಬುದು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವಣ ಸಂಘರ್ಷ ಅಲ್ಲ. ಇದು ಮುಸ್ಲಿಂ ಸಮುದಾಯದೊಳಗಿನ ಗಂಡಸರು ಮತ್ತು ಹೆಂಗಸರ ನಡುವಣ ಸಂಘರ್ಷ ಎಂದು ಸರ್ಕಾರ ವಾದಿಸಿತ್ತು.