ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ.
ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ.
ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ ಸಂಚಾರಿ ಪೊಲೀಸರು ರಚನಾತ್ಮಕ ವಿಚಾರವೊಂದರಿಂದ ಸದ್ದು ಮಾಡುತ್ತಿದ್ದು, ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಲಿಸಿ 500 ರೂ.ಗಳ ದಂಡ ಪಾವತಿ ಮಾಡಿದವರಿಗೆ ಉಚಿತವಾಗಿ ಹೆಲ್ಮೆಟ್ ವಿತರಣೆ ಮಾಡಿದ್ದಾರೆ.
ಇದೇವೇಳೆ, ಸಂಚಾರ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡುವ ಮಂದಿಗೆ ಹೂವುಗಳು, ಚಾಕ್ಲೆಟ್‌ಗಳನ್ನುಕೊಟ್ಟು ಪ್ರೋತ್ಸಾಹಿಸಿ, ಜನಮಾನಸದಲ್ಲಿ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸಲು ಒಡಿಶಾಪೊಲೀಸರು ಮುಂದಾಗಿದ್ದಾರೆ.