ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್ವುಡ್ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ.

ದರ್ಶನ್, ಹಿರಿಯ ನಟ ಅಂಬರೀಶ್, ನಟ ನಿಖಿಲ್ ಕುಮಾರಸ್ವಾಮಿ, ರವಿಚಂದ್ರನ್ ಸೇರಿ ಅನೇಕರು ಈ ಸಿನಿಮಾಗಳಲ್ಲಿ ನಟಿಸಿದ್ದಾರೆ . ಈಗ ಈ ಒಂದು ಸಿನಿಮಾ ಮಲಯಾಳಂಗೆ ಡಬ್ ಆಗಿ ತೆರೆಕಾಣಲಿದೆ . ‘ಕುರಕ್ಷೇತ್ರ’ ಸಿನಿಮಾ ಕನ್ನಡದಲ್ಲಿ ಭಾರೀ ಜನಮನ್ನಣೆ ಪಡೆದುಕೊಂಡಿತ್ತು. ಈ ಸಿನಿಮಾ ಒಟ್ಟು 100 ಕೋಟಿ ರೂ. ಗಿಂತ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಮಲಯಾಳಂನಲ್ಲಿ ಈ ಸಿನಿಮಾವನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎನ್ನುವುದೇ ಎಲ್ಲರಿಗೂ ಕುತೂಹಲವನ್ನು ಉಂಟು ಮಾಡಿದೆ.

ದರ್ಶನ್ ನಟಿಸಿರುವ ಸಾಕಷ್ಟು ಸಿನಿಮಾಗಳು ಈಗಾಗಲೇ ಮಲಯಾಳಂಗೆ ಡಬ್ ಆಗಿ ಯೂಟ್ಯುಬ್ನಲ್ಲಿ ಹರಿದಾಡುತ್ತಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ . ಹೀಗಾಗಿ ದರ್ಶನ್ಗೆ
ಮಲಯಾಳಂನಲ್ಲಿಯೂ ಸಹ ದೊಡ್ಡ ಅಭಿಮಾನಿ ಬಳಗವಿದೆ ಎನ್ನಲಾಗಿದೆ . ಹೀಗಾಗಿ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುವ ನಿರೀಕ್ಷೆಯೂ ಇದೆ. ಕುರುಕ್ಷೇತ್ರ ಮಹಾ ಕಾವ್ಯ ಮಹಾಭಾರತದ ಕ್ಲೈಮ್ಯಾಕ್ಸ್ ಆಗಿರುವ ಕಾರಣ, ಜನರಿಗೆ ಈ ಸಿನಿಮಾ ಹೆಚ್ಚು ಇಷ್ಟವಾಗಿತ್ತು. ಈ ಸಿನಿಮಾ 3ಡಿ ಯಲ್ಲಿಯೂ ತೆರೆಕಂಡಿದ್ದು ಮತ್ತೊಂದು ವಿಶೇಷವಾಗಿದೆ .

ದರ್ಶನ್ ಸದ್ಯ, ‘ಒಡೆಯ’ ಹಾಗೂ ‘ರಾಬರ್ಟ್’ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಎರಡೂ ಸಿನಿಮಾಗಳು ಭಾರೀ ನಿರೀಕ್ಷೆ ಹುಟ್ಟು ಹಾಕಿವೆ. ಇದಲ್ಲದೆ, ಪ್ರಜ್ವಲ್ ದೇವರಾಜ್ ಅಭಿನಯದ ‘ಇನ್ಸ್ಪೆಕ್ಟರ್ ವಿಕ್ರಂ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದಾರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.