ಸುದ್ದಿ

ದಿನಕ್ಕೆ 40 ಕಪ್ ಚಹಾ ಕುಡಿಯುತ್ತಿದ್ದ ಮಹಿಳೆ ನಂತರ ಏನಾಯ್ತು ಗೊತ್ತಾ ?ತಿಳಿದರೆ ಶಾಕ್ ; ತಾಯಿಯ ಕೊನೆ ಆಸೆ ತೀರಿಸಿದ ಮಗಳು..!

By admin

November 04, 2019

ಇಂಗ್ಲೆಂಡ್‌ನ ಲೀಸೆಸ್ಟರ್ ಶೈರ್‌ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು.

ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ ತಿಳಿಸಿದ್ದರು. ಹೀಗಾಗಿ ಟೀನಾ ಸಾವನ್ನಪ್ಪಿದಾಗ ಅವರ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿಯೇ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಲಾಯಿತು. ಈ ವಿಚಾರ ತಿಳಿದು ಅನೇಕರು ಎಂಥ ವಿಚಿತ್ರ ಆಸೆಯೋ ಎಂದಿದ್ದರೆ, ಕೆಲವರು ತಾಯಿಯ ಕೊನೆ ಆಸೆ ಪೂರೈಸಿದ ಮಗಳ ಪ್ರೀತಿಗೆ ಭೇಷ್ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿದ ಡೇಬ್ಸ್, ನನ್ನ ತಾಯಿಯ ಆಸೆಯನ್ನು ಪೂರೈಸಿದ್ದೇನೆ ಎಂಬ ತೃಪ್ತಿ ನನಗಿದೆ. ಅಮ್ಮನನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಅಂತ್ಯ ಸಂಸ್ಕಾರ ಮಾಡಿರೋದನ್ನು ಅವರೂ ಕೂಡ ಸ್ವರ್ಗದಿಂದ ನೋಡಿದ್ದಾರೆ ಎಂದು ನಾನು ಅಂದುಕೊಂಡಿದ್ದೇನೆ. ಮೇಲಿನಿಂದ ತನ್ನ ಚಹಾ ಬ್ಯಾಗ್ರೀತಿ ಕಾಣುವ ಶವದ ಪೆಟ್ಟಿಗೆ ನೋಡಿ ಅವರು ಸಿಕ್ಕಾಪಟ್ಟೆ ನಕ್ಕಿರುತ್ತಾರೆ. ಅವರಿಗೆ ಇದರಿಂದ ಖುಷಿಯಾಗಿದೆ ಎಂದುನನಗೆ ಗೊತ್ತು. ಈಗಲೂ ನಾನು ಚಹಾ ಮಾಡಿದಾಗಲೆಲ್ಲಾ ಅಮ್ಮನಿಗಾಗಿ ಚಹಾವನ್ನು ಎತ್ತಿಡುತ್ತೇನೆ ಎಂದು ಹೇಳಿದ್ದಾರೆ.

ನನ್ನ ಅಮ್ಮ 73ನೇ ವಯಸ್ಸಿಗೆ ಹೃದಯಾಘಾತದಿಂದ ನಮ್ಮನ್ನು ಅಗಲಿದರು. ಅವರು ಎರಡು ಬಾರಿ ಕ್ಯಾನ್ಸರ್ ಜೊತೆ ಹೋರಾಡಿ ಗುಣಮುಖರಾಗಿದ್ದರು. ಅವರು 14 ವರ್ಷದವರಾಗಿದ್ದಾಗ ಸ್ಪೇನ್‌ನಲ್ಲಿ ಒಂದುಕೀಟ ಅವರನ್ನು ಕಚ್ಚಿತ್ತು. ಅದರ ಕಡಿತದಿಂದ ಅವರ 1 ಕಾಲಿಗೆ ಇನ್ಫೆಕ್ಷನ್ಆಗಿ ಕಾಲನ್ನೇ ಕತ್ತರಿಸಬೇಕಾಯ್ತು. ಬಳಿಕ ಸೋಂಕು ಹರಡಿ ಇನ್ನೊಂದು ಕಾಲನ್ನುಕೂಡ ಕತ್ತರಿಸಬೇಕಾಯ್ತು. ಎರಡೂ ಕಾಲನ್ನು ಕಳೆದುಕೊಂಡಿದ್ದರೂ ನನ್ನ ಅಮ್ಮ ಛಲ ಬಿಟ್ಟಿರಲಿಲ್ಲ.