ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ. ಪಂಚಕುಲಾದ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪುವು ಪ್ರಕಟಿಸಿದೆ. 7 ವರ್ಷ ಜೈಲುಶಿಕ್ಷೆ ವಿಧಿಸಿದೆ. ಬಾಬಾ ಇನ್ನು ತನ್ನ ಆಶ್ರಮ ಬಿಟ್ಟು ಜೈಲಿನಲ್ಲಿ ಕಂಬಿ ಎಣಿಸಬೇಕಿದೆ. ಬಾಬಾ ನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದ್ದು, ಜೈಲಿಗೆ ರವಾನೆ ಮಾಡಲಾಗುತ್ತಿದೆ.
ಹರಿಯಾಣದ ಸಿರ್ಸಾದಲ್ಲಿರುವ ಆಶ್ರಮದಲ್ಲಿ ರಾಮ್ ರಹೀಂ ವಿರುದ್ಧ 1999ರಲ್ಲಿ ಇಬ್ಬರು ಮಹಿಳಾ ಭಕ್ತರ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಸಾಭಿತಾಗಿದೆ. ಕಳೆದ 2002ರಿಂದ ಸಿಬಿಐ ತನಿಖೆ ನಡೆಸಲಾಗುತ್ತಿತ್ತು. ಇಂದು ಪಂಚಕುಲಾದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪನ್ನು ನೀಡಿದೆ.
ತೀರ್ಪನ್ನು ಪ್ರಕಟಿಸಿದ ನ್ಯಾಯಾಧೀಶರು, ರಾಮ್ ರಹೀಂ ಸಿಂಗ್ ನನ್ನು ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಿದ್ದರು, ಈ ಹಿನ್ನೆಲೆಯಲ್ಲಿ ರಾಮ್ ರಹೀಂ ಸಿಂಗ್ ರನ್ನು ಪೊಲೀಸರು ಅಂಬಾಲಾ ಜೈಲಿಗೆ ಕರೆದೊಯ್ಯಲಿದ್ದಾರೆ ಎಂದು ಸಂತ್ರಸ್ತೆ ಪರ ವಕೀಲರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾದ ಬೆನ್ನಲ್ಲೇ ಹರಿಯಾಣದ ಪಂಚಕುಲಾದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಆರೋಪ ಸಾಬೀತಾಗುತ್ತಿದ್ದಂತೆಯೇ ಕೋರ್ಟ್ ಎದುರೇ ನೆರೆದಿದ್ದ ಬಾಬಾ ಭಕ್ತರು ರಾಷ್ಟ್ರೀಯ ಸುದ್ದಿವಾಹಿನಿಯ ಮೂರು ವಾಹನಗಳನ್ನು ಧ್ವಂಸ ಮಾಡಿದ್ದಾರೆ. ಅಲ್ಲದೇ 10ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿಯಿಟ್ಟಿದ್ದಾರೆ.
ಘಟನೆಯಿಂದಾಗಿ 11 ಮಂದಿ ಬಾಬಾ ಭಕ್ತರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಹರಿಯಾಣದ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಅಲ್ಲಿನ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟಾರ್, ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಇದ್ಯಾವುದಕ್ಕೂ ಜಗ್ಗದ ಬಾಬಾ ಭಕ್ತರು ಹಿಂಸಾಚಾರಕ್ಕೆ ತಿರುಗಿದ್ದಾರೆ. ಪೊಲೀಸರ ಮೇಲೆಯೇ ರಾಮ್ ರಹೀಂ ಭಕ್ತರಿಂದ ಕಲ್ಲು ತೂರಾಟ, ಹಲ್ಲೆ ನಡೆಯುತ್ತಿದೆ. ತಮ್ಮ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಗುಂಡು, ಜಲಫಿರಂಗಿ ಬಳಸಿದ್ರೂ ಬಗ್ಗದೇ ಭದ್ರತಾ ಪಡೆ ಮೇಲೂ ಕಲ್ಲು ತೂರಾಟ ನಡೆಸುತ್ತಿದ್ದಾರೆ.
ಸರ್ಕಾರಿ ಕಚೇರಿ, ಪೆಟ್ರೋಲ್ ಬಂಕ್, ವಿದ್ಯುತ್ ಸ್ಥಾವರಕ್ಕೂ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಮನೆಯೊಳಗೆ ನಿಲ್ಲಿಸಿದ್ದ ಕಾರ್ ಗಳ ಮೇಲೂ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಿನಲ್ಲಿ ಸದ್ಯ ಹರಿಯಾಣದ ಪರಿಸ್ಥಿತಿ ಬಿಗಡಾಯಿಸಿದೆ. ಇತ್ತ ನವದೆಹಲಿಯಲ್ಲಿ 7 ಕಡೆ ಕಲ್ಲು ತೂರಾಟ, ಬೆಂಕಿ ಹಚ್ಚಿದ ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…
ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…