ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಹುಡುಕಾಟದಲ್ಲಿ…
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ನಮಗಿಂತ ಮೇಲೆ ಯಾರೋ ಒಬ್ಬ ಶಕ್ತಿಯುತ ವ್ಯಕ್ತಿ ಇದ್ದಾನೆ ಎಂಬ ನಂಬಿಕೆ ಒಂದಷ್ಟು ಮಾನಸಿಕ ನೆಮ್ಮದಿ ನೀಡಬಹುದು.
ಸಂಕಷ್ಟದ ಸಮಯದಲ್ಲಿ ಮನುಷ್ಯ ಪ್ರಯತ್ನ ವಿಫಲವಾದಾಗ ಅಗೋಚರ ಶಕ್ತಿ ಕಾಪಾಡಬಹುದು ಎಂಬ ದೂರದ ಆಸೆ ಸ್ವಲ್ಪ ಸಮಾಧಾನ ನೀಡಬಹುದು.
ದೇವಸ್ಥಾನದ ಪ್ರಯಾಣ ಮತ್ತು ದೇವ ಮಂದಿರದ ಪ್ರಶಾಂತತೆ ಒಂದಷ್ಟು ಭರವಸೆ ಕೊಡಬಹುದು.
ದೇವರ ಬಗೆಗಿನ ಹಾಡುಗಳು ಭಜನೆಗಳು ಕಥೆಗಳು ಪುಸ್ತಕಗಳು ಮನಸ್ಸಿನ ಆತ್ಮವಿಶ್ವಾಸ ಹೆಚ್ಚಿಸಬಹುದು.
ದೇವರ ಬಗೆಗಿನ ಭಯ,
ವ್ಯಕ್ತಿಗಳು ತಪ್ಪು ಮಾಡುವುದನ್ನು ಕಡಿಮೆ ಮಾಡಿ ಸಮಾಜದ ಶಾಂತಿಗೆ ಒಂದಷ್ಟು ಕೊಡುಗೆ ನೀಡಬಹುದು.
ಮಂದಿರ ಮಸೀದಿ ಚರ್ಚು ಗುರುದ್ವಾರಗಳು ಮತ್ತು ಅದಕ್ಕೆ ಸಂಬಂಧಿಸಿದ ಆಚರಣೆಗಳು ಹಲವು ಜನರಿಗೆ ಉದ್ಯೋಗ ನೀಡಬಹುದು.
ದೇವರ ನಂಬಿಕೆ ಹಬ್ಬದ ಸಂಭ್ರಮ ಆಚರಿಸಲು ಸಹಕಾರಿಯಾಗಬಹುದು.
ಕೆಲವು ಆಕಸ್ಮಿಕಗಳು ಕೆಲವರಿಗೆ ಅದೃಷ್ಟವಾಗಿಯೂ ಕೆಲವರಿಗೆ ದುರಾದೃಷ್ಟವಾಗಿಯೂ ಕಾಡಬಹುದು. ಅದನ್ನು ದೇವರ ಕೃಪೆಯೆಂದು ಭಾವಿಸಲಾಗುತ್ತದೆ.
ಹೀಗೆ ಕೆಲವು ನಂಬಿಕೆ ಆಧಾರಿತ ಗಾಳಿ ಗೋಪುರವು ದೇವರ ಅಸ್ತಿತ್ವವನ್ನು ಸಮರ್ಥಿಸಬಹುದು.
ಆದರೆ ಈ ಎಲ್ಲವೂ ನಂಬಿಕೆಯೇ ಹೊರತು ವಾಸ್ತವವಲ್ಲ.
ನೀವು ಅನಾದಿ ಕಾಲದಿಂದ ಈ ಕ್ಷಣದವರೆಗೆ ಆದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ.
ಬೆತ್ತಲೆಯಿಂದ ಜೀನ್ಸ್ ವರೆಗೆ, ಕಾಲ್ನಡಿಗೆಯಿಂದ ವಿಮಾನದವರೆಗೆ,
ಗೆಡ್ಡೆ ಗೆಣಸುಗಳಿಂದ ಕಬಾಬ್ ವರೆಗೆ, ಔಷಧೀಯ ಸಸ್ಯಗಳಿಂದ ಆಸ್ಪತ್ರೆಯ ವೆಂಟಿಲೇಟರ್ ವರೆಗೆ,
ಗುಂಪು ಆಡಳಿತದಿಂದ ಪ್ರಜಾಪ್ರಭುತ್ವದವರಗೆ,
ಪಾರಿವಾಳಗಳಿಂದ ಇಂಟರ್ ನೆಟ್ ವರೆಗೆ ಎಲ್ಲವೂ ಸೃಷ್ಟಿಯ ಪ್ರಾರಂಭದಲ್ಲೇ ಆಗದೆ ಮನುಷ್ಯನ ಅಗಾಧ ಅನುಭವದಿಂದ ಹಂತ ಹಂತವಾಗಿ ಬೆಳವಣಿಗೆ ಹೊಂದಿದೆ. ದೇವರ ಸೃಷ್ಟಿಯೇ ಆಗಿದ್ದರೆ ಎಲ್ಲವನ್ನೂ ಸ್ಮಾರ್ಟ್ ಆಗಿ ಮೊದಲೇ ಪ್ಲಾನ್ ಮಾಡಬೇಕಿತ್ತು.
ಅನಾದಿ ಕಾಲದಲ್ಲಿ ಒಬ್ಬರಿಗೊಬ್ಬರು ಕೊಂದು ಬಲಿಷ್ಠರು ಮಾತ್ರ ಬದುಕುವ ವ್ಯವಸ್ಥೆಯಿಂದ ಅನೇಕ ಯುದ್ಧಗಳನ್ನು ಮಾಡಿ ಕೋಟಿ ಕೋಟಿ ಜನರ ಹತ್ಯೆಗಳು ನಡೆದು ಈಗ ಒಂದಷ್ಟು ರಕ್ಷಣೆಯ ವ್ಯವಸ್ಥೆಯಲ್ಲಿ ನಾವಿದ್ದೇವೆ.
ಇಲ್ಲಿಯೂ ದೇವರ ಪಾತ್ರ ಕಾಣುವುದಿಲ್ಲ.
ದೇವರ ಶಕ್ತಿಯಿಲ್ಲದೆ ಒಂದು ಹುಲ್ಲು ಕಡ್ಡಿಯೂ ಚಲಿಸುವುದಿಲ್ಲ ಎಂದು ಭಕ್ತರು ಹೇಳಿದರೆ, ದೇವರಿಗೆ ಒಂದು ಹುಲ್ಲು ಕಡ್ಡಿಯನ್ನು ಕದಲಿಸುವ ಶಕ್ತಿ ಇಲ್ಲ ಎಂದು ಕೆಲವರು ಹೇಳುತ್ತಾರೆ.
ಜ್ಞಾನದಿಂದ ಕುತೂಹಲಕ್ಕಾಗಿ ಹುಡುಕಾಟ ನಡೆಸಿದಾಗ ಬೇರೆ ಬೇರೆ ರೂಪದ ಶಕ್ತಿಗಳು ಸಿಗುತ್ತವೆಯೇ ಹೊರತು ಸಾಮಾನ್ಯ ಜನ ನಂಬಿರುವ ಕೇಂದ್ರೀಕೃತ ಮತ್ತು ಸಮಸ್ತ ಸೃಷ್ಟಿಯ ಮೇಲೆ ನಿಯಂತ್ರಣ ಇರುವ ಶಕ್ತಿ ಗೋಚರಿಸುವುದಿಲ್ಲ.
ಕುರಾನ್ ಬೈಬಲ್ ವೇದ ಉಪನಿಷತ್ತುಗಳು ಮತ್ತು ಇತರ ಧರ್ಮ ಗ್ರಂಥಗಳು ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತವೆ. ಆದರೆ ಆ ಯಾವ ಉತ್ತರವೂ ಸರಳವಾಗಿ ಸಹಜವಾಗಿ ನೇರವಾಗಿ ಸಾಮಾನ್ಯ ತಿಳುವಳಿಕೆಗೆ ನಿಲುಕದೆ ಬಹುತೇಕ ಕಾಲ್ಪನಿಕ ಪಲಾಯನವಾದವೇ ಆಗಿರುತ್ತದೆ. ದೇವರನ್ನು ತೋರಿಸುವ ಪ್ರಯತ್ನ ಮಾತ್ರ ಸಫಲವಾಗಿಲ್ಲ.
ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಬಲ್ಲೆ ಎನ್ನುವ ಗ್ರಂಥಗಳು, ಅದರ ರಚನಾಕಾರರು ಮತ್ತು ಅದನ್ನು ಇಂದಿಗೂ ಪ್ರತಿಪಾದಿಸುತ್ತಿರುವ ಧಾರ್ಮಿಕ ಪ್ರತಿನಿಧಿಗಳು ಖಂಡಿತ ಭ್ರಮಾಧೀನರಾಗಿರುತ್ತಾರೆ.
ಅವರಿಗೆ ಕೇಳಿ, ಅಪಘಾತ ಅನಾರೋಗ್ಯ ಕುಟುಂಬ ಕಲಹ ಅಧಿಕಾರ ಬಡತನ ದೌರ್ಭಾಗ್ಯ ಮದುವೆ ನಿರುದ್ಯೋಗ ಎಲ್ಲಕ್ಕೂ ಕಾರಣಗಳನ್ನು ಮತ್ತು ಅದಕ್ಕೆ ಪರಿಹಾರವನ್ನು ಸೂಚಿಸುತ್ತಾರೆ. ನಮಗೆ ಗೊತ್ತಿಲ್ಲ ಎಂದು ಹೇಳುವುದೇ ಇಲ್ಲ.
ಹಾಗಾದರೆ ಇದು ಸಾಧ್ಯವೇ. ಇದು ಸಾಧ್ಯವಾಗಿದಿದ್ದರೆ ಇಡೀ ವಿಶ್ವವೇ ಸ್ವರ್ಗವಾಗುತ್ತಿತ್ತು.
ಇದನ್ನು ಮರೆಮಾಚಲು ವಿಧಿ ಲಿಖಿತ – ಹಣೆ ಬರಹ ಎಂಬ ಮತ್ತೊಂದು ಪಲಾಯನವಾದದ ಸೂತ್ರ ಮುಂದಿಡುತ್ತಾರೆ.
ಹುಟ್ಟುವ ಪ್ರತಿ ಜೀವಿಗೂ ಹಣೆ ಬರಹ ಬರೆಯುತ್ತಾ ಕೂರಲು ದೇವರಿಗೆ ಕೆಲಸವಿಲ್ಲವೇ ? ಇದು ಸಾಧ್ಯವೇ ?
ವಿಶ್ವದ ಪ್ರತಿ ನಾಗರಿಕತೆಯು ಒಂದೊಂದು ದೇವರನ್ನು ಸೃಷ್ಟಿಸಿರುವುದು ಮನುಷ್ಯನೇ ದೇವರ ಸೃಷ್ಟಿಕರ್ತ ಎಂಬುದನ್ನು ಸೂಚಿಸುತ್ತದೆಯಲ್ಲವೇ.
ಜ್ಞಾನವೆಂಬುದು ನಿಂತ ನೀರಲ್ಲ ಅದು ಹರಿಯುವ ಪ್ರವಾಹ ಎಂಬ ಸೂಕ್ಷ್ಮ ತಿಳಿವಳಿಕೆ ಅವರಿಗೆ ಇರುವುದಿಲ್ಲ. ಇದ್ದರೂ ಅದನ್ನು ಒಪ್ಪಿಕೊಂಡರೆ ಅವರ ಅಸ್ತಿತ್ವವೇ ಕುಸಿಯುತ್ತದೆ.
ಸಾವಿನ ಭಯ, ಹಣ ಅಧಿಕಾರ ಸಿಗುವ ದುರಾಸೆ, ದಾರಿದ್ರ್ಯ ಸ್ಥಿತಿಗೆ ತಲುಪುವ ಆತಂಕ, ಸಂಕೀರ್ಣ ಜೀವನ ಶೈಲಿ, ಯಶಸ್ಸನ್ನು ತಪ್ಪಾಗಿ ಅರ್ಥೈಸಿರುವುದು, ಪ್ರಬುದ್ದತೆಯ ಮಟ್ಟ ಕುಸಿದು ಸ್ವತಂತ್ರ ಕ್ರಿಯಾತ್ಮಕ ಚಿಂತನೆಯ ಕೊರತೆ ದೇವರ ಬಗ್ಗೆ ನಾವು ನಿಷ್ಪಕ್ಷಪಾತ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗತ್ತಿಲ್ಲ.
ಇದನ್ನೆಲ್ಲಾ ಮೀರಿ ಯೋಚಿಸಿದರೆ ದೇವರ ಇರುವಿಕೆ ಮತ್ತು ಇಲ್ಲದಿರುವಿಕೆಯ ಸ್ಪಷ್ಟ ಚಿತ್ರಣ ಸಿಗುತ್ತದೆ.
ನಿಮ್ಮ ನಂಬಿಕೆ ಮತ್ತು ಅಭಿಪ್ರಾಯ ಗೌರವಿಸುತ್ತಾ…….
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…