ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.
ಇನ್ನು ಈಕೆ ಹುಟ್ಟಿ ಬೆಳೆದಿದ್ದು ಶ್ರೀಮಂತರ ಮನೆಯಲ್ಲಿಯೇ ಆದರೆ, ಕುಟುಂಬದ ಸದಸ್ಯರು ವಂಚಿಸಿದ್ದರಿಂದ ಬೀದಿಪಾಲಾಗುವಂತಹ ಸ್ಥಿತಿ ಆಕೆಗೆ ಬಂದಿದೆ ಎಂದು ಆಕೆಯ ನೆರೆಹೊರೆಯವರು ಹೇಳುತ್ತಿರುವುದು ಕಂಡು ಬಂದಿದೆ. ಮೊದಲು ಮನೆ ಕೆಲಸ ಮಾಡುತ್ತಿದ್ದೆ. ನಂತರ ಭಿಕ್ಷೆ ಬೇಡಿ ಹಣವನ್ನು ಸಂಗ್ರಹಿಸಲು ಆರಂಭಿಸಿದೆ. ದೇವರು ನನಗೆ ಉಸಿರು ಬದುಕು ಕೊಟ್ಟಿದ್ದಾನೆ. ಅವನಿಂದ ಪಡೆದಿದ್ದನ್ನು ಅವನಿಗೆ ವಾಪಸ್ ಕೊಡುತ್ತಿದ್ದೇನೆ. ನನಗೆ ಇದರಲ್ಲಿ ತೃಪ್ತಿ ಇದೆ ಎಂದು ಸೀತಮ್ಮ ಹೇಳಿದ್ದಾರೆ.
ಕೈಯಲ್ಲಿ ಶಕ್ತಿ ಇರುವ ವರೆಗೂ ದುಡಿದು ತಿಂದ ಸೀತಮ್ಮ ವೃದ್ಧಾಪ್ಯ ಸಮೀಪಿಸಿದಾಗ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕುಳಿತು ಹತ್ತಾರು ವರ್ಷಗಳಿಂದ ಭಿಕ್ಷೆ ಬೇಡುತ್ತಿದ್ದಾರೆ. ಸೀತಮ್ಮ ದೇವಸ್ಥಾನದ ಸಮೀಪದ ಮನೆಯೊಂದರಲ್ಲಿ ಮಲಗುತ್ತಾರೆ. ದಿನವೂ ಭಿಕ್ಷೆ ಬೇಡಿ ಅದರಲ್ಲಿ ಸಿಕ್ಕ ಹಣವನ್ನು ವಾರಕೊಮ್ಮೆ ತನ್ನ ಬ್ಯಾಂಕ್ ಅಕೌಂಟ್ ಗೆ ಹಾಕುತ್ತಿದ್ದರು. ಈಗ ತಮ್ಮ ಅಕೌಂಟ್ ನಲ್ಲಿದ್ದ ಎಲ್ಲಾ ಹಣವನ್ನು ಯಾವ ದೇವರ ಮುಂದೆ ಕೂತು ಭಿಕ್ಷೆ ಬೇಡಿ ಸಂಪಾದಿಸಿದ್ದರೋ ಅದೇ ದೇವರಿಗೆ ಕಾಣಿಕೆಯಾಗಿ ನೀಡಿದ್ದಾರೆ.
ಮೈಸೂರಿನ ಪಡುವಾರಹಳ್ಳಿಯಲ್ಲಿನ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ಎಂ.ವಿ. ಸೀತಾ ಎಂಬವರು ಹಲವು ವರ್ಷದಿಂದ ಭಿಕ್ಷೆ ಬೇಡುತ್ತಿದ್ದು, ಹಾಗೇ ಭಿಕ್ಷೆ ಬೇಡಿ ಸಂಪಾದಿಸಿದ 2 ಲಕ್ಷ ಹಣವನ್ನು ಅದೇ ದೇವಸ್ಥಾನದ ಅಭಿವೃದ್ಧಿಗೆ ಹಾಗೂ ಹನುಮ ಜಯಂತಿ ದಿನ ಅನ್ನಸಂತರ್ಪಣೆಗಾಗಿ ಕಾಣಿಕೆಯಾಗಿ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಆರಂಭದಲ್ಲಿ ಭಿಕ್ಷುಕಿ ಸೀತಾಳ ದೇಣಿಗೆ ಪಡೆಯಲು ದೇವಾಲಯದ ಅಡಳಿತ ಮಂಡಳಿ ತಿರಸ್ಕರಿಸಿತ್ತು. ಆದರೆ, ದೇವಾಲಯದ ನವೀಕರಣಕ್ಕಾಗಿ ನನ್ನ ಅಳಿಲು ಸೇವೆ ಎಂದು ಪರಿಗಣಿಸಿ ದೇಣಿಗೆ ಪಡೆಯುವಂತೆ ಮನವಿ ಮಾಡಿದಾಗ, ಅಡಳಿತ ಮಂಡಳಿ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…
ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….