ವಿಸ್ಮಯ ಜಗತ್ತು

ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿದ್ದ ಈ ವೃದ್ದ ಮಹಿಳೆ,ಅದೇ ದೇವಸ್ಥಾನಕ್ಕೆ ಕೊಟ್ಟ ಹಣ ಎಷ್ಟು ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ…

By admin

November 24, 2017

ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.

ಇನ್ನು ಈಕೆ ಹುಟ್ಟಿ ಬೆಳೆದಿದ್ದು ಶ್ರೀಮಂತರ ಮನೆಯಲ್ಲಿಯೇ ಆದರೆ, ಕುಟುಂಬದ ಸದಸ್ಯರು ವಂಚಿಸಿದ್ದರಿಂದ ಬೀದಿಪಾಲಾಗುವಂತಹ ಸ್ಥಿತಿ ಆಕೆಗೆ ಬಂದಿದೆ ಎಂದು ಆಕೆಯ ನೆರೆಹೊರೆಯವರು ಹೇಳುತ್ತಿರುವುದು ಕಂಡು ಬಂದಿದೆ. ಮೊದಲು ಮನೆ ಕೆಲಸ ಮಾಡುತ್ತಿದ್ದೆ. ನಂತರ ಭಿಕ್ಷೆ ಬೇಡಿ ಹಣವನ್ನು ಸಂಗ್ರಹಿಸಲು ಆರಂಭಿಸಿದೆ. ದೇವರು ನನಗೆ ಉಸಿರು ಬದುಕು ಕೊಟ್ಟಿದ್ದಾನೆ. ಅವನಿಂದ ಪಡೆದಿದ್ದನ್ನು ಅವನಿಗೆ ವಾಪಸ್ ಕೊಡುತ್ತಿದ್ದೇನೆ. ನನಗೆ ಇದರಲ್ಲಿ ತೃಪ್ತಿ ಇದೆ ಎಂದು ಸೀತಮ್ಮ ಹೇಳಿದ್ದಾರೆ.

ಕೈಯಲ್ಲಿ ಶಕ್ತಿ ಇರುವ ವರೆಗೂ ದುಡಿದು ತಿಂದ ಸೀತಮ್ಮ ವೃದ್ಧಾಪ್ಯ ಸಮೀಪಿಸಿದಾಗ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕುಳಿತು ಹತ್ತಾರು ವರ್ಷಗಳಿಂದ ಭಿಕ್ಷೆ ಬೇಡುತ್ತಿದ್ದಾರೆ. ಸೀತಮ್ಮ ದೇವಸ್ಥಾನದ ಸಮೀಪದ ಮನೆಯೊಂದರಲ್ಲಿ ಮಲಗುತ್ತಾರೆ. ದಿನವೂ ಭಿಕ್ಷೆ ಬೇಡಿ ಅದರಲ್ಲಿ ಸಿಕ್ಕ ಹಣವನ್ನು ವಾರಕೊಮ್ಮೆ ತನ್ನ ಬ್ಯಾಂಕ್ ಅಕೌಂಟ್ ಗೆ ಹಾಕುತ್ತಿದ್ದರು. ಈಗ ತಮ್ಮ ಅಕೌಂಟ್ ನಲ್ಲಿದ್ದ ಎಲ್ಲಾ ಹಣವನ್ನು ಯಾವ ದೇವರ ಮುಂದೆ ಕೂತು ಭಿಕ್ಷೆ ಬೇಡಿ ಸಂಪಾದಿಸಿದ್ದರೋ ಅದೇ ದೇವರಿಗೆ ಕಾಣಿಕೆಯಾಗಿ ನೀಡಿದ್ದಾರೆ.

ಮೈಸೂರಿನ ಪಡುವಾರಹಳ್ಳಿಯಲ್ಲಿನ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ಎಂ.ವಿ. ಸೀತಾ ಎಂಬವರು ಹಲವು ವರ್ಷದಿಂದ ಭಿಕ್ಷೆ ಬೇಡುತ್ತಿದ್ದು, ಹಾಗೇ ಭಿಕ್ಷೆ ಬೇಡಿ ಸಂಪಾದಿಸಿದ 2 ಲಕ್ಷ ಹಣವನ್ನು ಅದೇ ದೇವಸ್ಥಾನದ ಅಭಿವೃದ್ಧಿಗೆ ಹಾಗೂ ಹನುಮ ಜಯಂತಿ ದಿನ ಅನ್ನಸಂತರ್ಪಣೆಗಾಗಿ ಕಾಣಿಕೆಯಾಗಿ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಆರಂಭದಲ್ಲಿ ಭಿಕ್ಷುಕಿ ಸೀತಾಳ ದೇಣಿಗೆ ಪಡೆಯಲು ದೇವಾಲಯದ ಅಡಳಿತ ಮಂಡಳಿ ತಿರಸ್ಕರಿಸಿತ್ತು. ಆದರೆ, ದೇವಾಲಯದ ನವೀಕರಣಕ್ಕಾಗಿ ನನ್ನ ಅಳಿಲು ಸೇವೆ ಎಂದು ಪರಿಗಣಿಸಿ ದೇಣಿಗೆ ಪಡೆಯುವಂತೆ ಮನವಿ ಮಾಡಿದಾಗ, ಅಡಳಿತ ಮಂಡಳಿ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.