ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಬಹು ಅಂಗಾಂಗ ವೈಫಲ್ಯದಿಂದ ಬುಧವಾರ(ಮೇ 31) ಬೆಳಗ್ಗೆ 4.40ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ಎಂಎಸ್ ರಾಮಯ್ಯ ಡಾ. ಸಂಜಯ್ ಕುಲಕರ್ಣಿ ಪ್ರಕಟಿಸಿದ್ದಾರೆ. ಕಳೆದ 16 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಪಾರ್ವತಮ್ಮ ಅವರು ಕನ್ನಡ ಚಲನಚಿತ್ರರಂಗದ ವರನಟ ಡಾ. ರಾಜ್ ಕುಮಾರ್ ಅವರ ಪತ್ನಿಯಾಗಿ, ಚಿತ್ರರಂಗದ ಶಕ್ತಿಯಾಗಿ ಬೆಳೆದವರು. ಪಾರ್ವತಮ್ಮ ಅವರು ಪುತ್ರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್, ಇಬ್ಬರು ಪುತ್ರಿಯರಾದ ಪೂರ್ಣಿಮಾ, ಲಕ್ಷ್ಮಿ, ಸೋದರರಾದ ಎಸ್ಎ ಚಿನ್ನೇಗೌಡ, ಗೋವಿಂದರಾಜ್ ಹಾಗೂ ಶ್ರೀನಿವಾಸ್ ಸೇರಿದಂತೆ ಮೊಮ್ಮಕ್ಕಳು, ಅಪಾರ ಅಭಿಮಾನಿ ವರ್ಗವನ್ನು ಅಗಲಿದ್ದಾರೆ.
ಪೂರ್ಣಿಮಾ ಎಂಟರ್ ಪ್ರೈಸರ್ ಮೂಲಕ ತಮ್ಮ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಲ್ಲದೆ, ಸುಧಾರಾಣಿ, ಮಾಲಾಶ್ರೀ, ಪ್ರೇಮಾ, ರಕ್ಷಿತಾ, ರಮ್ಯಾ ಅವರನ್ನು ಚಿತ್ರರಂಗಕ್ಕೆ ಕರೆ ತಂದವರು.
ಸರಿ ಸುಮಾರು 80ಕ್ಕೂ ಅಧಿಕ ಚಿತ್ರಗಳನ್ನು ನಿರ್ಮಿಸಿದ್ದರು. ಡಾ. ರಾಜ್ ಅಭಿನಯದ ಹಾಲು ಜೇನು, ಕವಿರತ್ನ ಕಾಳಿದಾಸ, ಜೀವನ ಚೈತ್ರ , ಶಿವರಾಜ್ ಅಭಿನಯದ ಆನಂದ್, ಓಂ, ಜನುಮದ ಜೋಡಿ, ರಾಘವೇಂದ್ರ ರಾಜ್ ಕುಮಾರ್ ಅಭಿನಯದ ನಂಜುಂಡಿ ಕಲ್ಯಾಣ, ಪುನೀತ್ ಅಭಿನಯದ ಅಪ್ಪು, ಅಭಿ, ಹುಡುಗರು ಸೇರಿದಂತೆ ಅನೇಕ ಹಿಟ್ ಚಿತ್ರಗಳನ್ನು ನೀಡಿದವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಆಗಿರುವ ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…
ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.