ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ.
ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್ನಲ್ಲಿ ನೋಟುಗಳನ್ನು ತೆಗೆದುಕೊಂಡು ಬಂದಿದ್ದರು. ಮದುವೆ ನಂತರ ಆ ಹಣವನ್ನು ನವಜೋಡಿ ಮೇಲೆ ಸುರಿಸಿದ್ದಾರೆ.
ವೇದಿಕೆ ಮೇಲೆಯೇ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ಹಣವನ್ನು ಅವರ ಮೇಲೆ ಸುರಿದಿದ್ದಾರೆ. ಅವರು ಹಣವನ್ನು ಸುರಿಯುತ್ತಿದ್ದಂತೆ ಅಲ್ಲಿದ್ದ ಮಕ್ಕಳು ಹಾಗೂ ಸಂಬಂಧಿಕರು ಹಣದ ನೋಟುಗಳನ್ನು ತೆಗೆದುಕೊಳ್ಳಲು ವೇದಿಕೆ ಹತ್ತಿದ್ದಾರೆ.