ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಹೌದು.ಉತ್ತರಪ್ರದೇಶದ ಶಹಜಹಾನ್ಪುರದಲ್ಲಿ ನಡೆದ ಒಂದು ಮದುವೆಯಲ್ಲಿ, ವರ ನಾಗಿಣಿ ಡ್ಯಾನ್ಸ್ ಮಾಡಿದ್ದರಿಂದ ವಧು ಮದುವೆಯನ್ನೇ ತಿರಸ್ಕರಿಸಿದ್ದಾಳೆ.
ಉತ್ತರಪ್ರದೇಶದ ಶಹಜಹಾನ್ಪುರದ ಪ್ರಿಯಾಂಕಾ ತ್ರಿಪಾಠಿ ಮತ್ತು ಅನುಭವ್ ಮಿಶ್ರಾ ಅವರ ಮದುವೆಯನ್ನು ಕುಟುಂಬಸ್ಥರು ನಿಗದಿ ಮಾಡಿದ್ದರು. ಎಲ್ಲಾ ಸುಸೂತ್ರವಾಗಿ ನಡೆದುಕೊಂಡು ಬಂದಿತ್ತು. ಆದರೆ ಕೊನೆಯ ಕ್ಷಣದಲ್ಲಿ ವರನು ಕುಡಿದ ಸ್ಥಿತಿಯಲ್ಲಿ, ನಾಗಿಣಿ ಡ್ಯಾನ್ಸ್ ಮಾಡಿ ದೊಡ್ಡ ಯಡವಟ್ಟು ಮಾಡಿಕೊಂಡಿದ್ದಾನೆ.
ವರ ಅನುಭವ್ ಮಿಶ್ರಾ ಮಾಡಿದ ನಾಗಿಣಿ ಡ್ಯಾನ್ಸ್ ನಿಂದ ಮುಜುಗರವಾದ ಕಾರಣ, ಇನ್ನೇನು ಮದುವೆಯ ಶಾಸ್ತ್ರಗಳು ಆರಂಭವಾಗಬೇಕಿದ್ದ ಕೆಲವೇ ಸಮಯದ ಮುಂಚೆ ವಧು ಮದುವೆ ನಿರಾಕರಿಸಿದ್ದಾಳೆ.
ವರನ ಸಂಬಂಧಿಕರು ಹಾಗೂ ಸ್ನೇಹಿತರು ವಧು ಪ್ರಿಯಾಂಕಾಳ ಮನವೊಲಿಸಲು ಪ್ರಯತ್ನಿಸಿದರಾದ್ರೂ ಆಕೆ ತನ್ನ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ವಧುವಿನ ತಂದೆಯೂ ಕೂಡ ಮಗಳ ನಿರ್ಧಾರವನ್ನು ಬೆಂಬಲಿಸಿದ್ದಾರೆ. ವರ ಮಾಡಿದ ಕೆಲಸದಿಂದ ನಿಜಕ್ಕೂ ಮುಜುಗರ ಅನುಭವಿಸಬೇಕಾಯ್ತು. ಆದ್ದರಿಂದ ನಾನು ನನ್ನ ಮಗಳ ಪರ ನಿಲ್ಲಬೇಕಾಯ್ತು ಎಂದು ಅವರು ಹೇಳಿದ್ದಾರೆ.
ಕೊನೆಗೆ ಪ್ರಿಯಾಂಕಾ ಮರುದಿನವೇ ಬೇರೊಬ್ಬ ವ್ಯಕ್ತಿಯೊಂದಿಗೆ ವಿವಾಹವಾಗಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…