ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ. ಈ ಹಿನ್ನಲೆಯಲ್ಲಿ ಮೊಬೈಲ್ ಮೂಲಕವೇ ಆಧಾರ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಡುವ ಪ್ರಯತ್ನ ಇದಾಗಿದೆ.

ಕೇಂದ್ರ ಸರಕಾರವೂ ತನ್ನ ಎಲ್ಲಾ ಸೇವೆಗಳನ್ನು ಪಡೆದುಕೊಳ್ಳುವ ಸಲುವಾಗಿ ಆಧಾರ್ ಪಡೆಯುವುದನ್ನು ಕಡ್ಡಾಯ ಮಾಡುವುದರೊಂದಿಗೆ ಈಗಾಗಲೇ ಪಡೆದುಕೊಂಡಿರುವ ಸೇವೆಗಳಿಗೂ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡುತ್ತಿದೆ. ಇದೇ ಮಾದರಿಯಲ್ಲಿ ಮೊಬೈಲ್ ನಂಬರ್ ನೊಂದಿಗೆ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡುತ್ತಿದೆ.

ಆಧಾರ್ ಲಿಂಕ್ ಮಾಡಲು:-
ಮೊಬೈಲ್ ಸಂಖ್ಯೆಯನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ನೀವು ಎಲ್ಲಿಯೂ ಹೋಗಬೇಕಾದ ಅವಶ್ಯಕತೆ ಇಲ್ಲ. ಇದಕ್ಕಾಗಿ ನಿಮ್ಮ ಮೊಬೈಲ್ ನಿಂದ ಒಂದು ಕರೆಯನ್ನು ಮಾಡಬೇಕಾಗದೆ ಅಷ್ಟೆ. 14546 ಸಂಖ್ಯೆಗೆ ಕರೆ ಮಾಡಬೇಕಾಗಿದ್ದು, ಇದು ಉಚಿತ ಸೇವೆಯಾಗಿದೆ.

ಹಂತ 01:-
ನಿಮ್ಮ ಫೋನಿಂದ 14546 ಸಂಖ್ಯೆಗೆ ಕರೆಯನ್ನು ಮಾಡಬೇಕಾಗಿದೆ. ಮಾಡಿದ ನಂತರದಲ್ಲಿ IVR ದ್ವನಿಯೂ ಕೇಳುವವರೆಗೂ ಕಾಯಬೇಕಾಗಿದೆ.

ಹಂತ 02:-
ನಿಮ್ಮ ಕರೆಯೂ ಕನೆಕ್ಟ್ ಆದ ನಂತರದಲ್ಲಿ ನೀವು ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬೆಕಾಗಿದೆ. ಅಲ್ಲಿ ಹೇಳುವ ಮಾದರಿಯಲ್ಲಿ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ.

ಹಂತ 04:-
ಇದಾದ ನಂತರದಲ್ಲಿ ನಿಮ್ಮ ಆಧಾರ್ ಸಂಖ್ಯೆಯನ್ನು ಎಂಟ್ರಿ ಮಾಡುವಂತೆ ತಿಳಿಸಲಾಗುತ್ತದೆ. ನಂತರ ನಿಮ್ಮ ಆಧಾರ್ ಸಂಖ್ಯೆಯನ್ನು ಎಂಟ್ರಿ ಮಾಡಿರಿ. ಹೀಗೆ ಮಾಡಿದ ನಂತರಲ್ಲಿ ಟೆಲಿಕಾಂ ಆಪರೇಟರ್ ನಿಮ್ಮ ಆಧಾರ್ ಮಾಹಿತಿಯನ್ನು UIDAIಗೆ ವೆರಿಫಿಕೇಷನ್ಗೆ ವರ್ಗಾಹಿಸುತ್ತದೆ.

ಹಂತ 05:-

ಇದಾದ ನಂತರದಲ್ಲಿ ಟೆಲಿಕಾಂ ಆಪರೇಟರ್ ನಿಮಗೊಂದು OTPಯನ್ನು ಕಳುಹಿಸಲಿದ್ದು, ನೀವು ಕರೆಯಲ್ಲಿ ಇರುವ ಸಂದರ್ಭದಲ್ಲಿಯೇ ಈ OTPಯನ್ನು ಡಯಲ್ ಮಾಡಬೇಕಾಗಿದೆ. ಹೀಗೆ ಮಾಡಿದ ನಂತರದಲ್ಲಿ ನಿಮ್ಮ ಮೊಬೈಲ್ ಲಿಂಕ್ ಆಗಿರುದಕ್ಕೆ ಧೃಡೀಕರಣ SMS ಬರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್ಪರ್ಟ್ಸ್. ಇದು…
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !