ಸುದ್ದಿ

ನಿಮ್ಮ ಬಳಿ ಪಾನ್ ಕಾರ್ಡ್ ಇದೆಯಾ ಅಗಾದರೆ ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡಿ..,!

97

ಪಾನ್ ಕಾರ್ಡ್‌ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್‌ ಜೊತೆ ಪಾನ್‌ ಕಾರ್ಡ್‌ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ.

ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ.

ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ ಭರ್ತಿ ಮಾಡಬೇಕು. ಬಳಿಕ ಕ್ಯಾಪ್ಚಾ ಕೋಡ್ ನಮೂದಿಸಿ ‘ಲಿಂಕ್ ಆಧಾರ್’ ಎಂಬುದನ್ನು ಕ್ಲಿಕ್ ಮಾಡಿದರೆ ಸಾಕು.

ಇನ್ನು ಎಸ್ಎಂಎಸ್ ಮೂಲಕವೂ ಲಿಂಕ್ ಮಾಡಬಹುದು. ಆಧಾರ್ ಕಾರ್ಡ್‌ಗೆ ರಿಜಿಸ್ಟರ್ಡ್ ಆದ ನಂಬರ್ ಇರುವ ಫೋನ್‌ನಲ್ಲಿ UIDPAN ಎಂದು ಟೈಪ್ ಮಾಡಿ ಸ್ಪೇಸ್ ಕೊಟ್ಟು 12 ಡಿಜಿಟ್ ಆಧಾರ್ ನಂಬರ್ ನಮೂದಿಸಿ ಸ್ಟೇಸ್ ಕೊಟ್ಟು 10 ಡಿಜಿಟ್ ಪಾನ್ ನಂಬರ್ ನಮೂದಿಸಬೇಕು. ಬಳಿಕ ಅದನ್ನು 567678 ಗೆ ಎಸ್ಎಂಎಸ್ ಮಾಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ