ಉಪಯುಕ್ತ ಮಾಹಿತಿ, ಸೌಂದರ್ಯ

ನಿಮ್ಮ ಸೌಂದರ್ಯ ಮತ್ತು ಆರೋಗ್ಯಕ್ಕಾಗಿ ಲೋಳೆಸರ(ಅಲೋವೇರ)ದ ಈ 15 ಅದ್ಭುತ ಪ್ರಯೋಜನಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

11062

ಲೋಳೆಸರ, ಇದು  ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ

 

ಆಯುರ್ವೇದದಲ್ಲಿ ಬಹಳ ಬೇಡಿಕೆಯಿರುವ ಅಲೊವೆರಾ ಅಥವಾ ಲೋಳೆಸರ ಗಿಡದಲ್ಲಿ ಅಮಿನೊ ಆಸಿಡ್, ವಿಟಮಿನ್‍ಗಳಾದ ಎ, ಎಫ್, ಸಿ ಮತ್ತು ಬಿ ಹೇರಳವಾಗಿವೆ.


ಇದರ ವೈಜ್ಞಾನಿಕ ಹೆಸರು ಆಲೋವೇರ. ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಔಷಧೀಯ ಗುಣಗಳಿವೆ ಇದರ ಎಲೆಗಳು ಲೋಳೆ ಹೊಂದಿರುವುದರಿಂದ ಲೋಳೆಸರವೆಂದು ಕನ್ನಡದಲ್ಲಿ ಕರೆಯುವರು. ಗಟ್ಟಿ ಸಸ್ಯವಾದುದರಿಂದ ಮತ್ತು ಕಹಿ ಗುಣವನ್ನು ಹೊಂದಿರುವುದರಿಂದ ಕೀಟಗಳ ಹಾವಳಿ ಕಡಿಮೆ ಎಂದೇ ಹೇಳಬಹುದು. ಲೋಳೆಸರವನ್ನು ಬಹಳ ಹಿಂದಿನಿಂದಲೂ ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಇದರಿಂದ ಸಾಬೂನು, ಕ್ರೀಮ್ ಶಾಂಪೂ ತಯಾರಿಸುತ್ತಾರೆ.

 

ಲೋಳೆಸರದ ಉಪಯೋಗಗಳು :-

  • ಆಸಿಡಿಟಿ ಸಮಸ್ಯೆ ಇರುವವರು ಲೋಳೆಸರದ ದ್ರವವನ್ನು ಬೆಳಿಗ್ಗೆ ಹೊತ್ತು ಖಾಲಿ ಹೊಟ್ಟೆಯಲ್ಲಿ ಸೇವಿಸುತ್ತಾ ಬಂದರೆ ಸಮಸ್ಯೆ ಕಡಿಮೆಯಾಗುತ್ತದೆ.
  • ಅಕಸ್ಮಾತ್ತಾಗಿ ಸುಟ್ಟಗಾಯಗಳಾದರೆ ತಕ್ಷಣ ರಸವನ್ನು ಹಚ್ಚುವುದರಿಂದ ತಣ್ಣಗಾಗುತ್ತದೆ ಮತ್ತು ಬೊಬ್ಬೆಗಳು ಬರುವುದಿಲ್ಲ.
  • ಲೋಳೆಯನ್ನು ತಲೆಗೆ ಹಚ್ಚಿಕೊಂಡು ಅರ್ಧ ಗಂಟೆಯ ಸ್ನಾನ ಮಾಡುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ ಮತ್ತು ತಲೆಯ ಹೊಟ್ಟು ಕೂಡ ಕಡಿಮೆಯಾಗುತ್ತದೆ.

 

  • ತಿರುಳನ್ನು ಸೇವಿಸಿದರೆ ಮೂಲವ್ಯಾಧಿ, ಜಠರದ ಹುಣ್ಣು ಗುಣವಾಗುತ್ತದೆ.
  • ಎಲೆಗಳನ್ನು ಒಣಗಿಸಿ ಚೂರ್ಣ ತಯಾರಿಸಿಕೊಂಡು ಅದಕ್ಕೆ ಕೋಳಿಮೊಟ್ಟೆಯ ಬಿಳಿಭಾಗವನ್ನು ಸೇರಿಸಿ ಕೂದಲಿಗೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ಸ್ನಾನಮಾಡುವುದರಿಂದ ಕೂದಲು ಮೃದುವಾಗುತ್ತದೆ ಮತ್ತು ಹೊಳಪು ಬರುತ್ತದೆ.
  • ತಿರುಳನ್ನು ಹಣೆಗೆ ಹಚ್ಚಿಕೊಂಡು ಒಂದು ಬಟ್ಟೆ ಕಟ್ಟಿಕೊಂಡು ಅರ್ಧಗಂಟೆ ವಿಶ್ರಾಂತಿ ತೆಗೆದುಕೊಂಡರೆ ತಲೆನೋವು ಗುಣವಾಗುತ್ತದೆ.

  • ಎಲೆಯಚೂರ್ಣ ಒಂದು ಚಮಚ, ತ್ರಿಫಲಾಚೂರ್ಣ ಮತ್ತು ಬಿಸಿನೀರು ಸೇರಿಕೊಂಡು ಕುಡಿಯುವುದರಿಂದ ಮಲವಿಸರ್ಜನೆ ಸರಿಯಾಗುತ್ತದೆ.
  • ಲೋಳೆಸರದ ರಸವನ್ನು ಶೇವಿಂಗ್ ಕ್ರೀಮಾಗಿ ಬಳಸುವುದರಿಂದ ಚರ್ಮ ಮೃದುವಾಗುತ್ತದೆ.
  • ಚರ್ಮರೋಗಕ್ಕೆ ಉತ್ತಮ ಔಷಧ.
  • ಬೆಡ್ ಸೋರ್ ಅಂದರೆ ಮಲಗಿ ಮಲಗಿ ಅಲ್ಲಲ್ಲಿ ಗಾಯಗಳಾಗಿ ಚರ್ಮ ಕಿತ್ತುಹೋಗುತ್ತದೆ. ಆ ಸಮಯದಲ್ಲಿ ತಿರುಳಿನ ರಸವನ್ನು ಹಚ್ಚಿದರೆ ಒಣಗುತ್ತದೆ.

  • ಶರೀರದಲ್ಲಿ ಊತವಿದ್ದ ಭಾಗಗಳಿಗೆ ರಸವನ್ನು ಹಚ್ಚುವುದರಿಂದ ಕ್ರಮೇಣ ಊತ ಕಮ್ಮಿಯಾಗುತ್ತದೆ.
  • ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖದ ಭಂಗು ಹೋಗುತ್ತದೆ.
  • ಲೋಳೆರಸವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

  • ಲೋಳೆರಸದಲ್ಲಿ ಮೆಂತ್ಯವನ್ನು ಎರಡು ದಿನ ನೆನೆಸಿ ನಂತರ ಮೊಳಕೆ ಬರಿಸಿ ಒಣಗಿಸಿ ಪುಡಿ ಮಾಡಿ ಕೊಬ್ಬರಿ ಎಣ್ಣೆಗೆ ಹಾಕಿಡಿ. ಪ್ರತಿನಿತ್ಯ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ನೆತ್ತಿ ತಂಪಾಗುತ್ತದೆ ಮತ್ತು ಕೂದಲು ಮೃದುವಾಗಿ, ಕಪ್ಪಾಗಿ ಸೊಂಪಾಗಿ ಬೆಳೆಯುತ್ತದೆ.
  • ದೇಹದಲ್ಲಿ ಕೊಬ್ಬು ಸಂಗ್ರಹವಾದಾಗ ಇಲ್ಲವೇ ಗರ್ಭಿಣಿ ಮಹಿಳೆಯರಿಗೆ ಹೊಟ್ಟೆಯ ಭಾಗದಲ್ಲಿ ಗೆರೆಗಳು ಉಂಟಾದರೆ ಆ ಭಾಗದಲ್ಲಿ ನಿತ್ಯವೂ ಲೋಳೆಸರವನ್ನು ಹಚ್ಚುತ್ತಾ ಬಂದರೆ ಕೆಲ ದಿನಗಳಲ್ಲಿ ಗೆರೆಗಳು ಮಾಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಪರಮೇಶ್ವರನಿಗೆ ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…

  • ಆರೋಗ್ಯ

    ವಿಟಮಿನ್ ನಮ್ಮ ದೇಹಕ್ಕೆ ಎಷ್ಟೋಂದು ಅವಶ್ಯಕವೆಂಬುದು ನಿಮಗೆ ಗೊತ್ತಾ?ತಿಳಿಯಲು ಈ ಲೇಖನ ಓದಿ..

    ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

  • ಆಧ್ಯಾತ್ಮ

    ನಿಮಗೆ ಯಾರಾದರೂ ಮಾಟ-ಮಂತ್ರ ವಶೀಕರಣ ಮಾಡಿದ್ದಾರೆಯೇ? ಅದನ್ನು ತೆಗೆದು ಹಾಕುವುದು ಹೇಗೆ ಗೊತ್ತೇ? ಇಲ್ಲಿದೆ ಸೂಕ್ತ ಪರಿಹಾರ ತಿಳಿಯಿರಿ ಸುಲಭವಾಗಿ.

    ಗುರುರಾಜ್ ದಿಕ್ಷಿತ್ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9900511168 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9900511168 call/ what ಕೈಯಲ್ಲಿ ಆಗದವರು…

  • ಉದ್ಯೋಗ

    ಸಾಫ್ಟ್ ವೇರ್ ಉದ್ಯೋಗಿಗಳಲ್ಲಿ ಕವಿದ ಆತಂಕದ ಕಾರ್ಮೋಡ!!!

    ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್‌ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್‌ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್‌ನಲ್ಲಿಯೂ ಬೆವರುತ್ತಾನೆ.

  • ಸುದ್ದಿ

    ಎಸ್‌ಬಿಐ ಗ್ರಾಹಕರು ಗಮನಿಸಬೇಕಾದ ವಿಷಯ ; ಅಕ್ಟೋಬರ್ 1 ರಿಂದ ಬದಲಾಗಲಿದೆ ಈ 6 ನಿಯಮ,.!ತಪ್ಪದೇ ತಿಳಿದುಕೊಳ್ಳಿ,.!

    ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್‌ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್‌ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್‌ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್‌ನಿಂದ ಅಕ್ಟೋಬರ್ 1 ರಿಂದ…