ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?ತಿಳಿಯಲು ಈ ಕತೆಯನ್ನು ಓದಿ…

ಮಹಾತ್ಮರಿಗೊಬ್ಬ ಶಿಷ್ಯನಿದ್ದ. ಅವನ ಹೆಸರು ದುಷ್ಟ ಅಂತ. ಆ ಶಿಷ್ಯನಿಗೆ ತನ್ನ ಹೆಸರಿನ ಬಗ್ಗೆ ಅತೀವವಾದ ನೋವಿತ್ತು. ಕೆಟ್ಟ ಕೆಲಸ ಮಾಡದಿದ್ದರೂ ಲೋಕದ ದೃಷ್ಟಿಯಲ್ಲಿ ದುಷ್ಟನಾದೆನಲ್ಲ ಎಂಬ ಕೊರತೆ ಅವನನ್ನು ಕಾಡುತಿತ್ತು. ಒಂದು ದಿನ ಆತ ಗುರುಗಳ ಬಳಿ ಹೋದ. ತನ್ನ ಸಂಕಟವನ್ನು ತೋಡಿಕೊಂಡ. ಗುರುಗಳು ನಕ್ಕು ನುಡಿದರು. ಹೊರಗಿನ ಪ್ರಪಂಚವನ್ನು ಒಮ್ಮೆ ಸುತ್ತಿ ಬಾ. ಯಾರ್ಯಾರ ಹೆಸರು ಹೇಗಿದೆ ಎಂಬುದನ್ನು ತಿಳಿದುಕೊಂಡು ಬಾ ಎಂದರು.
ಗುರುಗಳ ಆಜ್ಞೆಯಂತೆ ಶಿಷ್ಯನು ಲೋಕಸಂಚಾರಕ್ಕೆ ಹೊರಟ. ಮಾರ್ಗಮಧ್ಯೆ ಬಿಕ್ಷುಕನೊಬ್ಬ ಎದುರಾದ. ಅವನೋ ದಟ್ಟದರಿದ್ರ ಆದರೆ ಅವನ ಹೆಸರು ಮಾತ್ರ ಶ್ರೀಮಂತನೆಂದಾಗಿತ್ತು. ಮರುದಿನ ಅವನಿಗೆ ದಾರಿಯಲ್ಲಿ ಅಳುತ್ತಿದ್ದ ಯುವಕನೊಬ್ಬ ಎದುರಾದ. ಯಾಕಯ್ಯಾ ಅಳುತ್ತಿದ್ದೀಯಾ? ಎಂದು ಪ್ರಶಿಸಿದ ಆ ಶಿಷ್ಯ. ನನಗೆ ವ್ಯಾಪಾರದಲ್ಲಿ ಅತೀವ ನಷ್ಟವಾಯಿತು. ನನ್ನ ಮಗ ತನ್ನೆಲ್ಲಾ ಸಮಯವನ್ನು ಜೂಜಿನಲ್ಲೇ ವ್ಯಯ ಮಾಡುತ್ತಾನೆ. ನನ್ನ ಹೆಂಡತಿಯೂ ಸದಾ ಕಾಯಿಲೆಯಲ್ಲೇ ನರಳುತ್ತಿರುತ್ತಾಳೆ ಎಂದ ಆ ಯುವಕ.
ಆ ಶಿಷ್ಯನೋ ಕುತೂಹಲದಿಂದ ನಿಮ್ಮ ಹೆಸರೇನು ಎಂದು ಪ್ರಶಿಸುತ್ತಾನೆ. ಆ ಯುವಕ ತನ್ನ ಹೆಸರು ಆನಂದ ಎನ್ನುತ್ತಾನೆ. ಅದೇ ದಿನ ಗುರುಗಳ ಶಿಷ್ಯನ ಕಣ್ಮುಂದೆಯೇ ರಾಜಾಜ್ಞೆಯಂತೆ ಒಬ್ಬನನ್ನು ಮರವೊಂದಕ್ಕೆ ನೇಣು ಹಾಕುತ್ತಾರೆ. ಹೀಗೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯ ಹೆಸರೋ ಚಿರಂಜೀವಿ ಎಂತಾಗಿರುತ್ತದೆ.

ದೃತಿಗೆಟ್ಟ ಶಿಷ್ಯ ಗುರುಗಳ ಬಳಿ ಹಿಂದಿರುಗುತ್ತಾನೆ. ಏನಯ್ಯಾ ಶಿಷ್ಯ ದಾರಿಯಲ್ಲಿ ಯಾವ್ಯಾವ ಹೆಸರಿನವರನ್ನು ಸಂಧಿಸಿದೆ? ಯಾರಾ ಹೆಸರನ್ನು ಇಟ್ಟುಕೊಳ್ಳಲು ಬಯಸುತ್ತೀಯಾ ಎಂದು ಗುರುಗಳು ಪ್ರಶ್ನೆ ಮಾಡುತ್ತಾರೆ.
ಇಲ್ಲಾ ಗುರುಗಳೇ ನಾನೀಗ ಮನಸ್ಸು ಬದಲಿಸಿಕೊಂಡಿದ್ದೇನೆ. ಕೇವಲ ಹೆಸರನ್ನು ಇಟ್ಟುಕೊಳ್ಳುವುದರಿಂದ ಏನೂ ಪ್ರಯೋಜನವಿಲ್ಲ. ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ ಎಂದ.
ಇದರಿಂದ ನಾವು ಕಲಿಯುವುದೇನಂದ್ರೆ, ನಮ್ಮ ಜೀವನದ ಆಗು ಹೋಗುಗಳಿಗೆ ನಮ್ಮ ಹೆಸರೇ ಕಾರಣ ಅಲ್ಲವೆಂದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.
ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…