ಸುದ್ದಿ

ನಿವೃತ್ತಿ ವಯಸ್ಸಿನ ಗೊಂದಲಗಳಿಗೊಂದು ತೆರೆ : ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ…..!

46

ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು.

ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ನಿವೃತ್ತಿ ವಯಸ್ಸನ್ನು ಇಳಿಕೆ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದೆ.

ಕೇಂದ್ರ ಸರ್ಕಾರದ ಹೆಚ್ಚಿನ ಸೇವೆಗಳಲ್ಲಿ 60 ವರ್ಷ ನಿವೃತ್ತಿ ವಯಸ್ಸು ಇದೆ. ಪ್ರಾಧ್ಯಾಪಕರು ಮತ್ತು ವೈದ್ಯರಿಗೆ 65 ವರ್ಷ ನಿವೃತ್ತಿ ವಯಸ್ಸು ನಿಗದಿಪಡಿಸಲಾಗಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ ನಿಯಮದಲ್ಲಿ ಬದಲಾವಣೆ ಮಾಡಿದ್ದು 33 ವರ್ಷ ಸೇವೆ ಪೂರ್ಣಗೊಳಿಸಿದವರು ಅಥವಾ 60 ವರ್ಷದ ನೌಕರರನ್ನು ನಿವೃತ್ತಿಗೊಳಿಸುತ್ತದೆ. ಇದರಲ್ಲಿ ಯಾವುದು ಮೊದಲು ಅದನ್ನು ಕಾರ್ಯಗತಗೊಳಿಸಲಿದೆ ಎಂದು ಹೇಳಲಾಗಿತ್ತು.

ಆದರೆ,ವರದಿಯ ಪ್ರಕಾರ ಅಂತಹ ಯಾವುದೇ ಪ್ರಸ್ತಾಪ ಸಲ್ಲಿಕೆ,ಯಾಗಿಲ್ಲ. ಈ ಕುರಿತಾಗಿ ಎಂದಿಗೂಚರ್ಚೆಯಾಗಿಲ್ಲ. ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ನಿವೃತ್ತಿ ಕುರಿತಾದ ವಿಚಾರದಲ್ಲಿ ಯಾವುದೇಬದಲಾವಣೆ ತರುವ ಅಗತ್ಯವಿಲ್ಲ. ಕೇಂದ್ರ ಸರ್ಕಾರಿ ನೌಕರರ ಸೇವೆಯನ್ನು ಯಥಾ ರೀತಿಮುಂದುವರೆಸಲಾಗುತ್ತದೆ ಎಂದು ಹೇಳಲಾಗಿದೆ. ಸೆಪ್ಟೆಂಬರ್ 30 ರೊಳಗೆ ಕೇಡರ್ ಮತ್ತು ಅಧಿಕಾರಿಗಳಖಾಲಿ ಹುದ್ದೆಗಳ ಪಟ್ಟಿ ನೀಡುವಂತೆ ಎಲ್ಲಾ ಸಚಿವಾಲಯಗಳನ್ನು ಕೇಂದ್ರ ಸರ್ಕಾರ ಕೇಳಿದ್ದುನಿವೃತ್ತಿಯ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮಾಡ್ರನ್ ಬೇಸಾಯ

    ನೀವ್ ಕೂಡ ಹಣಬೆಯನ್ನು ಬೆಳೆದು ಉತ್ತಮ ಲಾಭಗಳಿಸಬಹುದು!ಹಾಗಾದ್ರೆ ಹಣಬೆ ಬೆಳೆಯುವುದು ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.

  • ಸುದ್ದಿ

    ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ,…ಏನೆಂದು ತಿಳಿಯಿರಿ?

    ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…

  • ವಿಸ್ಮಯ ಜಗತ್ತು

    30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿರುವ ಮಹಿಳೆ..!

    ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್‍ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…

  • ಸುದ್ದಿ

    ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಸಚಿವ. ಈ ಸುದ್ದಿ ನೋಡಿ.!

    ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…

  • ಸುದ್ದಿ

    ಮೋದಿ ಅಧಿಕಾರಕ್ಕೆ ಬಂದ ನಂತರ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ…!

    ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…

  • ಉಪಯುಕ್ತ ಮಾಹಿತಿ

    ಪದೇ ಪದೇ ಫೋನ್ ಹ್ಯಾಂಗ್ ಆಗುತ್ತಿದ್ದರೆ ಈ ಒಂದು ಕೆಲಸ ಮಾಡಿ ಸಾಕು.!

    ಹೆಚ್ಚಿನ ಜನರು ಫೋನ್ ಹ್ಯಾಂಗ್‌ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್‌ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್‌ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್‌ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…